ಯೆಹೆಜ್ಕೇಲನು 1:4 - ಪರಿಶುದ್ದ ಬೈಬಲ್4 ಉತ್ತರ ದಿಕ್ಕಿನಿಂದ ಒಂದು ದೊಡ್ಡ ಬಿರುಗಾಳಿ ಬರುವದನ್ನು ಯೆಹೆಜ್ಕೇಲನಾದ ನಾನು ನೋಡಿದೆನು. ಬಿರುಗಾಳಿಯೊಡನೆ ಕೂಡಿದ ಒಂದು ದೊಡ್ಡ ಮೋಡವು ಅಲ್ಲಿತ್ತು. ಅದರಿಂದ ಬೆಂಕಿಯು ಪ್ರಜ್ವಲಿಸುತ್ತಿತ್ತು. ಮೋಡದ ಸುತ್ತಲೂ ಬೆಳಕಿತ್ತು. ಬೆಂಕಿಯ ಮಧ್ಯದಲ್ಲಿ ಕಾದಲೋಹದಂತೆ ಹೊಳೆಯುತ್ತಿದ್ದ ಏನನ್ನೊ ಕಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ನಾನು ನೋಡಲಾಗಿ; ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿಯು ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿ ಬೆಳಗಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇಗೋ, ನಾನು ನೋಡಿದೆನು; ಬಡಗಲಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲು ವಿುಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣಕಾಂತಿಯಂಥ ಕಾಂತಿಯು ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ ಜ್ವಾಲೆಯ ಮಧ್ಯೆ ಹೊಳೆಯುವ ಲೋಹ ಬೆಳಗಿತು. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.
ಆಗ ಯೆಹೋವನು ಎಲೀಯನಿಗೆ, “ಹೋಗು, ನನ್ನ ಎದುರಿಗೆ ಬೆಟ್ಟದ ಮೇಲೆ ನಿಲ್ಲು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುತ್ತೇನೆ” ಎಂದು ಹೇಳಿದನು. ಆಗ ಬಿರುಗಾಳಿಯು ಬೀಸಿತು. ಆ ಬಿರುಗಾಳಿಯು ಬೆಟ್ಟಗಳನ್ನು ಸೀಳಿಹಾಕಿತು; ಅದು ದೊಡ್ಡ ಬಂಡೆಗಳನ್ನು ಯೆಹೋವನ ಎದುರಿನಲ್ಲಿ ಒಡೆದುಹಾಕಿತು. ಆದರೆ ಆ ಗಾಳಿಯೇ ಯೆಹೋವನಲ್ಲ! ಆ ಬಿರುಗಾಳಿಯ ನಂತರ ಅಲ್ಲಿ ಒಂದು ಭೂಕಂಪವುಂಟಾಯಿತು. ಆದರೆ ಆ ಭೂಕಂಪವು ಯೆಹೋವನಲ್ಲ.