ಯೆಶಾಯ 7:6 - ಪರಿಶುದ್ದ ಬೈಬಲ್6 ಅವರು, “ನಾವು ಹೋಗಿ ಯೆಹೂದಕ್ಕೆ ವಿರುದ್ಧವಾಗಿ ಯುದ್ಧ ಮಾಡೋಣ. ಯೆಹೂದ ರಾಜ್ಯವನ್ನು ನಾವಿಬ್ಬರೂ ಭಾಗ ಮಾಡಿಕೊಳ್ಳೋಣ ಮತ್ತು ಟಾಬೇಲನ ಮಗನನ್ನು ಯೆಹೂದದ ಹೊಸ ಅರಸನಾಗಿ ಮಾಡೋಣ ಎಂದು ಮಾತಾಡಿಕೊಳ್ಳುತ್ತಿದ್ದಾರೆ.”’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ನಾವು ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ, ಒಳಗೆ ನುಗ್ಗಿಕೊಂಡು ಹೋಗಿ, ಅದರಲ್ಲಿ ಟಬೇಲನ ಮಗನನ್ನು ಅರಸನನ್ನಾಗಿ ನೇಮಿಸಿಕೊಳ್ಳೋಣ” ಎಂದುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ‘ಜುದೇಯ ನಾಡಿಗೆ ಮುತ್ತಿಗೆ ಹಾಕಿ, ಅದನ್ನು ಬೆದರಿಸಿ ಆಕ್ರಮಿಸಿಕೊಳ್ಳೋಣ; ತೆಬೇಲನ ಮಗನಿಗೆ ಅಲ್ಲಿಯೇ ಪಟ್ಟಕಟ್ಟೋಣ’ ಎಂದು ದುರಾಲೋಚನೆ ಮಾಡಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ ಒಳಗೆ ನುಗ್ಗಿಕೊಂಡು ಹೋಗಿ ಅದರಲ್ಲಿ ಟಾಬೇಲನ ಮಗನಿಗೆ ಪಟ್ಟಕಟ್ಟೋಣವೆಂದುಕೊಂಡದ್ದರಿಂದ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ, ಅದನ್ನು ವ್ಯಥೆಪಡಿಸಿ, ಅದರಲ್ಲಿ ನಮಗಾಗಿ ಮಾಡಿಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ, ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೆಯೇಲನ ಮಗನನ್ನು ನೇಮಿಸಿಕೊಳ್ಳೋಣ,” ಎಂದುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಜನರೆಲ್ಲರೂ ಹೊಸರಾಜನು ತಮ್ಮ ಮಾತಿಗೆ ಕಿವಿಗೊಡಲಿಲ್ಲವೆಂಬುದನ್ನು ನೋಡಿದರು. ಆದ್ದರಿಂದ ಜನರೆಲ್ಲರೂ ರಾಜನಿಗೆ, “ದಾವೀದನ ಕುಟುಂಬದಲ್ಲಿ ನಾವೆಲ್ಲರೂ ಭಾಗಿಗಳೇ? ಇಲ್ಲ! ಇಷಯನ ಭೂಮಿಯಲ್ಲಿ ನಮಗೇನಾದರೂ ಪಾಲು ಸಿಕ್ಕುತ್ತದೆಯೇ? ಇಲ್ಲ! ಇಸ್ರೇಲರೇ, ನಮ್ಮ ಮನೆಗಳಿಗೆ ನಾವು ಹೋಗೋಣ ನಡೆಯಿರಿ. ದಾವೀದನ ಮಗನು ತನ್ನ ಜನರನ್ನು ತಾನೇ ಆಳಲಿ!” ಎಂದು ಹೇಳಿದರು. ಇಸ್ರೇಲಿನ ಜನರೆಲ್ಲರೂ ಮನೆಗಳಿಗೆ ಹೋದರು.
ಯೆಹೋಷೆಬಳು ರಾಜನಾದ ಯೋರಾಮನ ಮಗಳಾಗಿದ್ದಳು ಮತ್ತು ಅಹಜ್ಯನ ಸೋದರಿಯಾಗಿದ್ದಳು. ಯೆಹೋವಾಷನು ರಾಜನ ಮಕ್ಕಳಲ್ಲಿ ಒಬ್ಬನಾಗಿದ್ದನು. ಅತಲ್ಯಳು ಇತರ ಮಕ್ಕಳನ್ನು ಕೊಲ್ಲುವಾಗ ಯೆಹೋಷೆಬಳು ಯೆಹೋವಾಷನನ್ನು ತೆಗೆದುಕೊಂಡು ಹೋದಳು. ಅವಳು ಯೆಹೋವಾಷನನ್ನು ಮತ್ತು ಅವನ ದಾದಿಯನ್ನು ತನ್ನ ಮಲಗುವ ಕೊಠಡಿಯಲ್ಲಿ ಅಡಗಿಸಿದಳು. ಯೆಹೋವಾಷನನ್ನು ಅವನ ದಾದಿಯು ಮತ್ತು ಯೆಹೋಷೆಬಳು ಅತಲ್ಯಳಿಂದ ತಪ್ಪಿಸಿ ಅಡಗಿಸಿಟ್ಟರು. ಈ ರೀತಿ ಯೆಹೋವಾಷನನ್ನು ಕೊಲ್ಲಲಾಗಲಿಲ್ಲ.
ಆಹಾಜನು ಪಾಪಮಾಡಿದ್ದರಿಂದ ದೇವರು ಅರಾಮ್ಯರನ್ನು ಅವನ ವಿರುದ್ಧವಾಗಿ ಕಳುಹಿಸಿ ಅವನು ಸೋತು ಹೋಗುವಂತೆ ಮಾಡಿದನು. ಅವರಲ್ಲಿ ಬಹುಮಂದಿ ಸೆರೆಹಿಡಿಯಲ್ಪಟ್ಟರು. ಅರಾಮ್ಯರ ಅರಸನು ಅವರನ್ನೆಲ್ಲಾ ದಮಸ್ಕಕ್ಕೆ ಒಯ್ದನು. ಇಸ್ರೇಲರ ಅರಸನಾದ ಪೆಕಹನು ಬಂದು ಆಹಾಜನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಪೆಕಹನ ತಂದೆಯ ಹೆಸರು ರೆಮಲ್ಯ. ಪೆಕಹನೂ ಅವನ ಸೈನ್ಯವೂ ಯೆಹೂದ ಸೈನಿಕರಲ್ಲಿ ಒಂದೇ ದಿವಸದಲ್ಲಿ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಧೈರ್ಯಶಾಲಿ ಸೈನಿಕರನ್ನು ಕೊಂದರು. ಯೆಹೂದದ ಜನರನ್ನು ಪೆಕಹನು ಸೋಲಿಸಿದನು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿಧೇಯರಾಗಲು ನಿರಾಕರಿಸಿದರು.