Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:26 - ಪರಿಶುದ್ದ ಬೈಬಲ್‌

26 ಆ ಬೋಗುಣಿಯ ಮೇಲೆ ಸಿಂಹಾಸನದಂತಿದ್ದ ವಸ್ತುವು ಇತ್ತು. ಅದು ನೀಲಮಣಿಯಂತೆ ನೀಲಿ ಬಣ್ಣದ್ದಾಗಿತ್ತು. ಆ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದ ಒಬ್ಬನು ಮನುಷ್ಯನಂತೆ ಕಾಣುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರನ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವುಗಳ ತಲೆಗಳ ಮೇಲ್ಗಡೆಯ ನೆಲಗಟ್ಟಿನ ಮೇಲೆ ಇಂದ್ರ ನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವುಗಳ ತಲೆಗಳ ಮೇಲಿರುವ ಗಗನ ಮಂಡಲದ ಮೇಲ್ಭಾಗದಲ್ಲಿ ನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:26
34 ತಿಳಿವುಗಳ ಹೋಲಿಕೆ  

ಕೆರೂಬಿಯರ ತಲೆಗಳ ಮೇಲಿದ್ದ ಗುಮಟದ ಕಡೆಗೆ ನೋಡಿದೆನು. ಆ ಗುಮಟದ ಮೇಲೆ ಇಂದ್ರನೀಲಮಣಿಯಿಂದ ಮಾಡಿದ ಸಿಂಹಾಸನದಂತೆ ಕಾಣುತ್ತಿದ್ದ ಏನೋ ಇತ್ತು.


ಈ ಜನರು ಇಸ್ರೇಲರ ಯೆಹೋವನನ್ನು ನೋಡಿದರು. ದೇವರು ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟಿನ ಮೇಲೆ ನಿಂತುಕೊಂಡಿದ್ದನು!


ಆ ದೀಪಸ್ತಂಭಗಳ ಮಧ್ಯದಲ್ಲಿ “ಮನುಷ್ಯಕುಮಾರ”ನಂತೆ ಇರುವಾತನನ್ನು ನಾನು ನೋಡಿದೆನು. ಆತನು ಉದ್ದನೆಯ ನಿಲುವಂಗಿಯನ್ನು ಧರಿಸಿದ್ದನು; ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.


ಆ ಮನುಷ್ಯಕುಮಾರನಂತಿರುವವನು ಪುನಃ ನನ್ನನ್ನು ಸ್ಪರ್ಶಿಸಿದನು. ಆತನು ನನ್ನನ್ನು ಸ್ಪರ್ಶಿಸಿದಾಗ ನನಗೆ ಉಪಶಮನವಾಯಿತು.


ಆ ಜೀವಿಗಳ ತಲೆಗಳ ಮೇಲೆ ಆಶ್ಚರ್ಯಕರವಾದ ಒಂದು ಗುಮಟದಂತಿರುವ ವಸ್ತುವು ಹರಡಿಕೊಂಡಿತ್ತು. ಅದು ತಲೆಕೆಳಕಾಗಿ ಇಟ್ಟಿದ್ದ ಬೋಗುಣಿಯಂತಿತ್ತು. ಅದು ಸ್ಪಟಿಕದಂತೆ ಸ್ವಚ್ಫವಾಗಿತ್ತು.


ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಆ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು.


ನಾನು ನೋಡಿದಾಗ ನನ್ನ ಎದುರಿನಲ್ಲಿ ಮನುಷ್ಯಕುಮಾರನಂತೆ ಕಾಣುತ್ತಿದ್ದವನು ಆ ಬಿಳಿಯ ಮೋಡದ ಮೇಲೆ ಕುಳಿತಿದ್ದನು. ಆತನ ತಲೆಯ ಮೇಲೆ ಚಿನ್ನದ ಕಿರೀಟವಿತ್ತು ಮತ್ತು ಆತನ ಕೈಯಲ್ಲಿ ಹರಿತವಾದ ಕುಡುಗೋಲಿತ್ತು.


ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.


“ಬಡನಗರಿಯೇ, ನಿನ್ನ ವೈರಿಗಳು ನಿನಗೆ ವಿರೋಧವಾಗಿ ಬಿರುಗಾಳಿಯಂತೆ ಬಂದಾಗ ಯಾರೂ ನಿನ್ನನ್ನು ಸಂತೈಸಲಿಲ್ಲ. ಆದರೆ ನಾನು ಮತ್ತೆ ನಿನ್ನನ್ನು ನಿರ್ಮಿಸುವೆನು. ನಿನ್ನ ಗೋಡೆಗಳ ಕಲ್ಲುಗಳನ್ನು ಕಟ್ಟಲು ಸುಂದರವಾದ ಗಾರೆಯನ್ನು ಉಪಯೋಗಿಸುವೆನು. ನಾನು ಅಡಿಪಾಯ ಹಾಕುವಾಗ ಮಾಣಿಕ್ಯಗಳನ್ನು ಹಾಕುವೆನು.


ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ನಾನು ನನ್ನ ಒಡೆಯನನ್ನು ಕಂಡೆನು. ಆತನು ಅದ್ಭುತವೂ ಉನ್ನತವೂ ಆಗಿರುವ ಸಿಂಹಾಸನದ ಮೇಲೆ ಕುಳಿತಿದ್ದನು. ಆತನ ಉದ್ದವಾದ ನಿಲುವಂಗಿಯು ಆಲಯವನ್ನು ತುಂಬಿಕೊಂಡಿತ್ತು.


ಇದಲ್ಲದೆ ಆಕಾಶದಲ್ಲಿಯೂ ಭೂಮಿಯಲ್ಲಿಯೂ ಭೂಮಿಯ ಕೆಳಭಾಗದಲ್ಲೂ ಸಮುದ್ರದಲ್ಲೂ ಇರುವ ಪ್ರತಿಯೊಂದು ಜೀವಿಗಳು ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಪ್ರಭಾವ, ಅಧಿಕಾರಗಳು ಯುಗಯುಗಾಂತರಗಳಲ್ಲಿಯೂ ಇರಲಿ!”


“ನಾನು ಜಯಗಳಿಸಿ ನನ್ನ ತಂದೆಯೊಡನೆ ಆತನ ಸಿಂಹಾಸನದ ಮೇಲೆ ಕುಳಿತುಕೊಂಡೆನು. ಅಂತೆಯೇ ಜಯಗಳಿಸುವ ಪ್ರತಿಯೊಬ್ಬನೂ ನನ್ನ ಸಂಗಡ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು.


ಈಗ ಯೇಸು ಪರಲೋಕಕ್ಕೆ ಹೋಗಿರುವನು. ಆತನು ದೇವರ ಬಲಗಡೆಯಲ್ಲಿದ್ದಾನೆ. ಆತನು ದೇವದೂತರನ್ನೂ ಅಧಿಕಾರಿಗಳನ್ನೂ ಶಕ್ತಿಗಳನ್ನೂ ಆಳುತ್ತಿದ್ದಾನೆ.


ನಾವು ಹೇಳುವ ಸಂಗತಿಗಳಲ್ಲಿ ಮುಖ್ಯವಾದದ್ದೇನೆಂದರೆ, ನಿಮಗೆ ಹೇಳಿದಂತೆಯೇ ನಮಗೊಬ್ಬ ಪ್ರಧಾನ ಯಾಜಕನಿದ್ದಾನೆ. ಆತನು ಪರಲೋಕದಲ್ಲಿ ದೇವರ ಸಿಂಹಾಸನದ ಬಲಭಾಗದಲ್ಲಿ ಈಗ ಕುಳಿತುಕೊಂಡಿದ್ದಾನೆ.


ಆದರೆ ದೇವರು ತನ್ನ ಮಗನನ್ನು ಕುರಿತು ಹೀಗೆ ಹೇಳಿದನು: “ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲೂ ಇರುವುದು. ನೀನು ನಿನ್ನ ರಾಜ್ಯವನ್ನು ಸಮರ್ಪಕವಾದ ತೀರ್ಪುಗಳೊಡನೆ ಆಳುವೆ.


ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


“ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ಮನುಷ್ಯಕುಮಾರನು ಬರುವ ದಿನವಾಗಲಿ ಸಮಯವಾಗಲಿ ನಿಮಗೆ ಗೊತ್ತಿಲ್ಲ.


ಆತನು ದೇವಾಲಯವನ್ನು ಕಟ್ಟುವನು ಮತ್ತು ಗೌರವವನ್ನು ಹೊಂದುವನು. ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜ್ಯವನ್ನು ಆಳುವನು. ಒಬ್ಬ ಯಾಜಕನು ಆತನ ಸಿಂಹಾಸನದ ಬಳಿಯಲ್ಲಿ ನಿಂತುಕೊಂಡಿರುವನು. ಅವರಿಬ್ಬರೂ ಸಮಾಧಾನದಿಂದ ಕೆಲಸ ಮಾಡುವರು.


ದೇವರೇ, ನಿನ್ನ ಸಿಂಹಾಸನವು ಶಾಶ್ವತವಾದದ್ದು. ಒಳ್ಳೆಯತನವು ನಿನ್ನ ರಾಜದಂಡವಾಗಿದೆ.


“ಮನುಷ್ಯಕುಮಾರನಂತಿರುವ ಆ ವ್ಯಕ್ತಿಗೆ ದೊರೆತನ, ಮಹಿಮೆ ಮತ್ತು ಆಳುವ ಸಂಪೂರ್ಣ ಅಧಿಕಾರವನ್ನು ಕೊಡಲಾಯಿತು. ಸಕಲ ಜನರು, ಜನಾಂಗಗಳು ಮತ್ತು ಎಲ್ಲ ಭಾಷೆಯ ಜನರು ಆತನನ್ನು ಸೇವಿಸುವರು. ಆತನ ಅಧಿಕಾರವು ಶಾಶ್ವತ, ಆತನ ರಾಜ್ಯವು ಎಂದಿಗೂ ಅಳಿಯದು.


ಯೆಹೋಶುವನು ಜೆರಿಕೊವಿನ ಸಮೀಪದಲ್ಲಿದ್ದಾಗ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಅವನ ಎದುರಿಗೆ ನಿಂತಿರುವುದನ್ನು ಕಂಡನು. ಆ ಮನುಷ್ಯನ ಕೈಯಲ್ಲಿ ಒಂದು ಖಡ್ಗವಿತ್ತು. ಯೆಹೋಶುವನು ಆ ಮನುಷ್ಯನ ಹತ್ತಿರಹೋಗಿ, “ನೀನು ನಮ್ಮ ಜನರ ಸ್ನೇಹಿತನೋ ಅಥವಾ ನೀನು ನಮ್ಮ ಶತ್ರುಗಳಲ್ಲಿ ಒಬ್ಬನೋ?” ಎಂದು ಕೇಳಿದನು.


ಆದರೆ ಮೀಕಾಯೆಹು ಯೆಹೋವನಿಗಾಗಿ ಮಾತನಾಡುತ್ತಲೇ ಇದ್ದನು. ಮೀಕಾಯೆಹು, “ಕೇಳಿರಿ! ಈ ಮಾತುಗಳನ್ನು ಯೆಹೋವನು ತಿಳಿಸುತ್ತಾನೆ! ಯೆಹೋವನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆತನ ಎಲ್ಲಾ ದೂತರು ಆತನ ಎಡಬಲಗಳಲ್ಲಿ ನಿಂತಿದ್ದರು.


ಆ ಮೋಡದೊಳಗೆ ಮನುಷ್ಯರನ್ನು ಹೋಲುವ ನಾಲ್ಕು ಜೀವಿಗಳಿದ್ದವು.


ಆಲಯದೊಳಗಿಂದ ಯಾರೋ ನನ್ನೊಡನೆ ಮಾತನಾಡಿದಂತೆ ಕೇಳಿಸಿತು. ಅವನು ನನ್ನ ಬಳಿಯಲ್ಲಿ ಇನ್ನೂ ನಿಂತುಕೊಂಡಿದ್ದನು.


ಆಲಯದೊಳಗಿಂದ ಬಂದ ಸ್ವರವು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇದು ನನ್ನ ಸಿಂಹಾಸನವೂ ಪಾದಪೀಠವೂ ಇರುವ ಸ್ಥಳ. ನಾನು ಇಲ್ಲಿ ನನ್ನ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನ್ನು ಮುಂದೆ ನನ್ನ ಪವಿತ್ರವಾದ ಹೆಸರನ್ನು ಹಾಳುಮಾಡುವದಿಲ್ಲ. ರಾಜರೂ ಅವರ ಜನರೂ ಲೈಂಗಿಕ ಪಾಪಗಳನ್ನು ಮಾಡಿ ನನ್ನನ್ನು ಅವಮಾನಪಡಿಸರು. ಅವರ ರಾಜರುಗಳ ಮೃತಶರೀರವನ್ನು ಇಲ್ಲಿ ಸಮಾಧಿ ಮಾಡುವದಿಲ್ಲ.


ಮನುಷ್ಯನಂತೆ ಕಾಣುತ್ತಿದ್ದ ರೂಪವೊಂದನ್ನು ನಾನು ನೋಡಿದೆನು. ಅದರ ಸೊಂಟದಿಂದಿಡಿದು ಕೆಳಭಾಗದವರೆಗೆ ಬೆಂಕಿಯಂತೆ ಕಾಣುತ್ತಿತ್ತು. ಸೊಂಟದಿಂದ ಮೇಲ್ಭಾಗದವರೆಗೆ ಕಾದಲೋಹದಂತೆ ಹೊಳೆಯುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು