ಯೆಶಾಯ 8:16 - ಪರಿಶುದ್ದ ಬೈಬಲ್16 ಯೆಹೋವನು, “ಒಡಂಬಡಿಕೆ ಮಾಡಿಕೊಂಡು ಅದಕ್ಕೆ ಮುದ್ರೆಹಾಕು. ಮುಂದಿನ ಪೀಳಿಗೆಗಾಗಿ ನನ್ನ ಬೋಧನೆಯನ್ನು ಜೋಪಾನವಾಗಿರಿಸು. ನನ್ನ ಹಿಂಬಾಲಕರ ಕಣ್ಣೆದುರಿನಲ್ಲೇ ಹೀಗೆ ಮಾಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಬೋಧನೆಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ದಿವ್ಯಬೋಧನೆಯನ್ನು ಸುಭದ್ರವಾಗಿ ಇರಿಸು. ಅದನ್ನು ನನ್ನ ಶಿಷ್ಯರಿಗೆ ಉಪದೇಶಮಾಡಿ ಸುರಕ್ಷಿತವಾಗಿರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಬೋಧನೆಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ದೇವರ ಶಿಕ್ಷಣವನ್ನು ಮುದ್ರಿಸು. ಅಧ್ಯಾಯವನ್ನು ನೋಡಿ |
“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.