Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:3 - ಪರಿಶುದ್ದ ಬೈಬಲ್‌

3 ಆಗ ಯೆಹೋವನು ಯೆಶಾಯನಿಗೆ, “ನೀನೂ ನಿನ್ನ ಮಗನಾದ ಶೆಯಾರ್ ಯಾಶೂಬನೂ ಆಹಾಜನ ಬಳಿಗೆ ಹೋಗಿ ಮಾತನಾಡಬೇಕು. ನೀರು ಮೇಲಿನ ಕೊಳಕ್ಕೆ ಸೇರುವ ಸ್ಥಳಕ್ಕೆ ಹೋಗು. ಇದು ಅಗಸನ ಹೊಲಕ್ಕೆ ಹೋಗುವ ಮಾರ್ಗದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಸರ್ವೇಶ್ವರಸ್ವಾಮಿ ಯೆಶಾಯನಿಗೆ ಹೀಗೆಂದರು : “ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಆಹಾಜಾರಸನನ್ನು ಕಾಣಲುಹೋಗು. ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದಲ್ಲಿ ಕೆರೆಯ ಕಾಲುವೆಯ ತುದಿಯ ಬಳಿ ಆತ ನಿನಗೆ ಸಿಕ್ಕುವನು. ಅವನಿಗೆ ಈ ಪ್ರಕಾರ ತಿಳಿಸು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು - ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲಿವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೋವ ದೇವರು ಯೆಶಾಯನಿಗೆ, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಳ್ಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:3
14 ತಿಳಿವುಗಳ ಹೋಲಿಕೆ  

ಅಶ್ಶೂರದ ರಾಜನಾದ ಸನ್ಹೇರೀಬನು ತನ್ನ ಸೇನಾದಂಡನಾಯಕನನ್ನು ಒಂದು ದೊಡ್ಡ ಸೈನ್ಯದೊಡನೆ ಜೆರುಸಲೇಮಿನಲ್ಲಿದ್ದ ಅರಸನಾದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಸೇನಾದಂಡನಾಯಕ ತನ್ನ ಸೈನ್ಯದೊಡನೆ ಲಾಕೀಷಿನಿಂದ ಜೆರುಸಲೇಮಿಗೆ ಹೊರಟನು. ಅವರು ಮೇಲಿನ ಕೊಳದ ಬಳಿಯಲ್ಲಿರುವ ನೀರುಕಾಲುವೆಯ ಬಳಿ ನಿಂತರು. ಮೇಲಿನ ಕೊಳವು ಅಗಸರ ಬಯಲಿಗೆ ಹೋಗುವ ಮಾರ್ಗದಲ್ಲಿದೆ.


ಅಶ್ಶೂರದ ರಾಜ ಜೆರುಸಲೇಮಿನಲ್ಲಿದ್ದ ರಾಜನಾದ ಹಿಜ್ಕೀಯನ ಬಳಿಗೆ ತನ್ನ ಮೂವರು ಮಹಾಸೇನಾಧಿಪತಿಗಳಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಮಹಾಸೈನ್ಯದೊಂದಿಗೆ ಕಳುಹಿಸಿದನು. ಅವರು ಲಾಕೀಷಿನಿಂದ ಜೆರುಸಲೇಮಿಗೆ ಹೋದರು. ಅವರು ಮೇಲಿನ ಕೆರೆಯ ನೀರಿನ ಕೊಳವೆಯ ಬಳಿ ನಿಂತರು. (ಮೇಲಿನ ಕೆರೆಯು ರಸ್ತೆಯ ಮೇಲೆ ದೋಭಿಘಾಟ್ ಬಳಿಯಿತ್ತು.)


ಇದಲ್ಲದೆ ಯೆಶಾಯನು ಇಸ್ರೇಲಿನ ಬಗ್ಗೆ ಕೂಗಿ ಹೇಳಿದ್ದಾನೆ: “ಸಮುದ್ರ ತೀರದ ಮರಳಿನಂತೆ ಇಸ್ರೇಲರು ಅಸಂಖ್ಯಾತವಾಗಿರುವರು. ಆದರೆ ಆ ಜನರಲ್ಲಿ ಕೆಲವರು ಮಾತ್ರ ರಕ್ಷಣೆ ಹೊಂದುವರು.


ಆದರೆ ದೇಶದಲ್ಲಿ ಹತ್ತನೆ ಒಂದು ಭಾಗದಷ್ಟು ಜನರು ಮಾತ್ರ ಉಳಿಯುವರು. ಇವರು ನಾಶವಾಗುವುದಿಲ್ಲ. ಯಾಕೆಂದರೆ ಇವರು ಯೆಹೋವನ ಬಳಿಗೆ ಹಿಂತಿರುಗಿ ಬಂದವರು. ಇವರು ಓಕ್ ಮರದಂತಿರುವರು. ಆ ಮರವು ಕಡಿಯಲ್ಪಟ್ಟರೂ ಅದರ ಬುಡವು ಹಾಗೆಯೇ ಉಳಿಯುವದು. ಈ ಕಾಂಡದ ಬುಡವು ಬಹು ವಿಶೇಷವಾದ ಬೀಜವಾಗಿರುವದು ಮತ್ತು ಅದು ಪುನಃ ಬೆಳೆಯುವುದು.


ಯೆಹೋವನು ಹೇಳಿದನು: “ಯೆರೆಮೀಯನೇ, ರಾಜನ ಅರಮನೆಗೆ ಹೋಗು. ಯೆಹೂದದ ರಾಜನ ಬಳಿಗೆ ಹೋಗಿ ಅಲ್ಲಿ ಈ ಸಂದೇಶವನ್ನು ಸಾರು.


ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.


ಯಾಕೋಬನ ಮನೆತನದಲ್ಲಿ ಅಳಿದುಳಿದವರು ಪರಾಕ್ರಮಿಯಾದ ದೇವರನ್ನು ಮತ್ತೆ ಅನುಸರಿಸತೊಡಗುವರು.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಹಿಜ್ಕೀಯನು ಮಾಡಿದ ಇತರ ಎಲ್ಲಾ ಮಹಾಕಾರ್ಯಗಳನ್ನೂ ಅವನು ನಗರಕ್ಕೆ ಕೆರೆಯಿಂದ ಕೊಳವೆಗಳ ಮೂಲಕ ನೀರಿನ ವ್ಯವಸ್ಥೆಮಾಡಿದ್ದನ್ನೂ ಬರೆಯಲಾಗಿದೆ.


ಮುಂಜಾನೆ ಅವನು ನದಿಗೆ ಹೋಗುವನು. ಸರ್ಪವಾಗಿ ಮಾರ್ಪಾಟಾದ ಊರುಗೋಲನ್ನು ತೆಗೆದುಕೊಂಡು ನದಿಯ ತೀರಕ್ಕೆ ಹೋಗಿ ಅವನನ್ನು ಭೇಟಿಯಾಗಿ ಅವನಿಗೆ,


ಅಜ್ಬೂಕನ ಮಗನಾದ ನೆಹೆಮೀಯನು ಗೋಡೆಯ ಮುಂದಿನ ಭಾಗವನ್ನು ಕಟ್ಟಿದನು. ಇವನು ಬೇತ್ಚೂರ್ ಜಿಲ್ಲೆಯ ಅರ್ಧಭಾಗಕ್ಕೆ ಅಧಿಕಾರಿಯಾಗಿದ್ದನು. ದಾವೀದನ ಸಮಾಧಿಯ ತನಕ ಗೋಡೆಯನ್ನು ಮುಂದುವರಿಸಿ ವೀರರ ಮನೆಗಳ ತನಕ ಕಟ್ಟಿದನು.


ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ರಾಜನಾಗಿದ್ದ ಹದಿನೇಳನೆಯ ವರ್ಷದಲ್ಲಿ ಯೋತಾಮನ ಮಗನಾದ ಅಹಾಜನು ಯೆಹೂದದ ರಾಜನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು