10 “ಈ ಇಟ್ಟಿಗೆಗಳು ಕೆಳಗೆ ಬಿದ್ದರೂ ನಾವು ಅವುಗಳನ್ನು ಮತ್ತೆ ಕಟ್ಟುತ್ತೇವೆ. ನಾವು ಅದನ್ನು ಬಲವಾದ ಕಲ್ಲುಗಳಿಂದ ಕಟ್ಟುವೆವು. ಈ ಸಣ್ಣಸಣ್ಣ ಮರಗಳು ಕಡಿದುಹಾಕಲ್ಪಟ್ಟರೂ ಆ ಸ್ಥಳದಲ್ಲಿ ನಾವು ದೇವದಾರು ಮರಗಳನ್ನು ನೆಡುವೆವು. ಆ ದೇವದಾರು ಮರಗಳು ಎತ್ತರವಾಗಿಯೂ ಬಲವಾಗಿಯೂ ಇರುತ್ತವೆ.”
ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.” ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು, “ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ” ಎಂದು ಅನ್ನುವರು.
ಇಸ್ರೇಲರು ರಾಜರ ಅರಮನೆಗಳನ್ನು ಕಟ್ಟಿದರು. ಆದರೆ ಅದರ ನಿರ್ಮಾಣಿಕನನ್ನು ಮರೆತರು. ಯೆಹೂದವು ಕೋಟೆಗಳನ್ನು ಕಟ್ಟುತ್ತಾನೆ; ಆದರೆ ಯೆಹೂದದ ಪಟ್ಟಣಗಳ ಮೇಲೆ ನಾನು ಬೆಂಕಿಯನ್ನು ಕಳುಹಿಸುವೆನು. ಆ ಬೆಂಕಿಯು ಅರಮನೆಗಳನ್ನು ನಾಶಮಾಡುವದು.”
ಅಶ್ಶೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ಆ ನಗರಕ್ಕೆ ಮುತ್ತಿಗೆಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್‌ಗೆ ಒಯ್ದನು. ಅವನು ರೆಚೀನನನ್ನು ಕೊಂದುಹಾಕಿದನು.