Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:20 - ಪರಿಶುದ್ದ ಬೈಬಲ್‌

20 ಜನರು ತಮ್ಮ ಬಲಗಡೆಯಲ್ಲಿರುವದನ್ನು ಕಿತ್ತುಕೊಳ್ಳುವರು. ಆದರೆ ಅದು ಅವರ ಹಸಿವೆಯನ್ನು ನೀಗುವುದಿಲ್ಲ. ಜನರು ಎಡಬದಿಯಲ್ಲಿರುವದನ್ನು ತಿನ್ನುವರು; ಆದರೆ ಅವರ ಹೊಟ್ಟೆತುಂಬುವದಿಲ್ಲ. ಆ ಬಳಿಕ ಪ್ರತಿಯೊಬ್ಬನು ತನ್ನ ಶರೀರವನ್ನೇ ತಿನ್ನಲು ಪ್ರಾರಂಭಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅತ್ತ ಕಿತ್ತುತಿಂದರೂ ಅವರಿಗೆ ತೃಪ್ತಿಯಿಲ್ಲ. ಇತ್ತ ಕುಡಿದು ಕಬಳಿಸಿದರೂ ಅವರ ಹಸಿವು ನೀಗುವುದಿಲ್ಲ. ಒಬ್ಬೊಬ್ಬನೂ ತನ್ನ ಕಂದನನ್ನೇ ಕೊಂದು ತಿನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು [ತಿಂದರೂ] ಹಸಿದೇ ಇರುತ್ತಾರೆ; ಎಡಗಡೆಯಲ್ಲಿರುವದನ್ನು ಉಂಡರೂ ತೃಪ್ತಿಗೊಳ್ಳರು; ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು, ಅವನು ಎಡಗಡೆಯಲ್ಲಿರುವುದನ್ನು ತಿಂದರೂ ಅವು ಅವನನ್ನು ತೃಪ್ತಿಪಡಿಸಲಾರವು. ಒಬ್ಬೊಬ್ಬನೂ ತನ್ನ ನೆರೆಯವನನ್ನು ಹಾನಿ ಮಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:20
16 ತಿಳಿವುಗಳ ಹೋಲಿಕೆ  

ನಿನ್ನನ್ನು ಹಿಂಸಿಸುವವರು ತಮ್ಮ ದೇಹದ ಮಾಂಸವನ್ನೇ ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವಂತೆ ತಮ್ಮ ಸ್ವಂತ ರಕ್ತವನ್ನೇ ಕುಡಿಸಿ ಅಮಲೇರಿಸುವೆನು; ಆಗ ಯೆಹೋವನೇ ನಿನ್ನನ್ನು ರಕ್ಷಿಸಿದನೆಂದು ಜನರೆಲ್ಲರೂ ತಿಳಿದುಕೊಳ್ಳುವರು. ಯಾಕೋಬ್ಯರ ಸರ್ವಶಕ್ತನಾದ ದೇವರು ನಿಮ್ಮನ್ನು ರಕ್ಷಿಸಿದನೆಂದು ಎಲ್ಲರೂ ತಿಳಿಯುವರು.”


ಶತ್ರುವು ನಗರದ ಸುತ್ತಲೂ ತನ್ನ ಸೈನ್ಯವನ್ನು ತರುವನು. ಜನರು ಆಹಾರವನ್ನು ಶೇಖರಿಸಲು ಹೊರಗೆ ಹೋಗದಂತೆ ಆ ಸೈನ್ಯವು ತಡೆಯುವದು. ನಗರದಲ್ಲಿದ್ದ ಜನರು ಉಪವಾಸ ಬೀಳುವರು. ಅವರು ಹಸಿವು ತಾಳಲಾರದೆ ತಮ್ಮ ಮಕ್ಕಳನ್ನೇ ತಿನ್ನುವರು. ಆಮೇಲೆ ಅವರು ಒಬ್ಬರನ್ನೊಬ್ಬರು ತಿನ್ನಲು ಪ್ರಾರಂಭಿಸುವರು.’


ಆ ಸಮಯದಲ್ಲಿ, ಕನಿಕರವುಳ್ಳ ಸ್ತ್ರೀಯರು ಸಹ ತಮ್ಮ ಮಕ್ಕಳನ್ನೇ ಬೇಯಿಸಿ ತಿಂದುಬಿಟ್ಟರು. ಆ ಮಕ್ಕಳು ಅವರ ತಾಯಂದಿರಿಗೇ ಆಹಾರವಾದರು. ನನ್ನ ಜನರು ನಾಶಗೊಂಡಾಗ ಇದು ಸಂಭವಿಸಿತು.


ನೀವು ಆ ತಪ್ಪಾದ ಆಜ್ಞೆಗಳನ್ನು ಅನುಸರಿಸಿದರೆ ನಿಮ್ಮ ದೇಶದಲ್ಲಿ ಸಂಕಟವೂ ಹಸಿವೆಯೂ ಉಂಟಾಗುತ್ತವೆ. ಜನರು ಹಸಿವಿನಿಂದ ಬಳಲುವರು. ಆಗ ಅವರಲ್ಲಿ ಸಿಟ್ಟು ಉಂಟಾಗಿ ತಮ್ಮ ಅರಸನನ್ನೂ ಅವನ ದೇವರುಗಳನ್ನೂ ಬೈಯುವರು ಮತ್ತು ಸಹಾಯಕ್ಕಾಗಿ ದೇವರಿಗೆ ಮೊರೆಯಿಡುವರು.


ಕೆಲವರು ಹೇಳುವಂತೆ, “ಏನೂ ಮಾಡದೆ ಕೈಕಟ್ಟಿಕೊಂಡು ಕುಳಿತುಕೊಳ್ಳುವುದು ಮೂಢತನ. ದುಡಿಯದವನು ಹಸಿವೆಯಿಂದ ಸಾಯುವನು.”


ನಾನು ಹೇಳುವದನ್ನೆಲ್ಲಾ ಮನದಟ್ಟುಮಾಡಿಕೊಳ್ಳಿರಿ: ನಮ್ಮ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಯೆಹೂದ ಮತ್ತು ಇಸ್ರೇಲಿನ ಆಧಾರಗಳನ್ನೆಲ್ಲಾ ತೆಗೆದುಬಿಡುವನು. ಆತನು ಅವರ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವನು.


ತಮ್ಮ ದೇಶದಲ್ಲಿ ಸುತ್ತಲೂ ನೋಡುವಾಗ ಕೇವಲ ಸಂಕಟಗಳೇ ಕುಗ್ಗಿಸುವ ಕಾರ್ಗತ್ತಲೆಗಳೇ ಕಾಣಿಸುವವು. ಆ ದುಃಖವು ಅವರನ್ನು ದೇಶದಿಂದ ತೊಲಗಿಸಿಬಿಡುವುದು. ಕಾರ್ಗತ್ತಲೆಯಲ್ಲಿ ಸಿಕ್ಕಿಬಿದ್ದ ಜನರಿಗೆ ತಮ್ಮನ್ನು ಬಿಡಿಸಿಕೊಳ್ಳಲಾಗುವುದಿಲ್ಲ.


ಆದರೆ ನನ್ನ ಬಡಜನರು ಸುರಕ್ಷಿತವಾಗಿ ಊಟಮಾಡುವರು. ಅವರ ಮಕ್ಕಳೂ ಸುರಕ್ಷಿತವಾಗಿರುವರು. ನನ್ನ ಬಡಜನರು ಹಾಯಾಗಿ ಮಲಗಿ ಸುರಕ್ಷಿತರಾಗಿರುವರು. ಆದರೆ ನಿಮ್ಮ ಸಂತಾನದವರು ಹಸಿವೆಯಿಂದ ಸಾಯುವಂತೆ ಮಾಡುವೆನು. ನಿಮ್ಮ ದೇಶದಲ್ಲಿ ಉಳಿದಿರುವ ಜನರೆಲ್ಲರೂ ಸಾಯುವರು.


ಜೆರುಸಲೇಮಿಗೆ ತೊಂದರೆಗಳು ಎರಡು ಗುಂಪುಗಳಾಗಿ ಬಂದವು: ಲೂಟಿ ಮತ್ತು ಕೊರತೆ; ಕ್ಷಾಮ ಮತ್ತು ಖಡ್ಗ. ನೀನು ಸಂಕಟ ಅನುಭವಿಸುವಾಗ ಯಾರೂ ನಿನಗೆ ಸಹಾಯ ಮಾಡಲಿಲ್ಲ. ಯಾರೂ ನಿನಗೆ ಕರುಣೆ ತೋರಿಸಲಿಲ್ಲ.


ಯೆಹೂದದ ಜನರು ಎಡವಿ, ಒಬ್ಬರಮೇಲೊಬ್ಬರು ಬೀಳುವಂತೆ ನಾನು ಮಾಡುವೆನು. ತಂದೆ ಮತ್ತು ಮಕ್ಕಳು ಒಬ್ಬರಮೇಲೊಬ್ಬರು ಬೀಳುವರು.’” ಇದು ಯೆಹೋವನ ನುಡಿ. “‘ನಾನು ಅವರಿಗಾಗಿ ಕನಿಕರಪಡುವದಿಲ್ಲ ಅಥವಾ ಕರುಣೆ ತೋರಿಸುವದಿಲ್ಲ. ಯೆಹೂದದ ಜನರ ವಿನಾಶವನ್ನು ಕರುಣೆಯು ತಡೆಯದಂತೆ ನೋಡಿಕೊಳ್ಳುತ್ತೇನೆ.’”


ನೀವು ತಿನ್ನುವಿರಿ ಆದರೆ ನಿಮ್ಮ ಹೊಟ್ಟೆ ತುಂಬದು. ನೀವು ಹೊಟ್ಟೆಗಿಲ್ಲದವರಂತೆ ಹಸಿವಿನಿಂದಲೇ ಇರುವಿರಿ. ನೀವು ಜನರನ್ನು ಸುರಕ್ಷಿತ ಸ್ಥಳಕ್ಕೆ ತರಲು ಪ್ರಯತ್ನಿಸುವಿರಿ. ಆದರೆ ನೀವು ರಕ್ಷಿಸಿದ ಜನರನ್ನು ಖಡ್ಗಧಾರಿಗಳು ಕೊಂದುಬಿಡುವರು. ಜನರು ನಿಮ್ಮನ್ನು ಹಿಡಿಯುವರು.


ಆದ್ದರಿಂದ ಯೆಹೋವನು ತನ್ನ ಜನರ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ತನ್ನ ಕೈಗಳನ್ನೆತ್ತಿ ಅವರನ್ನು ಶಿಕ್ಷಿಸುವನು. ಆಗ ಪರ್ವತಗಳೂ ಹೆದರಿಕೊಳ್ಳುವವು; ಹೆಣಗಳು ಕಸದಂತೆ ರಸ್ತೆಗಳಲ್ಲಿ ಬಿದ್ದುಕೊಂಡಿರುವವು. ಆದರೆ ದೇವರು ಅವರ ಮೇಲೆ ಕೋಪಿಸಿಕೊಂಡೇ ಇರುವನು. ಜನರನ್ನು ಶಿಕ್ಷಿಸಲು ಆತನ ಕೈಗಳು ಮೇಲೆತ್ತಲ್ಪಟ್ಟಿರುವವು.


ನೀವು ಕೈದಿಗಳಂತೆ ತಲೆತಗ್ಗಿಸುವಿರಿ, ಸತ್ತಹೆಣಗಳಂತೆ ನೆಲದ ಮೇಲೆ ಬೀಳುವಿರಿ. ಆದರೆ ಅದರಿಂದ ನಿಮಗೆ ಪ್ರಯೋಜನವಾಗದು. ದೇವರು ನಿಮ್ಮ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ನಿಮ್ಮನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.


ಆಗ ನಾನು, “ಸರಿ, ನಾನು ನಿಮ್ಮನ್ನು ಇನ್ನು ನೋಡಿಕೊಳ್ಳುವದಿಲ್ಲ. ಹೋಗಿಬಿಡುತ್ತೇನೆ” ಅಂದೆನು. ಸಾಯಲು ಮನಸ್ಸುಳ್ಳವುಗಳನ್ನು ಸಾಯಲುಬಿಟ್ಟೆನು. ನಾಶವಾಗಲು ಮನಸ್ಸುಳ್ಳವುಗಳನ್ನು ನಾಶವಾಗಲು ಬಿಟ್ಟೆನು. ಅಳಿಯದೆ ಉಳಿದವುಗಳು ಪರಸ್ಪರ ನಾಶಮಾಡಿಕೊಳ್ಳುವವು.


ತನ್ನ ವಿರುದ್ಧವಾಗಿ ತಾನೇ ಹೋರಾಡುವ ರಾಜ್ಯ ಉಳಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು