4 ಯಾಕೆಂದರೆ ಆ ಮಗನು ಅಪ್ಪಾ, ಅಮ್ಮಾ ಎಂದು ಕರೆಯಲು ತೊಡಗುವ ಮೊದಲೇ ದೇವರು ದಮಸ್ಕ ಮತ್ತು ಸಮಾರ್ಯದ ಎಲ್ಲಾ ಐಶ್ವರ್ಯವನ್ನು ತೆಗೆದು ಅದನ್ನು ಅಶ್ಶೂರದ ಅರಸನಿಗೆ ಕೊಡುವನು” ಎಂದು ಹೇಳಿದನು.
4 ಅವನು ‘ಅಪ್ಪಾ, ಅಮ್ಮಾ, ಎಂದು ಕೂಗಬಲ್ಲವನಾಗುವುದರೊಳಗೆ ಅಸ್ಸೀರಿಯದ ಅರಸನು ದಮಸ್ಕಸ್ಸಿನ ಆಸ್ತಿಪಾಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು,” ಎಂದು ಸರ್ವೇಶ್ವರಸ್ವಾಮಿ ಹೇಳಿದರು.
4 ಏಕೆಂದರೆ ಆ ಮಗುವು, ‘ಅಪ್ಪಾ’ ಅಥವಾ ‘ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮುಂಚೆ ಅಸ್ಸೀರಿಯದ ಅರಸನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದರು.
ಆದರೆ ಆ ಇಬ್ಬರು ಗಂಡುಮಕ್ಕಳು ಹುಟ್ಟುವ ಮೊದಲೇ, ದೇವರು ರೆಬೆಕ್ಕಳಿಗೆ, “ಹಿರಿಯವನು ಕಿರಿಯವನ ಸೇವೆ ಮಾಡುವನು” ಎಂದು ಹೇಳಿದನು. ಆ ಬಾಲಕರು ಯಾವ ಒಳ್ಳೆಯದಾಗಲಿ ಕೆಟ್ಟದ್ದಾಗಲಿ ಮಾಡುವ ಮೊದಲೇ ಇದಾಯಿತು. ದೇವರು ಆ ಬಾಲಕನನ್ನು ತನ್ನ ಸ್ವಂತ ಯೋಜನೆಗನುಸಾರವಾಗಿ ಆರಿಸಿಕೊಂಡಿದ್ದರಿಂದ ಆ ಬಾಲಕರು ಹುಟ್ಟುವದಕ್ಕಿಂತ ಮೊದಲೇ ಹೀಗೆ ಹೇಳಿದನು. ದೇವರು ಅವನನ್ನು ಆರಿಸಿಕೊಂಡಿದ್ದರಿಂದ ಅವನನ್ನೇ ಕರೆಯಬೇಕೆಂದಿದ್ದನು. ಆದರೆ ಅದು ಆ ಬಾಲಕರ ಯಾವುದೇ ಕಾರ್ಯಗಳ ಮೇಲೆ ಆಧಾರಗೊಂಡಿರಲಿಲ್ಲ.
ಒಂದು ಗಿಡಕ್ಕಾಗಿ ನೀನು ಇಷ್ಟೊಂದು ದುಃಖಗೊಂಡರೆ, ನಿನೆವೆಯಂತಹ ಇಷ್ಟು ದೊಡ್ಡ ನಗರಕ್ಕಾಗಿ ನನಗೂ ಖಂಡಿತವಾಗಿ ದುಃಖವಾಗುತ್ತದೆ. ಈ ನಗರದಲ್ಲಿ ಅನೇಕಾನೇಕ ಜನರಿದ್ದಾರೆ! ಅನೇಕ ಪ್ರಾಣಿಗಳಿವೆ. ಈ ನಗರದಲ್ಲಿರುವ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಜನರಿಗೆ ತಾವು ತಪ್ಪು ಮಾಡುತ್ತಿರುವುದಾಗಿ ತಿಳಿದಿರಲಿಲ್ಲ” ಅಂದನು.
ಅಶ್ಶೂರದ ರಾಜನಾದ ಶಲ್ಮನೆಸರನು ಹೋಶೇಯನ ವಿರುದ್ಧ ಯುದ್ಧಕ್ಕೆ ಬಂದನು. ಶಲ್ಮನೆಸರನು ಹೋಶೇಯನನ್ನು ಸೋಲಿಸಿದನು. ಆದ್ದರಿಂದ ಹೋಶೇಯನು ಶಲ್ಮನೆಸರನಿಗೆ ಸೇವಕನಾಗಿ ಕಪ್ಪಕಾಣಿಕೆಯನ್ನು ಕೊಟ್ಟನು.
ಅಶ್ಶೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ಆ ನಗರಕ್ಕೆ ಮುತ್ತಿಗೆಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್‌ಗೆ ಒಯ್ದನು. ಅವನು ರೆಚೀನನನ್ನು ಕೊಂದುಹಾಕಿದನು.
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.
ದೇವರಾದ ಯೆಹೋವನು ನಮಗೆ ಹೇಳಿದ್ದೇನೆಂದರೆ: ‘ವೈರಿಗಳ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕಮಕ್ಕಳಿಗೂ ಒಳ್ಳೆಯದು ಮತ್ತು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳಿಗೂ ಆ ದೇಶವನ್ನು ಕೊಡುವೆನು; ಅವರು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.
ದಮಸ್ಕಕ್ಕೆ ಇದು ದುಃಖಕರವಾದ ಸಂದೇಶ. ಯೆಹೋವನು ಹೇಳುವುದೇನೆಂದರೆ, “ದಮಸ್ಕವು ಈಗ ಒಂದು ದೊಡ್ಡ ನಗರವಾಗಿದೆ. ಆದರೆ ಅದು ನಾಶವಾಗುವದು. ಕೆಡವಲ್ಪಟ್ಟ ಕಟ್ಟಡಗಳು ಮಾತ್ರವೇ ದಮಸ್ಕದಲ್ಲಿರುವವು.
ಯೆಹೋವನು ಹೇಳುವುದೇನೆಂದರೆ, “ದಮಸ್ಕದವರು ನಡಿಸಿದ ಅನೇಕ ಅಪರಾಧಗಳ ನಿಮಿತ್ತವಾಗಿ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಯಾಕೆಂದರೆ ಅವರು ಗಿಲ್ಯಾದಿನ ಜನರನ್ನು ಒಕ್ಕಣೆಗೆ ಉಪಯೋಗಿಸುವ ಕಬ್ಬಿಣದ ಸಲಕರಣೆಗಳಿಂದ ಜಜ್ಜಿಬಿಟ್ಟರು.
ಆ ನಗರವು ಬೆಟ್ಟದ ಮೇಲೆ ಕುಳಿತಿದೆ; ಸುತ್ತಲೂ ಫಲವತ್ತಾದ ಕಣಿವೆ ಇದೆ. ಆ ಸುಂದರವಾದ ಪುಷ್ಪ ಕಿರೀಟವು ಕೇವಲ ಒಣಗಿದ ತರಗೆಲೆ. ಆ ನಗರವು ಬೇಸಿಗೆಯ ಮೊದಲಿನ (ಅಂಜೂರದ) ಹಣ್ಣುಗಳಂತೆ ಇದೆ. ಅದನ್ನು ನೋಡಿದವರು ಕೂಡಲೇ ತೆಗೆದುಕೊಂಡು ಬಾಯಿಗೆ ಹಾಕಿಕೊಳ್ಳುವರು.
“ನಾನು ದಮಸ್ಕದ ಹೆಬ್ಬಾಗಿಲುಗಳನ್ನೂ ಒಡೆದುಹಾಕುವೆನು; ಆವೆನ್ ಕಣಿವೆಯಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ತೆಗೆದುಬಿಡುವೆನು; ಬೇತ್ ಎದೆನ್‌ನಲ್ಲಿರುವ ಸಾಮರ್ಥ್ಯದ ಗುರುತನ್ನು ಕಿತ್ತುಹಾಕುವೆನು. ಆಗ ಅರಾಮ್ಯರು ಸೋಲಿಸಲ್ಪಟ್ಟವರಾಗಿ ಕೀರ್ ಎಂಬಲ್ಲಿಗೆ ಕೊಂಡೊಯ್ಯುವರು. ಇದು ಯೆಹೋವನ ನುಡಿ.”