Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:19 - ಪರಿಶುದ್ದ ಬೈಬಲ್‌

19 ಚಕ್ರಗಳು ಜೀವಿಗಳೊಂದಿಗೆ ಯಾವಾಗಲೂ ಚಲಿಸುತ್ತಿದ್ದವು. ಜೀವಿಗಳು ಗಾಳಿಯಲ್ಲಿ ಹಾರಾಡುತ್ತಿದ್ದರೆ, ಚಕ್ರಗಳು ಸಹ ಅವುಗಳ ಜೊತೆಯಲ್ಲಿಯೇ ಚಲಿಸುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಜೀವಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಮುಂದೆ ಹೋಗುತ್ತಿದ್ದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೇಳುವಾಗ ಚಕ್ರಗಳೂ ಮೇಲೆ ಏಳುತ್ತಿದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಜೀವಿಗಳು ಮುಂದರಿಯುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಮುಂದುವರಿಯುತ್ತಿದ್ದವು; ಜೀವಿಗಳು ನೆಲದಿಂದ ಮೇಲಕ್ಕೇಳುವಾಗ ಚಕ್ರಗಳೂ ಏಳುತ್ತಿದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಜೀವಿಗಳು ಮುಂದರಿಯುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಮುಂದರಿಯುತ್ತಿದ್ದವು; ಜೀವಿಗಳು ನೆಲದಿಂದ ಮೇಲಕ್ಕೇಳುವಾಗ ಚಕ್ರಗಳೂ ಏಳುತ್ತಿದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು. ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಏಳುವಾಗ, ಚಕ್ರಗಳು ಮೇಲಕ್ಕೆ ಏಳುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:19
5 ತಿಳಿವುಗಳ ಹೋಲಿಕೆ  

ಅವುಗಳೊಂದಿಗೆ ಚಕ್ರಗಳು ಎತ್ತಲ್ಪಟ್ಟವು. ಕೆರೂಬಿದೂತರು ರೆಕ್ಕೆಗಳನ್ನು ಚಾಚಿ ಗಾಳಿಯಲ್ಲಿ ಹಾರಿದಾಗ ಅವುಗಳ ಪಕ್ಕದಲ್ಲಿದ್ದ ಚಕ್ರಗಳು ತಮ್ಮ ಸ್ಥಳವನ್ನು ಬದಲಾಯಿಸಲಿಲ್ಲ.


ಕೆರೂಬಿದೂತರು ರೆಕ್ಕೆಗಳನ್ನು ಚಾಚಿ ಹಾರಿದವು. ಅವು ಆಲಯವನ್ನು ಬಿಟ್ಟುಹೋಗುವದನ್ನು ನೋಡಿದೆನು. ಚಕ್ರಗಳು ಅವುಗಳೊಂದಿಗೆ ಹೋದವು. ಅವು ಯೆಹೋವನಾಲಯದ ಪೂರ್ವದ ಬಾಗಿಲ ಬಳಿ ನಿಂತವು. ಇಸ್ರೇಲಿನ ದೇವರ ಮಹಿಮೆಯು ಅವುಗಳ ಮೇಲೆ ಇತ್ತು.


ದೇವದೂತರೇ, ಆತನ ಮಾತಿಗೆ ಕಿವಿಗೊಡುವವರೇ, ಆತನ ಆಜ್ಞೆಗಳಿಗೆ ವಿಧೇಯರಾಗುವ ಬಲಿಷ್ಠ ಸೈನಿಕರೇ, ಯೆಹೋವನನ್ನು ಕೊಂಡಾಡಿರಿ.


ಆ ಜೀವಿಗಳನ್ನು ನಾನು ನೋಡುತ್ತಿರುವಾಗ, ನೆಲಕ್ಕೆ ತಾಕಿದ್ದ ನಾಲ್ಕು ಚಕ್ರಗಳನ್ನು ಕಂಡೆನು. ಒಂದೊಂದು ಜೀವಿಯ ಪಕ್ಕದಲ್ಲಿ ಒಂದೊಂದು ಚಕ್ರಗಳಿದ್ದವು. ಆ ಎಲ್ಲಾ ಚಕ್ರಗಳು ಒಂದೇ ಪ್ರಕಾರವಾಗಿ ಕಾಣುತ್ತಿದ್ದವು. ಅವುಗಳು ಹೊಳೆಯುವ ಹಳದಿ ಬಣ್ಣದ ರತ್ನಗಳಿಂದ ಮಾಡಲ್ಪಟ್ಟಂತೆ ತೋರುತ್ತಿದ್ದವು. ಆ ಚಕ್ರದೊಳಗೆ ಇನ್ನೊಂದು ಚಕ್ರವಿದ್ದಂತೆ ತೋರುತ್ತಿತ್ತು.


ಹೀಗೆ ಜೀವಿಗಳು ಚಲಿಸಿದಾಗ ಚಕ್ರಗಳು ಚಲಿಸಿದವು. ಜೀವಿಗಳು ನಿಂತಾಗ ಚಕ್ರಗಳೂ ನಿಂತವು. ಜೀವಿಗಳು ಗಾಳಿಯಲ್ಲಿ ಮೇಲಕ್ಕೆ ಹೋದರೆ, ಚಕ್ರಗಳೂ ಅವುಗಳೊಂದಿಗೆ ಮೇಲಕ್ಕೆ ಹೋದವು; ಯಾಕೆಂದರೆ ಜೀವಿಗಳನ್ನು ನಿಯಂತ್ರಿಸುವ ಆತ್ಮವು ಚಕ್ರಗಳಲ್ಲಿ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು