Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:8 - ಪರಿಶುದ್ದ ಬೈಬಲ್‌

8 ದಮಸ್ಕದಲ್ಲಿ ರೆಚೀನನು ಅರಸನಾಗಿರುವಷ್ಟು ಸಮಯ ಅದು ನಡೆಯದು. ಎಫ್ರಾಯೀಮ್ (ಇಸ್ರೇಲ್) ಈಗ ಒಂದು ದೇಶವಾಗಿದೆ. ಆದರೆ ಇನ್ನು ಅರವತ್ತೈದು ವರ್ಷಗಳೊಳಗೆ ಎಫ್ರಾಯೀಮ್ ಒಂದು ದೇಶವಾಗಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕಾರಣ, ರಾಜಧಾನಿಯಾದ ದಮಸ್ಕಸ್ಸಿಗಿಂತ ಸಿರಿಯ ಹೆಚ್ಚಲ್ಲ, ರಾಜನಾದ ರೆಚೀನನಿಗಿಂತ ದಮಸ್ಕಸ್‍ ಹೆಚ್ಚಲ್ಲ. ಇಸ್ರಯೇಲಿನ ಬಗ್ಗೆ ಹೇಳುವುದಾದರೆ, ಅದು ಅರವತ್ತೈದು ವರ್ಷದೊಳಗೆ ನುಚ್ಚುನೂರಾಗುವುದು, ಅಖಂಡ ರಾಷ್ಟ್ರವಾಗಿ ಉಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅರಾವಿುಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನನಷ್ಟೆ; ಎಫ್ರಾಯೀವಿುಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನೇ ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ, ದಮಸ್ಕವು ಸಿರಿಯಾದ ರಾಜಧಾನಿ ಮತ್ತು ದಮಸ್ಕದ ತಲೆಯು ರೆಚೀನ ಮಾತ್ರ, ಅರವತ್ತೈದು ವರುಷಗಳೊಳಗೆ ಎಫ್ರಾಯೀಮರು ರಾಷ್ಟ್ರವಾಗದೆ ಭಂಗಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:8
12 ತಿಳಿವುಗಳ ಹೋಲಿಕೆ  

ಆ ರಾತ್ರಿ ಅವನು ಮತ್ತು ಅವನ ಸೇವಕರು ಹಠಾತ್ತನೆ ಶತ್ರುಗಳನ್ನು ಎದುರಿಸಿ ಸೋಲಿಸಿದರು; ದಮಸ್ಕಕ್ಕೆ ಉತ್ತರದಲ್ಲಿರುವ ಹೋಬಾದವರೆಗೂ ಹಿಂದಟ್ಟಿದರು.


ಯಾಕೆಂದರೆ ಆ ಮಗನು ಅಪ್ಪಾ, ಅಮ್ಮಾ ಎಂದು ಕರೆಯಲು ತೊಡಗುವ ಮೊದಲೇ ದೇವರು ದಮಸ್ಕ ಮತ್ತು ಸಮಾರ್ಯದ ಎಲ್ಲಾ ಐಶ್ವರ್ಯವನ್ನು ತೆಗೆದು ಅದನ್ನು ಅಶ್ಶೂರದ ಅರಸನಿಗೆ ಕೊಡುವನು” ಎಂದು ಹೇಳಿದನು.


ಬಳಿಕ ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಅರಾಮ್ಯರು ದಾವೀದನ ಸೇವಕರಾದರು ಮತ್ತು ಅವನಿಗೆ ಕಾಣಿಕೆಗಳನ್ನು ತಂದರು. ದಾವೀದನು ಹೋದ ಸ್ಥಳಗಳಲ್ಲೆಲ್ಲ ಯೆಹೋವನು ಜಯವನ್ನು ಉಂಟುಮಾಡಿದನು.


ಆಗ ಎಫ್ರಾಯೀಮಿನಲ್ಲಿರುವ (ಇಸ್ರೇಲಿನಲ್ಲಿರುವ) ಪ್ರತಿಯೊಬ್ಬನೂ, ಸಮಾರ್ಯದ ನಾಯಕರೂ, ದೇವರು ತಮ್ಮನ್ನು ಶಿಕ್ಷಿಸಿದ್ದಾನೆಂದು ತಿಳಿದುಕೊಳ್ಳುವರು. ಅವರು ಬಹು ಗರ್ವಿಷ್ಠರಾಗಿ ಹೆಚ್ಚಳಪಡುತ್ತಿದ್ದಾರೆ. ಅವರು ಹೇಳುವುದೇನೆಂದರೆ,


ಹೀಗೆ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಯುದ್ಧ ಮಾಡುವವರನ್ನು ಕಂಡುಹಿಡಿಯುವನು. ಯೆಹೋವನು ರೆಚೀನನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸುವನು.


ಈ ಸಂದೇಶವು ದಮಸ್ಕ ನಗರದ ಕುರಿತಾಗಿದೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಹೆದರಿಕೊಂಡಿವೆ. ಅವು ಕೆಟ್ಟ ಸಮಾಚಾರವನ್ನು ಕೇಳಿದ್ದರಿಂದ ಹೆದರಿಕೊಂಡಿವೆ. ಅವುಗಳು ನಿರಾಶೆಗೊಂಡಿವೆ. ಅವು ಆತಂಕಪಡುತ್ತಿವೆ ಮತ್ತು ಭಯಪಡುತ್ತಿವೆ.


ದಮಸ್ಕವೂ ನಿನ್ನ ಒಳ್ಳೆಯ ಗಿರಾಕಿಯಾಗಿತ್ತು. ನೀನು ಸಂಪಾದಿಸಿಕೊಂಡಿದ್ದ ಅನೇಕ ಒಳ್ಳೆಯ ವಸ್ತುಗಳಿಗಾಗಿ ಅವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ಹೆಲ್ಬೋನಿನ ದ್ರಾಕ್ಷಾರಸವನ್ನು ಮತ್ತು ಉಣ್ಣೆಯನ್ನು ಆ ವಸ್ತುಗಳಿಗಾಗಿ ಮಾರಿದರು.


“ಎಫ್ರಾಯೀಮ್ ಇಸ್ರೇಲರೊಳಗೆ ತನ್ನನ್ನು ತಾನೇ ಮುಖ್ಯಸ್ಥನನ್ನಾಗಿ ಮಾಡಿಕೊಂಡನು. ಎಫ್ರಾಯೀಮನು ಮಾತನಾಡಿದಾಗ ಜನರು ಹೆದರಿ ನಡುಗಿದರು. ಆದರೆ ಅವನು ಪಾಪದಲ್ಲಿ ಬಿದ್ದನು. ಬಾಳನನ್ನು ಪೂಜಿಸಲು ಪ್ರಾರಂಭಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು