ಯೆಶಾಯ 9:4 - ಪರಿಶುದ್ದ ಬೈಬಲ್4 ಯಾಕೆಂದರೆ ಅವರ ಮೇಲಿದ್ದ ಭಾರವನ್ನು ನೀನು ತೆಗೆದುಬಿಡುವೆ. ಅವರ ಬೆನ್ನಿನ ಮೇಲಿದ್ದ ಭಾರವಾದ ನೊಗವನ್ನು ನೀನು ತೆಗೆದುಹಾಕುವೆ; ವೈರಿಗಳು ನಿನ್ನ ಜನರನ್ನು ಶಿಕ್ಷಿಸಲು ಉಪಯೋಗಿಸುವ ಬೆತ್ತವನ್ನು ತೆಗೆದುಬಿಡುವೆ. ಆ ಸಮಯವು ನೀನು ಮಿದ್ಯಾನರನ್ನು ಸೋಲಿಸಿದ ಸಮಯದಂತಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮುರಿದುಹಾಕಿದೆ ಭಾರವಾದ ಅವರ ನೊಗವನು ಅವರ ಬೆನ್ನನ್ನು ಬಡಿದ ಬೆತ್ತವನು ದಬ್ಬಾಳಿಕೆ ನಡೆಸಿದವರ ದೊಣ್ಣೆಯನು; ಮಿದ್ಯಾನನ್ನು ಗೆದ್ದ ದಿನದಂದು ಹಾಗೆಯೆ ಮಾಡಿದೆಯಲ್ಲವೆ ನೀನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರಿಗೆ ಭಾರವಾದ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ವಿುದ್ಯಾನಿನ ನಾಶದಿನದಲ್ಲಿ ಮುರಿದುಬಿಟ್ಟಂತೆ ಮುರಿದುಬಿಟ್ಟಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಏಕೆಂದರೆ ಅವನ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ, ಮಿದ್ಯಾನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀರಿ. ಅಧ್ಯಾಯವನ್ನು ನೋಡಿ |
ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ ಆದ್ದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿಬಿಟ್ಟಿದ್ದಾರೆ.
ತಾನು ಮಹಾದೊಡ್ಡ ಜನವೆಂದು ಅಶ್ಶೂರವು ನೆನಸುತ್ತದೆ. ಆದರೆ ಸರ್ವಶಕ್ತನಾದ ಯೆಹೋವನು ಅಶ್ಶೂರದ ಮೇಲೆ ಭಯಂಕರವಾದ ವ್ಯಾಧಿಯನ್ನು ಬರಮಾಡುತ್ತಾನೆ. ಒಬ್ಬ ರೋಗಿ ತನ್ನ ಅಸ್ವಸ್ಥತೆಯಿಂದ ಹೇಗೆ ಕೃಶವಾಗುತ್ತಾನೋ ಹಾಗೆಯೇ ತನ್ನ ಶಕ್ತಿಯನ್ನೂ ಐಶ್ವರ್ಯವನ್ನೂ ಅಶ್ಶೂರವು ಕಳೆದುಕೊಂಡು ಬಲಹೀನನಾಗುವನು. ಅಶ್ಶೂರದ ಮಹಿಮಾಪ್ರಭಾವಗಳು ಇಲ್ಲದೆ ಹೋಗುವವು. ಬೆಂಕಿಯು ಸರ್ವವನ್ನು ಸುಟ್ಟು ನಾಶಮಾಡುವಂತೆ ಇರುವದು.