ಯೆಶಾಯ 9:15 - ಪರಿಶುದ್ದ ಬೈಬಲ್15 ತಲೆ ಅಂದರೆ ಹಿರಿಯರು ಮತ್ತು ಪ್ರಮುಖರು. ಬಾಲವೆಂದರೆ ಸುಳ್ಳುಪ್ರವಾದಿಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 (ಘನಹೊಂದಿದ ಹಿರಿಯನೇ ತಲೆ; ಸುಳ್ಳುಬೋಧನೆ ಮಾಡುವ ಪ್ರವಾದಿಯೇ ಬಾಲ). ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು, ಸುಳ್ಳು ಬೋಧಿಸುವ ಪ್ರವಾದಿಯು ಬಾಲವಾಗಿರುವನು. ಅಧ್ಯಾಯವನ್ನು ನೋಡಿ |
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
“ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.
ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.