Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:13 - ಪರಿಶುದ್ದ ಬೈಬಲ್‌

13 ದೇವರು ಜನರನ್ನು ಶಿಕ್ಷಿಸಿದರೂ ಅವರು ಪಾಪ ಮಾಡುವದನ್ನು ನಿಲ್ಲಿಸುವದಿಲ್ಲ. ಅವರು ಆತನ ಬಳಿಗೆ ಹಿಂದಿರುಗಿಬರುವದಿಲ್ಲ. ಸರ್ವಶಕ್ತನಾದ ಯೆಹೋವನನ್ನು ಅವರು ಹಿಂಬಾಲಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದರೂ ತಮ್ಮನ್ನು ಶಿಕ್ಷಿಸಿದ ದೇವರಿಗೆ ಇಸ್ರಯೇಲರು ಅಭಿಮುಖರಾಗಲಿಲ್ಲ. ಸೇನಾಧೀಶ್ವರಸ್ವಾಮಿಯನ್ನು ಅರಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೂ ಜನರು ತಮ್ಮನ್ನು ಶಿಕ್ಷಿಸಿದ ದೇವರ ಕಡೆಗೆ ತಿರುಗದೆಯೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕದೆಯೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:13
24 ತಿಳಿವುಗಳ ಹೋಲಿಕೆ  

ಎಫ್ರಾಯೀಮನ ಹೆಮ್ಮೆಯು ಅವನಿಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತದೆ. ಜನರಿಗೆ ನಾನಾ ತರದ ಸಂಕಟಗಳು ಬಂದಾಗ್ಯೂ ಅವರು ತಮ್ಮ ದೇವರಾದ ಯೆಹೋವನ ಬಳಿಗೆ ಹೋಗಲಿಲ್ಲ. ಜನರು ತಮ್ಮ ಸಹಾಯಕ್ಕಾಗಿ ಆತನಿಗೆ ಮೊರೆಯಿಡಲಿಲ್ಲ.


ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.


ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.


ನಾನು ನಿಮ್ಮನ್ನು ಯಾಕೆ ಶಿಕ್ಷಿಸುತ್ತಲೇ ಇರಬೇಕು? ನಾನು ನಿಮ್ಮನ್ನು ಶಿಕ್ಷಿಸಿದೆನು, ಆದರೆ ನೀವು ಬದಲಾಗಲಿಲ್ಲ. ನೀವು ನನಗೆ ವಿರುದ್ಧವಾಗಿ ಏಳುತ್ತಲೇ ಇದ್ದೀರಿ. ಈಗ ಪ್ರತಿಯೊಂದು ತಲೆಯೂ ಪ್ರತಿಯೊಂದು ಹೃದಯವೂ ರೋಗಕ್ಕೆ ಬಲಿಯಾಗಿದೆ.


ಅವರು ದೇವರಲ್ಲದ್ದಕ್ಕೆ ತಿರುಗಿಕೊಂಡರು. ಮೋಸದ ಬಿಲ್ಲಿನಂತೆ ಅವರಾದರು. ಅವರ ನಾಯಕರು ತಮ್ಮ ಶಕ್ತಿಯ ಬಗ್ಗೆ ಹೆಚ್ಚಳಪಟ್ಟರು. ಆದರೆ ಅವರು ಕತ್ತಿಯಲ್ಲಿ ಸಾಯುವರು. ಆಗ ಈಜಿಪ್ಟಿನ ಜನರು ಅವರನ್ನು ನೋಡಿ ನಗಾಡುವರು.


ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು, ತಮ್ಮ ಸಂಕಟದಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.”


“‘ನಿನ್ನ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧಳಾಗುವುದಿಲ್ಲ. ನಿನ್ನನ್ನು ತೊಳೆದು ಕಲೆಗಳನ್ನು ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನ್ನ ಮೇಲಿನ ನನ್ನ ಕೋಪವು ತಣ್ಣಗಾಗುವ ತನಕ ನಾನು ನಿನ್ನನ್ನು ತೊಳೆಯುವುದೇ ಇಲ್ಲ.


ನಾನು ನಿಮಗಾಗಿ ಹಾಕಿದ ಯೋಜನೆಗಳು ನನಗೆ ಗೊತ್ತಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ.” ಇದು ಯೆಹೋವನ ಸಂದೇಶ. “ನಾನು ನಿಮಗಾಗಿ ಒಳ್ಳೆಯ ಯೋಜನೆಗಳನ್ನು ಹಾಕಿದ್ದೇನೆ. ನಿಮಗೆ ಕೆಟ್ಟದ್ದನ್ನು ಮಾಡುವ ವಿಚಾರ ನನಗಿಲ್ಲ. ನಾನು ನಿಮಗಾಗಿ ಆಶಾದಾಯಕವಾದ ಮತ್ತು ಒಳ್ಳೆಯ ಭವಿಷ್ಯದ ವಿಚಾರಗಳನ್ನಿಟ್ಟುಕೊಂಡಿದ್ದೇನೆ.


ಈ ಜನರು ದುಷ್ಕೃತ್ಯಗಳನ್ನು ನಡಿಸಿ ನನಗೆ ಕೋಪವನ್ನೆಬ್ಬಿಸಿದರು. ಆದ್ದರಿಂದ ನಾನು ಇಸ್ರೇಲನ್ನು ಶಿಕ್ಷಿಸಿದೆನು. ನಾನು ಕೋಪಗೊಂಡು ಅವರಿಗೆ ವಿಮುಖನಾದೆನು. ಇಸ್ರೇಲ್ ನನ್ನನ್ನು ತೊರೆದು ತನಗಿಷ್ಟವಾದ ಸ್ಥಳಕ್ಕೆ ಹೋದನು.


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


“ದೇವರ ಬಗ್ಗೆ ಲಕ್ಷಿಸದವರು ಯಾವಾಗಲೂ ಕೋಪದಿಂದಿರುವರು. ದೇವರು ಅವರನ್ನು ದಂಡಿಸಿದರೂ ಅವರು ದೇವರಿಗೆ ಮೊರೆಯಿಡುವುದಿಲ್ಲ.


ಆಹಾಜನಿಗೆ ಸಂಕಟ ಬಂದಾಗಲೂ ಇನ್ನೂ ಹೆಚ್ಚಾಗಿ ಪಾಪ ಮಾಡುತ್ತಾ ಯೆಹೋವನಿಗೆ ಇನ್ನೂ ಹೆಚ್ಚಾಗಿ ದ್ರೋಹಿಯಾದನು.


ಆಗ ನೀವು ನಿಮ್ಮ ದೇವರಾದ ಯೆಹೋವನನ್ನು ಹುಡುಕುವಿರಿ. ನೀವು ನಿಮ್ಮ ಹೃದಯ ಆತ್ಮಗಳಿಂದ ಹುಡುಕಿದಾಗ ಆತನು ನಿಮಗೆ ಸಿಗುವನು.


ಯೆಹೂದದ ಜನರನ್ನು ನಾನು ಕವೆಗೋಲಿನಿಂದ ವಿಂಗಡಿಸಿದ ದೇಶದ ಎಲ್ಲಾ ನಗರಗಳ ದ್ವಾರದಲ್ಲಿ ಚದರಿಸುತ್ತೇನೆ. ನನ್ನ ಜನರು ಬದಲಾಗಲಿಲ್ಲ. ನಾನು ಅವರನ್ನು ನಾಶಮಾಡುತ್ತೇನೆ. ನಾನು ಅವರ ಮಕ್ಕಳನ್ನು ಕಸಿದುಕೊಳ್ಳುತ್ತೇನೆ.


“ನರಪುತ್ರನೇ, ಇದನ್ನು ಜೆರುಸಲೇಮಿಗೆ ಹೇಳು. ಮಳೆಯನ್ನೇ ಪಡೆದಿಲ್ಲದ ಭೂಮಿಯಂತೆ ಆಕೆ ಇದ್ದಾಳೆಂದು ಆಕೆಗೆ ತಿಳಿಸು. ನನ್ನ ಕೋಪದ ಸಮಯದಲ್ಲಿ ಆಕೆಯ ಮೇಲೆ ಮಳೆಯೇ ಸುರಿದಿಲ್ಲ.


ಆ ಕೇಡುಗಳೆಲ್ಲಾ ನಮಗೆ ಉಂಟಾದವು. ಇದೆಲ್ಲಾ ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿದಂತೆಯೇ ನಡೆದುಹೋಯಿತು. ಆದರೆ ಈವರೆಗೂ ನಾವು ನಿನ್ನ ಸಹಾಯವನ್ನು ಕೇಳಲಿಲ್ಲ. ಇಂದಿಗೂ ನಾವು ಪಾಪ ಮಾಡುವದನ್ನು ನಿಲ್ಲಿಸಲಿಲ್ಲ. ಯೆಹೋವನೇ, ಇನ್ನೂ ನಾವು ನಿನ್ನ ಸತ್ಯೋಪದೇಶದ ಕಡೆಗೆ ಗಮನ ಕೊಡುತ್ತಿಲ್ಲ.


“ನೀವು ನನ್ನ ಬಳಿಗೆ ಬರುವಂತೆ ಅನೇಕ ಕಾರ್ಯಗಳನ್ನು ಮಾಡಿದೆನು. ನಿಮಗೆ ನಾನು ಊಟಕ್ಕೆ ಕೊಡಲಿಲ್ಲ. ನಿಮ್ಮ ಯಾವ ಪಟ್ಟಣದಲ್ಲಿಯೂ ಆಹಾರವಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಿ ಬರಲಿಲ್ಲ.” ಇದು ಯೆಹೋವನ ನುಡಿ.


“ನಾನು ಈಜಿಪ್ಟಿಗೆ ವ್ಯಾಧಿಗಳನ್ನು ಹೇಗೆ ಬರಮಾಡಿದೆನೋ ಹಾಗೆಯೇ ನಿಮಗೂ ಮಾಡಿದೆನು. ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದೆನು. ನಿಮ್ಮ ಕುದುರೆಗಳನ್ನು ತೆಗೆದುಕೊಂಡೆನು. ಹೆಣಗಳ ರಾಶಿಯಿಂದ ನಿಮ್ಮ ಸ್ಥಳವು ದುರ್ವಾಸನೆಯಿಂದ ತುಂಬುವಂತೆ ಮಾಡಿದೆನು. ಆದಾಗ್ಯೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


ಕೆಲವರು ಯೆಹೋವನಾದ ನನ್ನಿಂದ ತೊಲಗಿಹೋದರು. ನನ್ನನ್ನು ಹಿಂಬಾಲಿಸುವುದನ್ನು ನಿಲ್ಲಿಸಿಬಿಟ್ಟರು. ಅವರು ಯೆಹೋವನನ್ನು ಸಹಾಯಕ್ಕಾಗಿ ಬೇಡುವಂತದ್ದನ್ನು ನಿಲ್ಲಿಸಿದರು. ಅವರನ್ನು ನಾನು ಅವರ ಸ್ಥಳಗಳಿಂದ ತೆಗೆದುಹಾಕುವೆನು.”


ಯೆಹೋವನು ಅಶ್ಶೂರದವರ ಮೂಲಕ ಯೆಹೂದವನ್ನು ಶಿಕ್ಷಿಸುವನು. ಆತನು ಅಶ್ಶೂರವನ್ನು ಬಾಡಿಗೆಗೆ ತೆಗೆದುಕೊಂಡ ಕ್ಷೌರಿಕನ ಕತ್ತಿಯಂತೆ ತೆಗೆದುಕೊಂಡು ಯೆಹೂದದ ತಲೆಕೂದಲನ್ನೂ ಕೈಕಾಲುಗಳ ಕೂದಲನ್ನೂ ಗಡ್ಡವನ್ನೂ ಬೋಳಿಸಿಬಿಡುವನು.


ಆ ನಾಯಕರುಗಳಿಗೆ ಏನೂ ಮಾಡಲಾಗದು. (ಈ ನಾಯಕರುಗಳು “ತಲೆಯೂ ಬಾಲವೂ” ಆಗಿದ್ದಾರೆ; “ಮರದ ಕೊಂಬೆಯೂ ಕಾಂಡವೂ” ಆಗಿದ್ದಾರೆ.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು