ಯೆಶಾಯ 9:5 - ಪರಿಶುದ್ದ ಬೈಬಲ್5 ರಣರಂಗದಲ್ಲಿ ನಡೆಯುವ ಪ್ರತಿಯೊಂದು ಪಾದರಕ್ಷೆಯನ್ನೂ ನಾಶಮಾಡಲಾಗುವುದು; ರಕ್ತದ ಕಲೆಯಿರುವ ಪ್ರತಿಯೊಂದು ಸಮವಸ್ತ್ರವನ್ನೂ ನಾಶಮಾಡಲಾಗುವದು. ಅವುಗಳೆಲ್ಲವನ್ನು ಬೆಂಕಿಯಲ್ಲಿ ಹಾಕಲಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಗ್ನಿಕುಂಡಕ್ಕೆ ಆಹುತಿಯಾಗುವುವು ಯುದ್ಧಕ್ಕೆ ಬಂದ ಯೋಧರ ಪಾದರಕ್ಷೆಗಳು ರಕ್ತಸಿಕ್ತವಾದವರ ದೇಹದ ಕವಚಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 [ಯುದ್ಧದ] ಗದ್ದಲದಲ್ಲಿ ತುಳಿದಾಡಿದವರೆಲ್ಲರ ಮೆಟ್ಟುಗಳೂ ರಕ್ತದಲ್ಲಿ ಹೊರಳಾಡಿಸಿದ ಉಡುಪುಗಳೂ ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯುದ್ಧವೀರರ ಪ್ರತಿ ಯುದ್ಧವು ಗಲಿಬಿಲಿಯ ಗದ್ದಲದಿಂದ ರಕ್ತದಲ್ಲಿ ಹೊರಳಾಡಿಸಿದ ವಸ್ತ್ರಗಳು ಆಗಿರುತ್ತವೆ. ಆದರೆ ಇವು ಬೆಂಕಿಗೆ ಆಹುತಿಯಾಗುತ್ತವೆ. ಅದು ಬೆಂಕಿಗೆ ಇಂಧನವಾಗಿರುತ್ತದೆ. ಅಧ್ಯಾಯವನ್ನು ನೋಡಿ |
ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.