ಯೆಶಾಯ 9:12 - ಪರಿಶುದ್ದ ಬೈಬಲ್12 ಯೆಹೋವನು ಪೂರ್ವದಿಂದ ಅರಾಮ್ಯರನ್ನೂ ಪಶ್ಚಿಮದಿಂದ ಫಿಲಿಷ್ಟಿಯರನ್ನೂ ಕರೆತರುವನು. ಆ ಶತ್ರುಗಳು ಇಸ್ರೇಲರನ್ನು ಅವರ ಸೈನ್ಯದೊಂದಿಗೆ ಸೋಲಿಸಿಬಿಡುವರು. ಆದರೆ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡಿರುವುದರಿಂದ ಅವರನ್ನು ಶಿಕ್ಷಿಸಲು ಇನ್ನೂ ಸಿದ್ಧನಾಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇವರು ಇಸ್ರಯೇಲರನ್ನು ನುಂಗಿಬಿಡಲು ಬಾಯಿ ತೆರೆದಿದ್ದಾರೆ. ಇಷ್ಟಾದರೂ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇವರು ಇಸ್ರಾಯೇಲ್ಯರನ್ನು ಬಾಯಿತೆರೆದು ನುಂಗಿದ್ದಾರೆ. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವನ ಶತ್ರುಗಳಾದ ಪೂರ್ವದಿಂದ ಅರಾಮ್ಯರನ್ನು ಮುಂದೆಯೂ, ಪಶ್ಚಿಮದಿಂದ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವರು. ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿಬಿಡುವರು. ಏಕೆಂದರೆ, ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ. ಅಧ್ಯಾಯವನ್ನು ನೋಡಿ |
ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.
ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.