ಯೆಶಾಯ 9:6 - ಪರಿಶುದ್ದ ಬೈಬಲ್6 ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು. ಅಧ್ಯಾಯವನ್ನು ನೋಡಿ |
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.
ಯೆಹೋವನು ಹೇಳುವುದೇನೆಂದರೆ: “ಇಗೋ, ನಾನು ನಿನಗೆ ಸಮಾಧಾನವನ್ನು ಕೊಡುತ್ತೇನೆ. ಒಂದು ದೊಡ್ಡ ಹೊಳೆಯು ಹರಿಯುವಂತೆ ನಿನಗೆ ಸಮಾಧಾನವು ಹರಿದುಕೊಂಡು ಬರುವದು. ಭೂಮಿಯ ಮೇಲಿರುವ ಎಲ್ಲಾ ದೇಶಗಳ ಐಶ್ವರ್ಯವು ನಿನ್ನ ಬಳಿಗೆ ಹರಿದುಬರುವದು. ಅದು ಪ್ರವಾಹದಂತೆ ಹರಿದುಬರುವದು. ನೀವು ಸಣ್ಣ ಮಕ್ಕಳಂತೆ ಆ ಹಾಲನ್ನು ಕುಡಿಯುವಿರಿ. ನಾನು ನಿಮ್ಮನ್ನೆತ್ತಿ ಕೈಗಳಲ್ಲಿ ಅಪ್ಪಿಕೊಳ್ಳುವೆನು. ನನ್ನ ತೊಡೆಯ ಮೇಲೆ ನಿಮ್ಮನ್ನು ಕುಳ್ಳಿರಿಸಿ ಆಟವಾಡಿಸುವೆನು.