ಯೆಶಾಯ 8:14 - ಪರಿಶುದ್ದ ಬೈಬಲ್14 ನೀನು ಯೆಹೋವನನ್ನು ಪರಿಶುದ್ಧನೆಂದು ಪರಿಗಣಿಸಿ ಗೌರವಿಸಿದರೆ, ಆತನು ನಿನಗೆ ಆಶ್ರಯನಾಗುವನು. ಆದರೆ ನೀನು ಆತನನ್ನು ಸನ್ಮಾನಿಸದೆ ಹೋದರೆ ಆತನು ನಿನಗೆ ಮುಗ್ಗರಿಸುವ ಕಲ್ಲಾಗಿ ಪರಿಣಮಿಸುವನು. ಆತನು ಇಸ್ರೇಲಿನ ಎರಡು ಕುಟುಂಬಗಳವರಿಗೆ ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿರುವನು. ಯೆಹೋವನು ಜೆರುಸಲೇಮಿನ ಎಲ್ಲಾ ಜನರನ್ನು ಹಿಡಿಯುವ ಬಲೆಯಾಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಪಂಜರವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾನು ನಿನಗೆ ಪವಿತ್ರಾಲಯ ಆಗಿರುವೆನು. ಆದರೆ ಇಸ್ರಯೇಲಿನ ಎರಡು ಕುಲಗಳಿಗೆ ಎಡವುವ ಕಲ್ಲಾಗುವೆನು, ಮುಗ್ಗರಿಸುವ ಬಂಡೆಯಾಗುವೆನು. ಜೆರುಸಲೇಮಿನ ನಿವಾಸಿಗಳನ್ನು ಹಿಡಿಯುವ ಬಲೆಯೂ ಬೋನೂ ಆಗುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಯೆರೂಸಲೇವಿುನ ನಿವಾಸಿಗಳಿಗೆ ಬಲೆಯೂ ಬೋನೂ ಆಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರೇ ನಿಮಗೆ ಪರಿಶುದ್ಧ ಸ್ಥಳವಾಗಿರುವರು. ಆದರೆ ಇಸ್ರಾಯೇಲ್ ಮತ್ತು ಯಹೂದ ಎರಡು ಮನೆಗಳಿಗೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ, ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಬೋನೂ ಆಗಿರುವರು. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.
“ಒಳ್ಳೆಯವನು ತನ್ನ ಒಳ್ಳೆಯತನವನ್ನು ತೊರೆದು ಕೆಟ್ಟದ್ದನ್ನು ಮಾಡಿದರೆ, ನಾನು ಅವನ ಹಾದಿಗೆ ತಡೆಯನ್ನು ಹಾಕಿ ಅವನು ಬೀಳುವಂತೆ ಮಾಡುವೆನು; ಅವನು ಸಾಯುವನು. ನೀನು ಅವನನ್ನು ಎಚ್ಚರಿಸಲಿಲ್ಲವಾದ್ದರಿಂದ ಅವನು ತನ್ನ ಪಾಪದ ನಿಮಿತ್ತ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೆ ಹೊಣೆಗಾರನನ್ನಾಗಿ ಮಾಡುತ್ತೇನೆ. ಜನರು ಅವನ ಒಳ್ಳೆಯ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.