Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:1 - ಪರಿಶುದ್ದ ಬೈಬಲ್‌

1-3 ನಾನು ಯಾಜಕನಾಗಿದ್ದೇನೆ. ನಾನು ಬೂಜಿಯ ಮಗನಾದ ಯೆಹೆಜ್ಕೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೇವದರ್ಶನವಾಯಿತು. ಇದು ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರ್ಷದ ನಾಲ್ಕನೆ ತಿಂಗಳಿನ ಐದನೆಯ ದಿನದಲ್ಲಿ ಯೆಹೋವನ ವಾಕ್ಯವು ಯೆಹೆಜ್ಕೇಲನಿಗೆ ಬಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನ ನಾನು ಗಡೀಪಾರಾಗಿದ್ದ ಯೆಹೂದ್ಯರ ಮಧ್ಯೆ ಕೆಬಾರ್ ನದಿಯ ಹತ್ತಿರ ಇದ್ದೆ. ಆಗ ಆಕಾಶ ತೆರೆಯಿತು. ನನಗೆ ದೇವದರ್ಶನಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ಸೇರಿಕೊಂಡಿರುವಾಗ ಮೂವತ್ತನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ಒಡೆದು ನನಗೆ ದೇವದರ್ಶನಗಳು ಉಂಟಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ, ಐದನೆಯ ದಿನದಲ್ಲಿ ಆಕಾಶ ತೆರೆಯಿತು. ನಾನು ದೇವರ ದರ್ಶನಗಳನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:1
39 ತಿಳಿವುಗಳ ಹೋಲಿಕೆ  

ನಂತರ ಪರಲೋಕವು ತೆರೆದಿರುವುದನ್ನು ನಾನು ನೋಡಿದೆನು. ನನ್ನ ಎದುರಿನಲ್ಲಿ ಒಂದು ಬಿಳಿ ಕುದುರೆಯಿತ್ತು. ಕುದುರೆಯ ಮೇಲೆ ಕುಳಿತಿದ್ದ ಸವಾರನ ಹೆಸರು ನಂಬಿಗಸ್ತ ಮತ್ತು ಸತ್ಯವಂತ. ಆತನು ತನ್ನ ತೀರ್ಪುಗಳಲ್ಲಿಯೂ ಯುದ್ಧಗಳಲ್ಲಿಯೂ ನ್ಯಾಯವಂತನಾಗಿದ್ದನು.


“ಇಗೋ, ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನು (ಯೇಸು) ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ!” ಎಂದು ಹೇಳಿದನು.


ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದನು. ಕೂಡಲೇ ಆಕಾಶವು ತೆರೆಯಿತು. ದೇವರಾತ್ಮನು ಪಾರಿವಾಳದ ರೂಪದಲ್ಲಿ ಕೆಳಗಿಳಿದು ತನ್ನ ಮೇಲೆ ಬರುತ್ತಿರುವುದನ್ನು ಯೇಸು ಕಂಡನು.


ಆಗ ಆತ್ಮವು ನನ್ನನ್ನು ಆಕಾಶಕ್ಕೆ ಎತ್ತಿ ಬಾಬಿಲೋನ್ ದೇಶಕ್ಕೆ ಮರಳಿ ತಂದಿತು. ಸೆರೆ ಒಯ್ಯಲ್ಪಟ್ಟಿದ್ದ ಜನರ ಮಧ್ಯೆ ನಾನು ಬಂದೆನು. ದೇವಾರಾತ್ಮವು ಕೊಟ್ಟ ದರ್ಶನದಲ್ಲಿ ನಾನು ಆ ಎಲ್ಲಾ ವಿಷಯಗಳನ್ನು ಕಂಡೆನು. ಬಳಿಕ, ನಾನು ಕಂಡ ಆ ದರ್ಶನವು ನನ್ನನ್ನು ಬಿಟ್ಟುಹೋಯಿತು.


ತೆರೆದ ಆಕಾಶದಿಂದ ಯಾವುದೋ ಒಂದು ವಸ್ತು ಇಳಿದು ಬರುತ್ತಿರುವುದನ್ನು ಅವನು ಕಂಡನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗಗಳನ್ನು ಕಟ್ಟಿ ಭೂಮಿಯ ಮೇಲೆ ಇಳಿಯಬಿಡಲಾಗಿತ್ತು.


ಯೋಹಾನನನ್ನು ಸೆರೆಮನೆಗೆ ಹಾಕುವುದಕ್ಕಿಂತ ಮೊದಲು, ಜನರೆಲ್ಲರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. ಆಗ ಯೇಸು ಸಹ ಬಂದು ದೀಕ್ಷಾಸ್ನಾನ ಮಾಡಿಸಿಕೊಂಡನು. ಯೇಸು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಿತು.


ಆಗ ಕೆಬಾರ್ ನದಿಯ ಬಳಿ ನನಗಾದ ಇಸ್ರೇಲಿನ ದೇವರ ಮಹಿಮೆಯ ದರ್ಶನದಲ್ಲಿ ನಾನು ಕಂಡ ಜೀವಿಗಳು ಕೆರೂಬಿದೂತರೇ ಎಂದು ತಿಳಿಯಿತು.


ಈ ಜೀವಿಗಳು ಮೊದಲು ನಾನು ಕೆಬಾರ್ ನದಿಯ ಬಳಿ ಕಂಡ ದರ್ಶನದಲ್ಲಿದ್ದ ಕೆರೂಬಿಯರೇ ಆಗಿರಬೇಕು ಎಂದು ಆಗ ನನಗೆ ಮನದಟ್ಟಾಯಿತು. ಬಳಿಕ ಕೆರೂಬಿಗಳು ಮೇಲಕ್ಕೆ ಏರಿದವು.


ನಂತರ ನಾನು ನೋಡಿದಾಗ ನನ್ನ ಎದುರಿನಲ್ಲಿ ಪರಲೋಕದ ಬಾಗಿಲು ತೆರೆದಿರುವುದನ್ನು ಕಂಡೆನು. ನನ್ನ ಜೊತೆಯಲ್ಲಿ ಮೊದಲು ಮಾತನಾಡಿದ್ದ ಧ್ವನಿಯೇ ಮತ್ತೆ ನನ್ನೊಂದಿಗೆ ಮಾತಾಡಿತು. ಆ ಧ್ವನಿಯು ತುತೂರಿಯ ಧ್ವನಿಯಂತಿತ್ತು. ಆ ಧ್ವನಿಯು, “ಇಲ್ಲಿಗೆ ಹತ್ತಿ ಬಾ. ಮುಂದೆ ಸಂಭವಿಸುವುದನ್ನು ನಾನು ನಿನಗೆ ತೋರಿಸುತ್ತೇನೆ” ಎಂದು ಹೇಳಿತು.


ಅದಲ್ಲದೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರುಗಳು ಏರಿಹೋಗುವುದನ್ನೂ ಕೆಳಗೆ ಇಳಿದುಬರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.


ನಾನು ನೋಡಿದ ದರ್ಶನವು ಕೆಬಾರ್ ಕಾಲುವೆಯ ಬಳಿ ಕಂಡ ದರ್ಶನದಂತಿತ್ತು. ನಾನು ಸಾಷ್ಟಾಂಗವೆರಗಿದೆನು.


ಆಗ ಅದು ಕೈಯಂತಿದ್ದ ಒಂದನ್ನು ಚಾಚಿ ನನ್ನ ತಲೆಯ ಕೂದಲನ್ನು ಹಿಡಿದುಕೊಂಡಿತು. ಬಳಿಕ ಆತ್ಮವು ನನ್ನನ್ನು ಮೇಲಕ್ಕೆ ಎತ್ತಿ ದಿವ್ಯದರ್ಶನದಲ್ಲಿ ಜೆರುಸಲೇಮಿಗೆ ಕೊಂಡೊಯ್ಯಿತು. ಅದು ನನ್ನನ್ನು ಒಳದ್ವಾರಕ್ಕೆ ಕೊಂಡೊಯ್ಯಿತು. ಇದು ಉತ್ತರ ದಿಕ್ಕಿನಲ್ಲಿತ್ತು. ದೇವರನ್ನು ಸಿಟ್ಟಿಗೆಬ್ಬಿಸುವ ವಿಗ್ರಹವು ಈ ದ್ವಾರದ ಬಳಿ ಇತ್ತು.


ನಾನೆದ್ದು ಬಯಲು ಸೀಮೆಗೆ ಹೋದೆನು. ಕೆಬಾರ್ ನದಿಯ ಪಕ್ಕದಲ್ಲಿ ನಾನು ಕಂಡ ಮಹಿಮೆಯಂತಿದ್ದ ಯೆಹೋವನ ಮಹಿಮೆಯು ಅಲ್ಲಿ ಇತ್ತು. ನಾನು ನನ್ನ ಮುಖವನ್ನು ನೆಲಕ್ಕೆ ತಾಗಿಸಿ ಬಗ್ಗಿ ನಮಸ್ಕರಿಸಿದೆ.


ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ. ಯೆಹೂದ ಮತ್ತು ಜೆರುಸಲೇಮಿನಲ್ಲಿ ನಡೆಯಲಿದ್ದ ಘಟನೆಗಳ ಬಗ್ಗೆ ದೇವರು ಯೆಶಾಯನಿಗೆ ಈ ದರ್ಶನ ನೀಡಿದನು; ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ ಮತ್ತು ಹಿಜ್ಕೀಯರ ಕಾಲದಲ್ಲಿ ಯೆಶಾಯನಿಗೆ ಈ ದರ್ಶನವಾಯಿತು.


ದೇವರು, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ, ನಾನು ಅವನಿಗೆ ನನ್ನನ್ನು ದರ್ಶನದಲ್ಲಿ ಗೊತ್ತುಪಡಿಸಿಕೊಳ್ಳುವೆನು ಅಥವಾ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ನನಗೆ ಅವಶ್ಯವಾಗಿದೆ. ಆದ್ದರಿಂದ ನನಗೆ ಪ್ರಭುವಿನಿಂದಾದ ದರ್ಶನಗಳ ಮತ್ತು ಪ್ರಕಟಣೆಗಳ ಬಗ್ಗೆ ಹೇಳುತ್ತೇನೆ.


ಯೇಸು ನೀರಿನಿಂದ ಮೇಲಕ್ಕೆ ಬರುತ್ತಿದ್ದಾಗ, ಆಕಾಶವು ತೆರೆಯಂತೆ ಹರಿದುಹೋಯಿತು; ಮತ್ತು ಪವಿತ್ರಾತ್ಮನು ತನ್ನ ಮೇಲೆ ಪಾರಿವಾಳದ ರೂಪದಲ್ಲಿ ಇಳಿದುಬರುತ್ತಿರುವುದನ್ನು ಕಂಡನು.


“ಆ ಬಳಿಕ ನಾನು ನನ್ನ ಆತ್ಮವನ್ನು ಎಲ್ಲಾ ತರದ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಹೆಣ್ಣು ಮಕ್ಕಳು ಪ್ರವಾದಿಸುವರು. ನಿಮ್ಮ ವೃದ್ಧರು ಕನಸು ಕಾಣುವರು. ನಿಮ್ಮ ಯುವಕರಿಗೆ ದರ್ಶನಗಳಾಗುವವು.


ನಾನು ಪ್ರವಾದಿಗಳೊಂದಿಗೆ ಮಾತನಾಡಿದೆನು. ಅವರಿಗೆ ಅನೇಕ ದರ್ಶನಗಳನ್ನು ಕೊಟ್ಟೆನು. ನನ್ನ ಪಾಠಗಳನ್ನು ನಿಮಗೆ ಕಲಿಸುವಂತೆ ಅನೇಕ ಮಾರ್ಗಗಳನ್ನು ಪ್ರವಾದಿಗಳಿಗೆ ತೋರಿಸಿಕೊಟ್ಟೆನು.


ದರ್ಶನವೊಂದರಲ್ಲಿ ಯೆಹೋವನು ನನ್ನನ್ನು ಇಸ್ರೇಲ್ ದೇಶಕ್ಕೆ ಒಯ್ದನು. ಆತನು ನನ್ನನ್ನು ಬಹಳ ಉನ್ನತ ಪರ್ವತದ ಬಳಿ ಇರಿಸಿದನು. ನನ್ನೆದುರಿಗಿದ್ದ ಆ ಪರ್ವತ ಒಂದು ನಗರದಂತೆ ಕಂಡಿತು.


ಕೆಬಾರ್ ಕಾಲುವೆ ಪಕ್ಕದಲ್ಲಿದ್ದ ತೇಲ್ ಆಬೀಬ್‌ನಲ್ಲಿ ಸೆರೆಯಾಳುಗಳಾಗಿದ್ದ ಇಸ್ರೇಲ್ ಜನರ ಬಳಿಗೆ ನಾನು ಒಯ್ಯಲ್ಪಟ್ಟೆನು. ಅಲ್ಲಿದ್ದ ಜನರ ಮಧ್ಯೆ ನಾನು ಏಳು ದಿವಸ ಸ್ತಬ್ಧನಾಗಿದ್ದೆನು.


ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಕೆಲಸವನ್ನು ಮಾಡಲು ಯೋಗ್ಯರಾದ ಮೂವತ್ತರಿಂದ ಐವತ್ತರೊಳಗಿನ ಎಲ್ಲಾ ಪುರುಷರನ್ನು ಲೆಕ್ಕಿಸು.


ಈ ಜನರು ಇಸ್ರೇಲರ ಯೆಹೋವನನ್ನು ನೋಡಿದರು. ದೇವರು ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟಿನ ಮೇಲೆ ನಿಂತುಕೊಂಡಿದ್ದನು!


ಆ ರಾತ್ರಿ ದೇವರು ಕನಸಿನಲ್ಲಿ ಅವನೊಂದಿಗೆ ಮಾತನಾಡಿದನು. ದೇವರು ಅವನನ್ನು, “ಯಾಕೋಬನೇ, ಯಾಕೋಬನೇ” ಎಂದು ಕರೆದನು. ಅದಕ್ಕೆ ಇಸ್ರೇಲನು, “ಇಗೋ, ಇದ್ದೇನೆ” ಎಂದು ಉತ್ತರಕೊಟ್ಟನು.


ಒಂದು ಮಧ್ಯಾಹ್ನ ಸುಮಾರು ಮೂರು ಗಂಟೆಯಲ್ಲಿ ಕೊರ್ನೇಲಿಯನಿಗೆ ಒಂದು ದರ್ಶನವಾಯಿತು. ಅವನು ಅದನ್ನು ಸ್ಪಷ್ಟವಾಗಿ ಕಂಡನು. ಆ ದರ್ಶನದಲ್ಲಿ ದೇವದೂತನೊಬ್ಬನು ಅವನ ಬಳಿಗೆ ಬಂದು, “ಕೊರ್ನೇಲಿಯನೇ” ಎಂದು ಕರೆದನು.


ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ತನ್ನ ಶಿಷ್ಯರಿಗೆ, “ನೀವು ಬೆಟ್ಟದ ಮೇಲೆ ಕಂಡ ದರ್ಶನವನ್ನು ಈಗ ಯಾರಿಗೂ ಹೇಳದೆ ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬಂದ ಮೇಲೆ ತಿಳಿಸಿರಿ” ಎಂದು ಆಜ್ಞಾಪಿಸಿದನು.


ನಾನು ಕೆಬಾರ್ ಕಾಲುವೆಯ ಪಕ್ಕದಲ್ಲಿ ಕಂಡ ಜೀವಿಗಳ ಮುಖಗಳಂತೆಯೇ ಕೆರೂಬಿದೂತರ ಮುಖಗಳಿದ್ದವು. ಪ್ರತಿಯೊಂದು ನೇರವಾಗಿ ಮುಂದೆ ಸಾಗಿದವು.


ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.


ಯೇಸು ಬೋಧಿಸುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಯೇಸು ಯೋಸೇಫನ ಮಗನೆಂದು ಜನರು ಭಾವಿಸಿದ್ದರು. ಯೋಸೇಫನು ಹೇಲಿಯ ಮಗನು.


ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ನಾನು ನನ್ನ ಒಡೆಯನನ್ನು ಕಂಡೆನು. ಆತನು ಅದ್ಭುತವೂ ಉನ್ನತವೂ ಆಗಿರುವ ಸಿಂಹಾಸನದ ಮೇಲೆ ಕುಳಿತಿದ್ದನು. ಆತನ ಉದ್ದವಾದ ನಿಲುವಂಗಿಯು ಆಲಯವನ್ನು ತುಂಬಿಕೊಂಡಿತ್ತು.


ನಾವು ಬಾಬಿಲೋನ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು ಚೀಯೋನನ್ನು ನೆನಸಿಕೊಳ್ಳುತ್ತಾ ಅತ್ತೆವು.


“ಆದರೆ ಯೆಹೋವನು ನಮಗೆ ಬಾಬಿಲೋನಿನಲ್ಲಿಯೇ ಪ್ರವಾದಿಗಳನ್ನು ಕೊಟ್ಟಿದ್ದಾನೆ” ಎಂದು ನೀವು ಹೇಳಬಹುದು.


ಕೆರೂಬಿಯರ ತಲೆಗಳ ಮೇಲಿದ್ದ ಗುಮಟದ ಕಡೆಗೆ ನೋಡಿದೆನು. ಆ ಗುಮಟದ ಮೇಲೆ ಇಂದ್ರನೀಲಮಣಿಯಿಂದ ಮಾಡಿದ ಸಿಂಹಾಸನದಂತೆ ಕಾಣುತ್ತಿದ್ದ ಏನೋ ಇತ್ತು.


ಅಲ್ಲಿದ್ದ ನಾಲ್ಕು ಚಕ್ರಗಳೂ ಒಂದೇ ಪ್ರಕಾರವಾಗಿದ್ದವು. ಅವು ಚಕ್ರದೊಳಗೆ ಚಕ್ರಗಳಿದ್ದಂತೆ ತೋರುತ್ತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು