ಯೆಶಾಯ 8:22 - ಪರಿಶುದ್ದ ಬೈಬಲ್22 ತಮ್ಮ ದೇಶದಲ್ಲಿ ಸುತ್ತಲೂ ನೋಡುವಾಗ ಕೇವಲ ಸಂಕಟಗಳೇ ಕುಗ್ಗಿಸುವ ಕಾರ್ಗತ್ತಲೆಗಳೇ ಕಾಣಿಸುವವು. ಆ ದುಃಖವು ಅವರನ್ನು ದೇಶದಿಂದ ತೊಲಗಿಸಿಬಿಡುವುದು. ಕಾರ್ಗತ್ತಲೆಯಲ್ಲಿ ಸಿಕ್ಕಿಬಿದ್ದ ಜನರಿಗೆ ತಮ್ಮನ್ನು ಬಿಡಿಸಿಕೊಳ್ಳಲಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಕಾಶವನ್ನು ದಿಟ್ಟಿಸಿ ನೋಡಿದರೂ ಭೂಮಿಯನ್ನು ದುರುಗುಟ್ಟಿ ನೋಡಿದರೂ ಅವರಿಗೆ ಕಾಣುವುದು ಕಷ್ಟಸಂಕಟಗಳ ಕತ್ತಲೆ, ಭಯಂಕರವಾದ ಕಾಳಗತ್ತಲೆಯಲ್ಲದೆ ಮತ್ತೇನೂ ಅಲ್ಲ. ಅಂಥ ಕರಾಳ ಕತ್ತಲೆಯೊಳಗೆ ಅವರನ್ನು ದೂಡಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಮೇಲಕ್ಕೆ ಕಣ್ಣೆತ್ತಿದರೂ ಭೂವಿುಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವವು; ಕಾರ್ಗತ್ತಲೆಗೆ ತಳ್ಳಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವರು ಭೂಮಿಯನ್ನು ದೃಷ್ಟಿಸಿದರೂ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು, ಕಾರ್ಗತ್ತಲೆಗೆ ಅವರನ್ನು ದೂಡಲಾಗುವುದು. ಅಧ್ಯಾಯವನ್ನು ನೋಡಿ |
ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.