Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:1 - ಪರಿಶುದ್ದ ಬೈಬಲ್‌

1 ಹಿಂದಿನ ಕಾಲದಲ್ಲಿ, ಜೆಬುಲೋನ್ ಮತ್ತು ನಫ್ತಾಲಿ ಪ್ರಾಂತ್ಯಗಳು ವಿಶೇಷವಾದವುಗಳಲ್ಲ ಎಂದು ಜನರು ತಿಳಿದುಕೊಂಡಿದ್ದರು. ಆದರೆ ಆಮೇಲೆ ಸಮುದ್ರಕ್ಕೆ ಸಮೀಪದಲ್ಲಿರುವ ಪ್ರಾಂತ್ಯ, ಜೋರ್ಡನಿನ ಆಚೆಗಿರುವ ಸ್ಥಳ ಮತ್ತು ಯೆಹೂದ್ಯರಲ್ಲದವರು ವಾಸಿಸುವ ಗಲಿಲಾಯ ಪ್ರಾಂತ್ಯ ಇವುಗಳನ್ನು ಮುಂದೆ ದೇವರು ಮಹಾದೇಶವನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು, ಆತನು ಅವಮಾನಕ್ಕೆ ಗುರಿಮಾಡಿದನು. ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯವನ್ನೆಲ್ಲಾ ಘನಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆದರೂ ಕಷ್ಟಸಂಕಷ್ಟಗಳನ್ನು ಅನುಭವಿಸಿದ ಆ ನಾಡಿಗೆ ಇನ್ನು ಮುಂದೆ ಕತ್ತಲಿರುವುದಿಲ್ಲ. ಒಮ್ಮೆ ಜೆಬುಲೋನ್ ಮತ್ತು ನಪ್ತಾಲಿಯ ಗೋತ್ರಗಳಿಗೆ ಬೀಡಾಗಿದ್ದ ಆ ಪ್ರಾಂತ್ಯವು ಅವಮಾನಕ್ಕೆ ಗುರಿಯಾಗಿತ್ತು. ಆದರೆ ಇನ್ನು ಮುಂದೆ ಅದಕ್ಕೆ ಘನತೆಗೌರವ ಬರುವುದು: ಸಮುದ್ರದ ಹಾದಿಯಿಂದ ಹಿಡಿದು ಜೋರ್ಡನಿನ ಆಚೆಯಲ್ಲಿ ಇರುವ ಪ್ರಾಂತ್ಯದವರೆಗೆ ಮಾತ್ರವಲ್ಲ, ಅನ್ಯಜನರು ಇರುವ ಗಲಿಲೇಯ ಪ್ರಾಂತ್ಯದವರೆಗೂ ಘನತೆಗೌರವ ಬಂದೊದಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿದನು; ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿಗಿರುವ ಗಲಿಲಾಯ ಸೀಮೆ ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದರೂ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬುಲೂನ್ ನಾಡು ಮತ್ತು ನಫ್ತಾಲಿ ನಾಡುಗಳನ್ನು ಅವರು ಅವಮಾನಕ್ಕೆ ಗುರಿಮಾಡಿ, ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಇತರ ಜನರಿರುವ ಗಲಿಲಾಯ ನಾಡು, ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:1
10 ತಿಳಿವುಗಳ ಹೋಲಿಕೆ  

ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.


ತಮ್ಮ ದೇಶದಲ್ಲಿ ಸುತ್ತಲೂ ನೋಡುವಾಗ ಕೇವಲ ಸಂಕಟಗಳೇ ಕುಗ್ಗಿಸುವ ಕಾರ್ಗತ್ತಲೆಗಳೇ ಕಾಣಿಸುವವು. ಆ ದುಃಖವು ಅವರನ್ನು ದೇಶದಿಂದ ತೊಲಗಿಸಿಬಿಡುವುದು. ಕಾರ್ಗತ್ತಲೆಯಲ್ಲಿ ಸಿಕ್ಕಿಬಿದ್ದ ಜನರಿಗೆ ತಮ್ಮನ್ನು ಬಿಡಿಸಿಕೊಳ್ಳಲಾಗುವುದಿಲ್ಲ.


ಇದಕ್ಕೆ ಬೆನ್ಹದದನು ಒಪ್ಪಿ ತನ್ನ ಸೇನಾಪತಿಗಳನ್ನು ಇಸ್ರೇಲಿನ ಪಟ್ಟಣಗಳ ಮೇಲೆ ಆಕ್ರಮಣಮಾಡಲು ಕಳುಹಿಸಿದನು. ಅವರು ಹೋಗಿ ಇಯ್ಯೋನ್, ದಾನ್, ಅಬೇಲ್ಮಯಿಮ್ ಎಂಬ ಪಟ್ಟಣಗಳ ಮೇಲೆಯೂ ಭಂಡಾರಗಳನ್ನು ಇಟ್ಟಿದ ನಫ್ತಾಲಿ ಪ್ರಾಂತ್ಯದ ಎಲ್ಲಾ ಪಟ್ಟಣಗಳ ಮೇಲೆಯೂ ಆಕ್ರಮಣ ಮಾಡಿದರು.


ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.


ನಾನು ನಿಜವಾಗಿ ನನ್ನ ಕೋಪವನ್ನು ತೋರಿಸುವೆನು. ಹೌದು, ನಾನೇ ನಿಮ್ಮ ಪಾಪಗಳಿಗಾಗಿ ನಿಮ್ಮನ್ನು ಏಳರಷ್ಟಾಗಿ ದಂಡಿಸುವೆನು.


ಆಗ ನಾನು ಸಹ ನಿಮಗೆ ವಿರೋಧವಾಗಿ ನಡೆಯುವೆನು. ಹೌದು, ನಾನೇ ನಿಮ್ಮನ್ನು ನಿಮ್ಮ ಪಾಪಗಳಿಗಾಗಿ ಏಳರಷ್ಟಾಗಿ ದಂಡಿಸುವೆನು.


ಬಳಿಕ ಯೇಸು ತನ್ನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದನ್ನೂ ವಿವರಿಸತೊಡಗಿದನು. ಯೇಸುವು ಮೋಶೆಯ ಗ್ರಂಥಗಳಿಂದ ಪ್ರಾರಂಭಿಸಿ ಪ್ರವಾದಿಗಳು ತನ್ನ ಬಗ್ಗೆ ಹೇಳಿದ ವಿಷಯಗಳ ಕುರಿತು ವಿವರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು