ಯೆಶಾಯ 8:9 - ಪರಿಶುದ್ದ ಬೈಬಲ್9 ಸಮಸ್ತ ಜನಾಂಗಗಳೇ, ಯುದ್ಧಕ್ಕೆ ಸಿದ್ಧರಾಗಿ! ನೀವು ಸೋಲುವಿರಿ. ದೂರದೇಶದವರೇ, ಕೇಳಿರಿ, ರಣರಂಗಕ್ಕಿಳಿಯಲು ಸಿದ್ಧರಾಗಿ! ನೀವು ಸೋಲುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕೂಡಿಬನ್ನಿ ರಾಷ್ಟ್ರಗಳೇ, ತುಂಡುತುಂಡಾಗುವಿರಿ ನೀವು; ಕಿವಿಗೊಡಿ, ದೂರ ದೇಶಗಳೇ, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು; ಹೌದು, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಜನಾಂಗಗಳೇ, ಭಂಗಪಡಿಸಿರಿ, ನೀವೂ ಭಂಗಪಡುವಿರಿ; ದೂರದೇಶೀಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಜನಾಂಗಗಳೇ, ನೀವು ಯುದ್ಧವನ್ನು ಘೋಷಿಸಿರಿ, ಆದರೂ ಚದರಿಹೋಗುವಿರಿ! ಎಲ್ಲಾ ದೂರ ದೇಶದವರೇ ಕಿವಿಗೊಡಿರಿ. ನಡುಕಟ್ಟಿಕೊಳ್ಳಿರಿ, ಆದರೂ ಚದರಿಹೋಗುವಿರಿ! ನಡುಕಟ್ಟಿಕೊಳ್ಳಿರಿ, ಆದರೂ ಚದರಿಹೋಗುವಿರಿ! ಅಧ್ಯಾಯವನ್ನು ನೋಡಿ |
ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.