Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:20 - ಪರಿಶುದ್ದ ಬೈಬಲ್‌

20 ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:20
29 ತಿಳಿವುಗಳ ಹೋಲಿಕೆ  

ಪ್ರವಾದಿಗಳು ಹೇಳಿದ ಸಂಗತಿಗಳನ್ನು ಇದು ನಮಗೆ ಮತ್ತಷ್ಟು ಖಚಿತಪಡಿಸಿತು. ಅವರು ಹೇಳಿದ್ದನ್ನು ನೀವು ಚಾಚು ತಪ್ಪದೆ ಅನುಸರಿಸುವುದು ಒಳ್ಳೆಯದೇ ಸರಿ. ಅವರು ಹೇಳಿದ ಸಂಗತಿಗಳು ಅಂಧಕಾರದಲ್ಲಿ ಪ್ರಕಾಶಿಸುವ ಬೆಳಕಿನಂತಿವೆ. ನಿಮ್ಮ ಹೃದಯಗಳಲ್ಲಿ ಹಗಲು ಆರಂಭವಾಗಿ, ಮುಂಜಾನೆಯ ನಕ್ಷತ್ರವು ಮೂಡುವವರೆಗೂ ಆ ಬೆಳಕು ಪ್ರಕಾಶಿಸುತ್ತದೆ.


ಜನರು ತಮ್ಮನ್ನು ಜ್ಞಾನಿಗಳೆಂದು ಹೇಳಿಕೊಂಡು ಮೂರ್ಖರಾದರು.


ನೀವು ಪವಿತ್ರ ಗ್ರಂಥವನ್ನು ಜಾಗ್ರತೆಯಿಂದ ಅಧ್ಯಯನ ಮಾಡುತ್ತೀರಿ. ಆ ಪವಿತ್ರ ಗ್ರಂಥವು ನಿಮಗೆ ನಿತ್ಯಜೀವವನ್ನು ಕೊಡುತ್ತದೆ ಎಂಬುದು ನಿಮ್ಮ ಆಲೋಚನೆ. ಅದೇ ಪವಿತ್ರ ಗ್ರಂಥವು ನನ್ನ ಬಗ್ಗೆ ತಿಳಿಸುತ್ತದೆ!


ಈ ಯೆಹೂದ್ಯರು ಥೆಸಲೋನಿಕದ ಯೆಹೂದ್ಯರಿಗಿಂತಲೂ ಉತ್ತಮರಾಗಿದ್ದರು. ಪೌಲ ಸೀಲರು ಹೇಳಿದ ಸಂಗತಿಗಳನ್ನು ಇವರು ಬಹಳ ಸಂತೋಷದಿಂದ ಕೇಳಿದರು. ಮತ್ತು ಈ ಸಂಗತಿಗಳು ನಿಜವೇ ಎಂಬುದನ್ನು ತಿಳಿದುಕೊಳ್ಳಲು ಪವಿತ್ರ ಗ್ರಂಥವನ್ನು ಪ್ರತಿದಿನವೂ ಅಧ್ಯಯನ ಮಾಡಿದರು.


“ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.


“ಹೀಗಿರುವದರಿಂದ ನಿಮಗೆ ರಾತ್ರಿಯಂತಿರುವದು. ನಿಮಗೆ ದರ್ಶನಗಳಾಗುವದಿಲ್ಲ. ಮುಂದೆ ಏನು ಸಂಭವಿಸುತ್ತದೆ ಎಂಬುದನ್ನು ನೀವು ನೋಡುವದಿಲ್ಲ. ಆದ್ದರಿಂದ ನಿಮಗೆ ಕತ್ತಲೆಯಂತಿದೆ. ಪ್ರವಾದಿಗಳಿಗೆ ಸೂರ್ಯನು ಮುಳುಗಿರುತ್ತಾನೆ. ಅವರಿಗೆ ಮುಂದೆ ಆಗುವಂಥದು ಕಾಣಿಸುವುದಿಲ್ಲ. ಆದ್ದರಿಂದ ಅವರಿಗೆ ಎಲ್ಲಾ ಕತ್ತಲೆಯಾಗಿದೆ.


ಆ “ಜ್ಞಾನಿಗಳು” ಯೆಹೋವನ ಉಪದೇಶವನ್ನು ಕೇಳಲು ಒಪ್ಪಲಿಲ್ಲ. ಆದ್ದರಿಂದ ಅವರು ನಿಜವಾದ ಜ್ಞಾನಿಗಳಲ್ಲವೇ ಅಲ್ಲ. ಆ “ಜ್ಞಾನಿಗಳು” ಸಿಕ್ಕಿಹಾಕಿಕೊಂಡಿದ್ದಾರೆ. ಅವರು ಗಾಬರಿಪಟ್ಟಿದ್ದಾರೆ ಮತ್ತು ನಾಚಿಕೆಪಟ್ಟಿದ್ದಾರೆ. ಅವರ ಜ್ಞಾನವು ಅಪ್ರಯೋಜಕವಾಗಿದೆ.


ಯೆಹೋವನು, “ಒಡಂಬಡಿಕೆ ಮಾಡಿಕೊಂಡು ಅದಕ್ಕೆ ಮುದ್ರೆಹಾಕು. ಮುಂದಿನ ಪೀಳಿಗೆಗಾಗಿ ನನ್ನ ಬೋಧನೆಯನ್ನು ಜೋಪಾನವಾಗಿರಿಸು. ನನ್ನ ಹಿಂಬಾಲಕರ ಕಣ್ಣೆದುರಿನಲ್ಲೇ ಹೀಗೆ ಮಾಡು” ಎಂದು ಹೇಳಿದನು.


ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು.


ಜನರು ನಿನ್ನ ವಾಕ್ಯವನ್ನು ಅರ್ಥಮಾಡಿಕೊಂಡಾಗ ಅದು ಅವರಿಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿರುವುದು. ನಿನ್ನ ವಾಕ್ಯವು ಸಾಮಾನ್ಯರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.


ಆದರೆ ಇವು ಯಾವನಲ್ಲಿ ಇರುವುದಿಲ್ಲವೋ ಅವನು ಸ್ಪಷ್ಟವಾಗಿ ನೋಡಲಾರನು. ಅವನು ಕುರುಡನಾಗಿದ್ದಾನೆ; ತಾನು ಶುದ್ಧನಾದದ್ದನ್ನು ಮರೆತವನಾಗಿದ್ದಾನೆ.


ಯೇಸು, “ನೀವು ತಪ್ಪಾಗಿ ತಿಳಿದುಕೊಂಡಿರಲು ಕಾರಣವೇನೆಂದರೆ, ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ತಿಳಿದಿಲ್ಲ ಮತ್ತು ದೇವರ ಶಕ್ತಿಯ ಬಗ್ಗೆಯೂ ನಿಮಗೆ ಗೊತ್ತಿಲ್ಲ.


ಆದರೆ ನಿನ್ನ ಕಣ್ಣು ಕೆಟ್ಟಿದ್ದರೆ, ನಿನ್ನ ಶರೀರವೆಲ್ಲ ಕತ್ತಲೆಯಿಂದ (ಪಾಪದಿಂದ) ತುಂಬಿರುವುದು. ನಿನ್ನಲ್ಲಿರುವ ಒಂದೇ ಬೆಳಕು ನಿಜವಾಗಿಯೂ ಕತ್ತಲಾದರೆ, ಆಗ ನೀನು ಕಗ್ಗತ್ತಲಲ್ಲಿರುವೆ.


ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.”


ಸೊದೋಮಿನ ಅಧಿಪತಿಗಳೇ, ಯೆಹೋವನ ಸಂದೇಶವನ್ನು ಕೇಳಿರಿ. ಗೊಮೋರದ ಜನರೇ, ಆತನ ಉಪದೇಶವನ್ನು ಕೇಳಿರಿ.


ಯೇಸು ಅವನಿಗೆ, “ಧರ್ಮಶಾಸ್ತ್ರದಲ್ಲಿ ಇದರ ಕುರಿತು ಏನು ಬರೆದಿದೆ?” ಎಂದು ಕೇಳಿದನು.


ಆತನು ಯಾಕೋಬನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಇಸ್ರೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಆತನು ನಮ್ಮ ಪೂರ್ವಿಕರಿಗೆ ಆಜ್ಞೆಗಳನ್ನು ಕೊಟ್ಟನು. ನಿಮ್ಮ ಸಂತತಿಗಳವರಿಗೆ ಧರ್ಮಶಾಸ್ತ್ರವನ್ನು ಉಪದೇಶಿಸಿರಿ ಎಂದು ಆತನು ನಮ್ಮ ಪೂರ್ವಿಕರಿಗೆ ಹೇಳಿದನು.


ತಮ್ಮ ದೇಶದಲ್ಲಿ ಸುತ್ತಲೂ ನೋಡುವಾಗ ಕೇವಲ ಸಂಕಟಗಳೇ ಕುಗ್ಗಿಸುವ ಕಾರ್ಗತ್ತಲೆಗಳೇ ಕಾಣಿಸುವವು. ಆ ದುಃಖವು ಅವರನ್ನು ದೇಶದಿಂದ ತೊಲಗಿಸಿಬಿಡುವುದು. ಕಾರ್ಗತ್ತಲೆಯಲ್ಲಿ ಸಿಕ್ಕಿಬಿದ್ದ ಜನರಿಗೆ ತಮ್ಮನ್ನು ಬಿಡಿಸಿಕೊಳ್ಳಲಾಗುವುದಿಲ್ಲ.


ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.


ಈಗ ನಾವು ದೇವರ ಮುಂದೆ ಅನ್ಯರಾದ ಹೆಂಡತಿಯರನ್ನೂ ಅವರ ಮಕ್ಕಳನ್ನೂ ತೊರೆದುಬಿಡುತ್ತೇವೆಂದು ಒಡಂಬಡಿಕೆ ಮಾಡೋಣ. ಹೀಗೆ ಮಾಡುವುದರಿಂದ ಎಜ್ರನ ಮತ್ತು ದೇವರ ಕಟ್ಟಳೆಗಳನ್ನು ಗೌರವಿಸುವವರ ಸಲಹೆಯನ್ನು ನಾವು ಅನುಸರಿಸುವವರಾಗಿರುತ್ತೇವೆ; ನಾವು ದೇವರ ಕಟ್ಟಳೆಗೆ ವಿಧೇಯರಾಗುತ್ತೇವೆ.


ಯೇಸು, “ಮೋಶೆ ನಿಮಗೆ ಏನು ಆಜ್ಞಾಪಿಸಿದ್ದಾನೆ?” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು