ಯೆಶಾಯ 8:11 - ಪರಿಶುದ್ದ ಬೈಬಲ್11 ಯೆಹೋವನು ತನ್ನ ಮಹಾಶಕ್ತಿಯಿಂದ ನನ್ನೊಡನೆ ಮಾತನಾಡಿದನು. ನಾನು ಇತರರಂತೆ ಇರಬಾರದೆಂದು ಯೆಹೋವನು ನನ್ನನ್ನು ಎಚ್ಚರಿಸಿದನು. ಆತನು ನನಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು, ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ನನಗೆ ಉಪದೇಶಿಸುತ್ತಾ ಹೀಗೆಂದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಜನರು ಅನುಸರಿಸುವ ಮಾರ್ಗದಲ್ಲಿ ನಾನು ನಡೆಯಬಾರದೆಂದು ಸರ್ವೇಶ್ವರ ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು ಎಚ್ಚರಿಕೆ ಇತ್ತರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ನನಗೆ ಉಪದೇಶಿಸುತ್ತಾ ಹೀಗಂದನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾನು ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ಯೆಹೋವ ದೇವರು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು ನನಗೆ, ಅಧ್ಯಾಯವನ್ನು ನೋಡಿ |
ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.
ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನಾನು ನಿನ್ನನ್ನು ದಂಡಿಸುವುದಿಲ್ಲ. ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನೀನು ನನ್ನ ಸೇವೆ ಮಾಡಬಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ ನೀನು ನನ್ನ ಪರವಾಗಿ ಮಾತನಾಡಬಹುದು. ಯೆರೆಮೀಯನೇ, ಯೆಹೂದದ ಜನರು ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು.