ಯೆಶಾಯ 8:6 - ಪರಿಶುದ್ದ ಬೈಬಲ್6 ನನ್ನ ಒಡೆಯನು ಹೀಗೆಂದನು: “ಈ ಜನರು ನಿಧಾನವಾಗಿ ಹರಿಯುವ ಸಿಲೋವ ಕೊಳದ ನೀರನ್ನು ಸ್ವೀಕರಿಸುವುದಿಲ್ಲ. ಇವರು ರೆಚೀನ್ ಮತ್ತು ರೆಮಲ್ಯನ ಮಗನೊಂದಿಗೆ ಸಂತೋಷದಲ್ಲಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಈ ಜನರು ನಿಧಾನವಾಗಿ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ, ರೆಮಲ್ಯನ ಮಗನನ್ನೂ ನಂಬಿ ಮೆರೆದಿದ್ದರಿಂದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಈ ಜನರು ಸುಲಲಿತವಾಗಿ ಹರಿಯುವ ಸಿಲೋವದ ನೀರನ್ನು ಅಲ್ಲಗಳೆದು, ಅರಸನಾದ ರೆಚೀನ ಹಾಗೂ ಪೆಕಹ ಇವರುಗಳನ್ನು ನೆಚ್ಚಿಕೊಂಡು ನಲಿಯುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ಉಪೇಕ್ಷಿಸಿ ರೆಚೀನನನ್ನೂ ರೆಮಲ್ಯನ ಮಗನನ್ನೂ ನಂಬಿ ಮೆರೆದದ್ದರಿಂದ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ ರೆಮಲ್ಯನ ಮಗನನ್ನೂ ನೆಚ್ಚಿಕೊಂಡು ಮೆರೆದಿದ್ದರಿಂದ, ಅಧ್ಯಾಯವನ್ನು ನೋಡಿ |
ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.