ಯೆಹೆಜ್ಕೇಲನು 1:24 - ಪರಿಶುದ್ದ ಬೈಬಲ್24 ಜೀವಿಗಳು ಚಲಿಸಿದಾಗಲೆಲ್ಲಾ ಅವುಗಳ ರೆಕ್ಕೆಗಳ ಗಟ್ಟಿಯಾದ ಶಬ್ದ ನನಗೆ ಕೇಳಿಸಿತು. ಅದು ನೀರು ಭೋರ್ಗರೆಯುವ ಶಬ್ದದಂತಿತ್ತು. ಸರ್ವಶಕ್ತನಾದ ದೇವರ ಶಬ್ದದಂತೆ ಅದು ಗಟ್ಟಿಯಾಗಿತ್ತು. ಅದು ದೊಡ್ಡ ಸೈನ್ಯದ ಅಥವಾ ಜನಸಮೂಹದ ಶಬ್ದದಂತಿತ್ತು. ಜೀವಿಗಳು ಚಲಿಸುವುದನ್ನು ನಿಲ್ಲಿಸಿದಾಗ ಅವುಗಳು ತಮ್ಮ ರೆಕ್ಕೆಗಳನ್ನು ತಮ್ಮ ಪಾರ್ಶ್ವಗಳಲ್ಲಿ ಕೆಳಗಿಳಿಸುತ್ತಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವು ಮುಂದೆ ಹೋಗುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವು ಮುಂದುವರಿಯುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ, ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವು ಮುಂದರಿಯುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ, ಸರ್ವಶಕ್ತನ ಧ್ವನಿಯ ಹಾಗೆ, ಆರ್ಭಟಿಸುವ ಸೈನ್ಯದ ಕೋಲಾಹಲದೋಪಾದಿಯಲ್ಲಿ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವು ಚಲಿಸುವಾಗ, ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು. ಅದು ಜಲಪ್ರವಾಹದ ಶಬ್ದದಂತೆಯೂ, ಸರ್ವಶಕ್ತರ ಧ್ವನಿಯ ಹಾಗೆಯೂ, ಸೈನ್ಯದ ಶಬ್ದದ ಹಾಗೆಯೂ ಇತ್ತು. ಅವು ನಿಲ್ಲುವಾಗ ಅವುಗಳ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು. ಅಧ್ಯಾಯವನ್ನು ನೋಡಿ |