ಯೆಹೆಜ್ಕೇಲನು 1:27 - ಪರಿಶುದ್ದ ಬೈಬಲ್27 ನಾನು ಆತನ ಸೊಂಟದ ಮೇಲ್ಭಾಗವನ್ನು ನೋಡಿದಾಗ, ಆತನು ಬೆಂಕಿಯಿಂದ ಸುತ್ತುವರಿದ ಕಾದಲೋಹದಂತೆ ಕಂಡನು. ನಾನು ಆತನ ಸೊಂಟದಿಂದ ಕೆಳಭಾಗವನ್ನು ನೋಡಿದಾಗ ಆತನು ಬೆಂಕಿಯಂತೆ ಕಂಡನು. ಆತನ ಸುತ್ತಲೂ ಪ್ರಕಾಶಮಾನವಾದ ಬೆಳಕಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತ ಕಾಂತಿಯನ್ನು ನಾನು ಕಂಡೆ; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿ ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆ; ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಸುತ್ತಿಕೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಲೋಹವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತ ಕಾಂತಿಯನ್ನು ನಾನು ಕಂಡೆನು. ಅಧ್ಯಾಯವನ್ನು ನೋಡಿ |