ಯೆಶಾಯ 8:13 - ಪರಿಶುದ್ದ ಬೈಬಲ್13 “ಸರ್ವಶಕ್ತನಾದ ಯೆಹೋವನೊಬ್ಬನಿಗೇ ನೀನು ಭಯಪಡಬೇಕು. ಆತನನ್ನೇ ನೀನು ಗೌರವಿಸಬೇಕು. ನೀನು ಭಯಪಡಬೇಕಾದದ್ದು ಆತನೊಬ್ಬನಿಗೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೆ ಹೆದರಿಕೊಳ್ಳಿರಿ, ನಡುಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸೇನಾಧೀಶ್ವರ ಸ್ವಾಮಿಯಾದ ನಾನು ಪವಿತ್ರನೆಂದು ಎಣಿಸಿ ನನಗೆ ಭಯಭಕ್ತಿಯಿಂದ ಸನ್ಮಾನಮಾಡು, ನನಗೆ ಹೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೇ ಹೆದರಿಕೊಳ್ಳಿರಿ, ನಡುಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸೇನಾಧೀಶ್ವರ ಯೆಹೋವ ದೇವರನ್ನೇ ಪ್ರತಿಷ್ಠೆ ಪಡಿಸಿಕೊಳ್ಳಿರಿ; ನೀವು ಭಯಪಡಬೇಕಾದುದು ಅವರಿಗೇ, ನೀವು ಹೆದರಬೇಕಾಗಿರುವುದು ಅವರಿಗೇ. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷ ವಾಸಸ್ಥಾನವಾಗಿ ಯಾವ ಸ್ಥಳವನ್ನು ಆರಿಸಿಕೊಳ್ಳುತ್ತಾನೋ ಆ ಸ್ಥಳಕ್ಕೆ ನೀವು ಹೋಗಬೇಕು. ನಿಮ್ಮ ದೇವರಾದ ಯೆಹೋವನ ಜೊತೆಯಲ್ಲಿರುವುದಕ್ಕಾಗಿ ನೀವು ಅಲ್ಲಿಗೆ ಹೋಗಬೇಕು. ಆ ಸ್ಥಳದಲ್ಲಿ, ನೀವು ಬೆಳೆಯುವ ಬೆಳೆಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಧಾನ್ಯಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಹೊಸ ದ್ರಾಕ್ಷಾರಸವನ್ನು, ನಿಮ್ಮ ಎಣ್ಣೆಯನ್ನು, ನಿಮ್ಮ ಹಿಂಡುಗಳ ಮತ್ತು ಮಂದೆಗಳ ಚೊಚ್ಚಲು ಪಶುಗಳನ್ನು ಯೆಹೋವನ ಪ್ರಸನ್ನತೆಯಲ್ಲಿ ತಿನ್ನಬೇಕು. ನಿಮ್ಮ ದೇವರಾದ ಯೆಹೋವನನ್ನು ಗೌರವಿಸಬೇಕೆಂಬುದನ್ನು ನೀವು ಯಾವಾಗಲೂ ಈ ರೀತಿಯಲ್ಲಿ ಜ್ಞಾಪಕ ಮಾಡಿಕೊಳ್ಳುವಿರಿ.
ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”
ಸೌಲನು ಒಂದು ಜೊತೆ ಹಸುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ ಆ ತುಂಡುಗಳನ್ನು ಸಂದೇಶಕರಿಗೆ ಕೊಟ್ಟನು. “ಇಸ್ರೇಲಿನ ನಾಡಿನಲ್ಲೆಲ್ಲಾ ಈ ತುಂಡುಗಳನ್ನು ತೆಗೆದುಕೊಂಡು ಹೋಗಿ ಅವರಿಗೆ, ‘ಸೌಲನನ್ನೂ ಮತ್ತು ಸಮುವೇಲನನ್ನೂ ಹಿಂಬಾಲಿಸಿರಿ, ಸೌಲನನ್ನು ಮತ್ತು ಸಮುವೇಲನನ್ನು ಯಾರು ಹಿಂಬಾಲಿಸುವುದಿಲ್ಲವೋ, ಯಾರು ಅವರಿಗೆ ಸಹಾಯ ಮಾಡುವುದಿಲ್ಲವೋ ಅಂತಹವರ ಹಸುಗಳಿಗೂ ಇದೇ ಗತಿಯಾಗುತ್ತದೆ’ ಎಂದು ತಿಳಿಸಿರಿ” ಎಂದನು. ಯೆಹೋವನ ಮೇಲೆ ಜನರಲ್ಲಿ ಹೆಚ್ಚು ಭಯವುಂಟಾಯಿತು. ಅವರೆಲ್ಲಾ ಒಂದೇ ಮನಸ್ಸಿನಿಂದ ಒಟ್ಟಾಗಿ ಸೇರಿ ಬಂದರು.