Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:15 - ಪರಿಶುದ್ದ ಬೈಬಲ್‌

15-16 ಆ ಜೀವಿಗಳನ್ನು ನಾನು ನೋಡುತ್ತಿರುವಾಗ, ನೆಲಕ್ಕೆ ತಾಕಿದ್ದ ನಾಲ್ಕು ಚಕ್ರಗಳನ್ನು ಕಂಡೆನು. ಒಂದೊಂದು ಜೀವಿಯ ಪಕ್ಕದಲ್ಲಿ ಒಂದೊಂದು ಚಕ್ರಗಳಿದ್ದವು. ಆ ಎಲ್ಲಾ ಚಕ್ರಗಳು ಒಂದೇ ಪ್ರಕಾರವಾಗಿ ಕಾಣುತ್ತಿದ್ದವು. ಅವುಗಳು ಹೊಳೆಯುವ ಹಳದಿ ಬಣ್ಣದ ರತ್ನಗಳಿಂದ ಮಾಡಲ್ಪಟ್ಟಂತೆ ತೋರುತ್ತಿದ್ದವು. ಆ ಚಕ್ರದೊಳಗೆ ಇನ್ನೊಂದು ಚಕ್ರವಿದ್ದಂತೆ ತೋರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಗೋ, ನಾನು ಆ ಜೀವಿಗಳನ್ನು ನೋಡುತ್ತಿರಲಾಗಿ ಒಂದೊಂದು ಕಡೆಯಲ್ಲಿಯೂ ಜೀವಿಗಳ ಪಕ್ಕದಲ್ಲಿ ಭೂಮಿಯ ಮೇಲೆ ಒಂದು ಚಕ್ರವು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಗೋ, ನಾನು ಆ ಜೀವಿಗಳನ್ನು ನೋಡುತ್ತಿದ್ದಂತೆ ಒಂದೊಂದು ಕಡೆಯಲ್ಲೂ ಆ ಜೀವಿಗಳ ಪಕ್ಕದಲ್ಲಿ ನೆಲಸೋಕುವ ಚಕ್ರಗಳು ಕಾಣಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಗೋ, ನಾನು ಆ ಜೀವಿಗಳನ್ನು ನೋಡಲಾಗಿ ಒಂದೊಂದು ಕಡೆಯಲ್ಲಿಯೂ ಜೀವಿಗಳ ಪಕ್ಕಗಳಲ್ಲಿ ನೆಲಸೋಕುವ ಚಕ್ರಗಳು ಕಾಣಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ನಾನು ಆ ಜೀವಿಗಳನ್ನು ನೋಡಲಾಗಿ, ಜೀವಿಗಳ ಪಕ್ಕದಲ್ಲಿ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖವುಳ್ಳದ್ದಾಗಿರುವುದನ್ನು ನಾನು ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:15
9 ತಿಳಿವುಗಳ ಹೋಲಿಕೆ  

“ನಾನು ನೋಡುತ್ತಿದ್ದಂತೆಯೇ, ಆಸನಗಳನ್ನು ಅವುಗಳ ಸ್ಥಳದಲ್ಲಿ ಹಾಕಲಾಯಿತು. ಪುರಾತನ ರಾಜನು ತನ್ನ ಆಸನದ ಮೇಲೆ ಕುಳಿತುಕೊಂಡನು. ಆತನ ಉಡುಪು ಬಹಳ ಶುಭ್ರವಾಗಿತ್ತು. ಅದು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಕೂದಲು ಶುಭ್ರವಾಗಿತ್ತು. ಅದು ಬಿಳಿಯ ಉಣ್ಣೆಯಂತೆ ಶುಭ್ರವಾಗಿತ್ತು. ಆತನ ಆಸನವು ಬೆಂಕಿಯಿಂದ ಮಾಡಲಾಗಿತ್ತು. ಅದರ ಚಕ್ರಗಳು ಬೆಂಕಿಯ ಜ್ವಾಲೆಗಳಿಂದ ಮಾಡಲಾಗಿದ್ದವು.


ಆಗ ನಾನು ಅಲ್ಲಿ ನಾಲ್ಕು ಚಕ್ರಗಳಿರುವದನ್ನು ಕಂಡೆನು. ಪ್ರತಿಯೊಬ್ಬ ಕೆರೂಬಿದೂತನ ಬಳಿ ಒಂದು ಚಕ್ರವಿತ್ತು. ಆ ಚಕ್ರಗಳು ಹೊಳೆಯುವ ಹಳದಿ ರತ್ನದಂತೆ ಕಂಡವು.


ಮೊದಲನೆ ಜೀವಿಯು ಸಿಂಹದಂತಿತ್ತು. ಎರಡನೆಯದು ಹಸುವಿನಂತಿತ್ತು. ಮೂರನೆಯದರ ಮುಖ ಮಾನವನ ಮುಖದಂತಿತ್ತು. ನಾಲ್ಕನೆಯದು ಹಾರುವ ಗರುಡನಂತಿತ್ತು.


ಆ ಜೀವಿಗಳಲ್ಲಿ ಪ್ರತಿಯೊಂದಕ್ಕೂ ನಾಲ್ಕು ಮುಖಗಳೂ ನಾಲ್ಕು ರೆಕ್ಕೆಗಳೂ ಇದ್ದವು.


ಅದು ಜೀವಿಗಳು ತಮ್ಮ ರೆಕ್ಕೆಗಳನ್ನು ಒಂದಕ್ಕೊಂದು ಬಡಿದಾಡುವ ಸಪ್ಪಳ ಮತ್ತು ಅವುಗಳ ಪಕ್ಕದಲ್ಲಿದ್ದ ಚಕ್ರಗಳ ಸಪ್ಪಳ.


ಆಗ ಸಿಂಹಾಸನದಲ್ಲಿ ಕೂತಿದ್ದಾತನು ನಾರುಮಡಿ ಧರಿಸಿದ್ದವನಿಗೆ, “ಕೆರೂಬಿದೂತರ ಕೆಳಗಿರುವ ಚಕ್ರಗಳ ನಡುವೆ ಹೋಗು. ಕೆರೂಬಿಗಳ ನಡುವೆ ಇರುವ ಉರಿಯುವ ಕೆಂಡಗಳನ್ನು ನಿನ್ನ ಅಂಗೈಗಳಲ್ಲಿ ತುಂಬಿಕೊಂಡು ಜೆರುಸಲೇಮ್ ನಗರದ ಮೇಲೆ ಹರಡು” ಎಂದು ಹೇಳಿದನು. ನಾನು ನೋಡುತ್ತಿರಲು ಆ ಮನುಷ್ಯನು ಒಳಗೆ ಹೋದನು.


ಪ್ರತಿಯೊಂದು ಬಂಡಿಗೂ ನಾಲ್ಕು ಹಿತ್ತಾಳೆಯ ಗಾಲಿಗಳು ಮತ್ತು ಅಚ್ಚುಗಳು ಇದ್ದವು. ಆ ದೊಡ್ಡ ಪಾತ್ರೆಯ ಮೂಲೆಗಳಲ್ಲಿ ಹಿತ್ತಾಳೆಯ ಆಧಾರ ಕಂಬಗಳಿದ್ದವು. ಈ ಕಂಬಗಳ ಹಿತ್ತಾಳೆಯ ಮೇಲ್ಭಾಗವು ಹೂವಿನಾಕಾರದಲ್ಲಿ ಕೆತ್ತಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು