Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:11 - ಪರಿಶುದ್ದ ಬೈಬಲ್‌

11 ಹೀಗೆ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಯುದ್ಧ ಮಾಡುವವರನ್ನು ಕಂಡುಹಿಡಿಯುವನು. ಯೆಹೋವನು ರೆಚೀನನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದುದರಿಂದ ಯೆಹೋವನು ರೆಚೀನಿನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸ್ವಾಮಿಯು ರೆಚೀನನ ಶತ್ರುಗಳನ್ನು ಅವರ ವಿರುದ್ಧವಾಗಿ ಎತ್ತಿಕಟ್ಟಿರುವರು. ಅವರ ಮುಂದೆ ಸೀರಿಯರನ್ನು, ಅವರ ಹಿಂದೆ ಫಿಲಿಷ್ಟಿಯರನ್ನು - ಹೀಗೆ ಎಲ್ಲಾ ಶತ್ರುಗಳನ್ನು ಎಬ್ಬಿಸಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ರೆಚೀನನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಹೆಚ್ಚಿಸಿದ್ದಾನೆ; ಅವರ ಮುಂದೆ ಅರಾಮ್ಯರನ್ನು ಅವರ ಹಿಂದೆ ಫಿಲಿಷ್ಟಿಯರನ್ನು ಅಂತು ಅವನ ಶತ್ರುಗಳನ್ನೆಲ್ಲಾ ಎಬ್ಬಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹೀಗಿರುವುದರಿಂದ ಯೆಹೋವ ದೇವರು ರೆಚೀನನ ವೈರಿಗಳನ್ನು ಅವನಿಗೆ ವಿರೋಧವಾಗಿ ಎಬ್ಬಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:11
10 ತಿಳಿವುಗಳ ಹೋಲಿಕೆ  

ದಮಸ್ಕದಲ್ಲಿ ರೆಚೀನನು ಅರಸನಾಗಿರುವಷ್ಟು ಸಮಯ ಅದು ನಡೆಯದು. ಎಫ್ರಾಯೀಮ್ (ಇಸ್ರೇಲ್) ಈಗ ಒಂದು ದೇಶವಾಗಿದೆ. ಆದರೆ ಇನ್ನು ಅರವತ್ತೈದು ವರ್ಷಗಳೊಳಗೆ ಎಫ್ರಾಯೀಮ್ ಒಂದು ದೇಶವಾಗಿರದು.


ಅಶ್ಶೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ಆ ನಗರಕ್ಕೆ ಮುತ್ತಿಗೆಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್‌ಗೆ ಒಯ್ದನು. ಅವನು ರೆಚೀನನನ್ನು ಕೊಂದುಹಾಕಿದನು.


ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.


ಆಹಾಜನು ಯೋಥಾಮನ ಮಗನು. ಯೋಥಾಮನು ಉಜ್ಜೀಯನ ಮಗನು. ರೆಚೀನ್ ಎಂಬವನು ಅರಾಮ್ಯರ ಅರಸನಾಗಿದ್ದನು. ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ಅರಸನಾಗಿದ್ದನು. ಆಗ ಆಹಾಜನು ಯೆಹೂದದ ಅರಸನಾಗಿದ್ದನು. ರೆಚೀನ್ ಮತ್ತು ಪೆಕಹ ಇವರಿಬ್ಬರೂ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟರು. ಆದರೆ ಆ ನಗರವನ್ನು ಸೋಲಿಸಲು ಅವರಿಂದಾಗಲಿಲ್ಲ.


ಆದ್ದರಿಂದ ಯೆಹೋವನು ತನ್ನ ಜನರ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ತನ್ನ ಕೈಗಳನ್ನೆತ್ತಿ ಅವರನ್ನು ಶಿಕ್ಷಿಸುವನು. ಆಗ ಪರ್ವತಗಳೂ ಹೆದರಿಕೊಳ್ಳುವವು; ಹೆಣಗಳು ಕಸದಂತೆ ರಸ್ತೆಗಳಲ್ಲಿ ಬಿದ್ದುಕೊಂಡಿರುವವು. ಆದರೆ ದೇವರು ಅವರ ಮೇಲೆ ಕೋಪಿಸಿಕೊಂಡೇ ಇರುವನು. ಜನರನ್ನು ಶಿಕ್ಷಿಸಲು ಆತನ ಕೈಗಳು ಮೇಲೆತ್ತಲ್ಪಟ್ಟಿರುವವು.


ನೀವು ಕೈದಿಗಳಂತೆ ತಲೆತಗ್ಗಿಸುವಿರಿ, ಸತ್ತಹೆಣಗಳಂತೆ ನೆಲದ ಮೇಲೆ ಬೀಳುವಿರಿ. ಆದರೆ ಅದರಿಂದ ನಿಮಗೆ ಪ್ರಯೋಜನವಾಗದು. ದೇವರು ನಿಮ್ಮ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ನಿಮ್ಮನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.


ಸಮಾರ್ಯದ ಕಡೆಗೆ ನೋಡು! ಎಫ್ರಾಯೀಮಿನ ಮತ್ತರಾದ ಜನರು ಆ ಪಟ್ಟಣದ ಬಗ್ಗೆ ಬಹಳ ಅಭಿಮಾನಪಡುತ್ತಿದ್ದಾರೆ. ಆ ನಗರವು ಪರ್ವತದ ಮೇಲಿರುವುದು; ಅದರ ಸುತ್ತಲೂ ಫಲವತ್ತಾದ ಕಣಿವೆ ಇರುವುದು. ಸಮಾರ್ಯದ ಜನರು ತಮ್ಮ ನಗರವು ಸುಂದರವಾದ ಕಿರೀಟವೆಂದು ನೆನಸುತ್ತಾರೆ. ಆದರೆ ಅವರು ಕುಡಿದು ಮತ್ತರಾಗಿದ್ದಾರೆ. ಅವರ “ಸುಂದರ ಕಿರೀಟವು” ಒಣಗಿದ ತರಗೆಲೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು