Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:3 - ಪರಿಶುದ್ದ ಬೈಬಲ್‌

3 ಆಮೇಲೆ ನಾನು ಒಬ್ಬ ಪ್ರವಾದಿನಿಯ ಬಳಿಗೆ ಹೋದೆನು. ಆಕೆಯನ್ನು ಕೂಡಲು, ಆಕೆ ಗರ್ಭವತಿಯಾಗಿ ಒಬ್ಬ ಮಗನನ್ನು ಹಡೆದಳು. ಆಗ ಯೆಹೋವನು ನನಗೆ, “‘ಆ ಮಗನಿಗೆ ಮಹೇರ್ ಶಾಲಾಲ್ ಹಾಷ್ ಬಜ್‌’ ಎಂಬ ಹೆಸರನ್ನಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅನಂತರ, “ನಾನು ನನ್ನ ಹೆಂಡತಿಯೊಡನೆ ಸಂಗಮಿಸಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ, ಅದಕ್ಕೆ ‘ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸ್ವಲ್ಪಕಾಲವಾದ ನಂತರ ನಾನು ಪ್ರವಾದಿನಿಯನ್ನು ಕೂಡಲು ಆಕೆ ಗರ್ಭವತಿಯಾಗಿ ಗಂಡುಮಗುವನ್ನು ಹೆತ್ತಳು. ಆಗ ನನಗೆ: “ಆ ಮಗುವಿಗೆ ‘ಮಹೇರ್ ಶಾಲಾಲ್ ಹಾಷ್ ಬಜ್’ ಎಂದು ಹೆಸರಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅನಂತರ ನಾನು ನನ್ನ ಹೆಂಡತಿಯನ್ನು ಕೂಡಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ - ಅದಕ್ಕೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅನಂತರ ನಾನು ಪ್ರವಾದಿನಿಯಾದ ನನ್ನ ಹೆಂಡತಿಯನ್ನು ಕೂಡಲು, ಆಕೆಯು ಗರ್ಭಧರಿಸಿ ಒಬ್ಬ ಗಂಡುಮಗುನ್ನು ಹೆತ್ತಳು. ಆಗ ಯೆಹೋವ ದೇವರು ನನಗೆ, “ಆ ಮಗುವಿಗೆ, ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು, ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:3
6 ತಿಳಿವುಗಳ ಹೋಲಿಕೆ  

ಆದ್ದರಿಂದ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಎಂಬವರು ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋದರು. ಹುಲ್ದಳು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ಶಲ್ಲೂಮನ ಹೆಂಡತಿ. ಅವನು ಯಾಜಕರ ವಸ್ತ್ರಗಳಿಗೆ ಮೇಲ್ವಿಚಾರಕನಾಗಿದ್ದನು. ಹುಲ್ದಳು ಜೆರುಸಲೇಮಿನ ಎರಡನೆಯ ಭಾಗದಲ್ಲಿ ವಾಸಿಸುತ್ತಿದ್ದಳು. ಅವರು ಹೋಗಿ ಹುಲ್ದಳ ಜೊತೆಯಲ್ಲಿ ಮಾತನಾಡಿದರು.


ಆಗ ದೆಬೋರಳೆಂಬ ಒಬ್ಬ ಪ್ರವಾದಿನಿ ಇದ್ದಳು. ಅವಳು ಲಪ್ಪೀದೋತ್ ಎಂಬವನ ಪತ್ನಿಯಾಗಿದ್ದಳು. ಅವಳು ಆಗ ಇಸ್ರೇಲಿನ ನ್ಯಾಯಾಧೀಶೆಯಾಗಿದ್ದಳು.


ಯೆಹೋವನು ಹೇಳಿದ್ದೇನೆಂದರೆ, “ಒಂದು ದೊಡ್ಡ ಸುರುಳಿಯನ್ನು ತಂದು ಅದರ ಮೇಲೆ ಹೀಗೆ ಲೇಖನಿಯಿಂದ ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್‌.’” (ಇದರರ್ಥ: “ಕೊಳ್ಳೆಗೆ ಅವಸರ, ಸೂರೆಗೆ ಆತುರ.”)


ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಪಷ್ಹೂರನಿಗೆ ಹೀಗೆ ಹೇಳಿದನು: “ದೇವರು ನಿನ್ನನ್ನು ಪಷ್ಹೂರ್ ಎಂದು ಹೇಳುವದಿಲ್ಲ. ಈಗ ಯೆಹೋವನು ನಿನಗಿಟ್ಟ ಹೆಸರು, ‘ಪ್ರತಿಯೊಂದು ಭಾಗದಲ್ಲಿಯೂ ಭಯಂಕಾರಿ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು