ಯೆಶಾಯ 9:7 - ಪರಿಶುದ್ದ ಬೈಬಲ್7 ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು. ಅಧ್ಯಾಯವನ್ನು ನೋಡಿ |
ಆಮೇಲೆ ಕಬ್ಬಿಣ, ಮಣ್ಣು, ಕಂಚು, ಬೆಳ್ಳಿ, ಚಿನ್ನ ಎಲ್ಲವೂ ಏಕಕಾಲಕ್ಕೆ ಒಡೆದು ಚೂರುಚೂರಾದವು. ಆ ಚೂರುಗಳೆಲ್ಲ ಬೇಸಿಗೆಕಾಲದ ಕಣದಲ್ಲಿನ ಹೊಟ್ಟಿನಂತಾದವು. ಗಾಳಿಯು ಆ ಚೂರುಗಳನ್ನು ಹಾರಿಸಿಕೊಂಡು ಹೋಯಿತು. ಅಲ್ಲಿ ಏನೂ ಉಳಿಯಲಿಲ್ಲ. ಹಿಂದೆಂದೂ ಅಲ್ಲೊಂದು ಪ್ರತಿಮೆ ಇತ್ತೆಂದು ಯಾರೂ ಹೇಳುವಂತಿರಲಿಲ್ಲ. ಆಮೇಲೆ ಆ ಪ್ರತಿಮೆಗೆ ಅಪ್ಪಳಿಸಿದ ಬಂಡೆಯು ಒಂದು ದೊಡ್ಡ ಪರ್ವತವಾಗಿ ಇಡೀ ಭೂಮಂಡಲವನ್ನು ವ್ಯಾಪಿಸಿತು.
ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.