ಯೆಶಾಯ 9:17 - ಪರಿಶುದ್ದ ಬೈಬಲ್17 ಜನರೆಲ್ಲರೂ ದುಷ್ಟರಾಗಿದ್ದಾರೆ. ಆದ್ದರಿಂದ ಯೆಹೋವನು ಯುವಕರಲ್ಲಿ ಸಂತೋಷಿಸುವದಿಲ್ಲ. ಅವರ ವಿಧವೆಯರಿಗೆ ಮತ್ತು ಅನಾಥರಿಗೆ ದೇವರು ದಯೆ ತೋರಿಸುವುದಿಲ್ಲ; ಯಾಕೆಂದರೆ ಎಲ್ಲಾ ಜನರು ದುಷ್ಟರಾಗಿದ್ದಾರೆ. ಅವರು ದೇವರಿಗೆ ವಿರುದ್ಧವಾಗಿ ನಡೆಯುತ್ತಾರೆ. ಅವರು ಸುಳ್ಳಾಡುತ್ತಾರೆ. ಆದ್ದರಿಂದ ದೇವರು ಅವರ ಮೇಲೆ ಕೋಪದಿಂದಲೇ ಇರುವನು; ಅವರನ್ನು ದಂಡಿಸುತ್ತಲೇ ಇರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸನು, ಅವರಲ್ಲಿನ ಅನಾಥರನ್ನೂ ವಿಧವೆಯರನ್ನೂ ಕರುಣಿಸನು; ಪ್ರತಿಯೊಬ್ಬನೂ ಭ್ರಷ್ಟನೂ ದುಷ್ಟನೂ ಆಗಿದ್ದಾನೆ; ಎಲ್ಲರ ಬಾಯೂ ನೀಚವಾಗಿ ಮಾತಾಡುತ್ತದೆ. ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಹೀಗಿರಲು ಕರ್ತದೇವರು ಅವರ ಯೌವನಸ್ಥರಲ್ಲಿ ಆನಂದಿಸುವುದಿಲ್ಲ. ಅವರ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಏಕೆಂದರೆ, ಪ್ರತಿಯೊಬ್ಬನು ಕಪಟಿಯೂ, ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದ್ದರಿಂದ ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ. ಅಧ್ಯಾಯವನ್ನು ನೋಡಿ |
ಬೆಳಿಗ್ಗೆ ಸೂರ್ಯೋದಯವನ್ನು ಗಮನಿಸುತ್ತೀರಿ. ಆಕಾಶವು ಕಪ್ಪಾಗಿದ್ದರೆ ಅಥವಾ ಕೆಂಪಾಗಿದ್ದರೆ, ಈ ದಿನ ಮಳೆ ಬರುತ್ತದೆ ಎಂದು ಹೇಳುತ್ತೀರಿ. ಇವುಗಳು ಹವಾಮಾನದ ಗುರುತುಗಳಾಗಿವೆ. ನೀವು ಈ ಗುರುತುಗಳನ್ನು ಕಂಡು ಅವುಗಳ ಅರ್ಥವನ್ನು ತಿಳಿದುಕೊಳ್ಳುತ್ತೀರಿ. ಅದೇ ರೀತಿಯಲ್ಲಿ ಈಗ ನೀವು ನೋಡುತ್ತಿರುವ ಇಂದಿನ ಸಂಗತಿಗಳು ಸಹ ಗುರುತುಗಳಾಗಿವೆ. ಆದರೆ ನಿಮಗೆ ಈ ಗುರುತುಗಳ ಅರ್ಥವು ಗೊತ್ತಿಲ್ಲ.
ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.