Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:6 - ಪರಿಶುದ್ದ ಬೈಬಲ್‌

6 ಆ ಜೀವಿಗಳಲ್ಲಿ ಪ್ರತಿಯೊಂದಕ್ಕೂ ನಾಲ್ಕು ಮುಖಗಳೂ ನಾಲ್ಕು ರೆಕ್ಕೆಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ಮತ್ತು ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಒಂದೊಂದಕ್ಕೆ ನಾಲ್ಕು ಮುಖಗಳು, ನಾಲ್ಕು ರೆಕ್ಕೆಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪ್ರತಿಯೊಂದಕ್ಕೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:6
10 ತಿಳಿವುಗಳ ಹೋಲಿಕೆ  

ಪ್ರತೀ ಕೆರೂಬಿದೂತನಿಗೆ ನಾಲ್ಕು ಮುಖಗಳಿದ್ದವು. ಮೊದಲನೆಯ ಮುಖವು ಕೆರೂಬಿಯ ಮುಖ, ಎರಡನೆಯದು ಮನುಷ್ಯನ ಮುಖ, ಮೂರನೆಯ ಸಿಂಹದ ಮುಖ ಮತ್ತು ನಾಲ್ಕನೆಯ ಗರುಡನ ಮುಖ.


ಅಲ್ಲಿದ್ದ ನಾಲ್ಕು ಚಕ್ರಗಳೂ ಒಂದೇ ಪ್ರಕಾರವಾಗಿದ್ದವು. ಅವು ಚಕ್ರದೊಳಗೆ ಚಕ್ರಗಳಿದ್ದಂತೆ ತೋರುತ್ತಿದ್ದವು.


ಆ ಜೀವಿಗಳನ್ನು ನಾನು ನೋಡುತ್ತಿರುವಾಗ, ನೆಲಕ್ಕೆ ತಾಕಿದ್ದ ನಾಲ್ಕು ಚಕ್ರಗಳನ್ನು ಕಂಡೆನು. ಒಂದೊಂದು ಜೀವಿಯ ಪಕ್ಕದಲ್ಲಿ ಒಂದೊಂದು ಚಕ್ರಗಳಿದ್ದವು. ಆ ಎಲ್ಲಾ ಚಕ್ರಗಳು ಒಂದೇ ಪ್ರಕಾರವಾಗಿ ಕಾಣುತ್ತಿದ್ದವು. ಅವುಗಳು ಹೊಳೆಯುವ ಹಳದಿ ಬಣ್ಣದ ರತ್ನಗಳಿಂದ ಮಾಡಲ್ಪಟ್ಟಂತೆ ತೋರುತ್ತಿದ್ದವು. ಆ ಚಕ್ರದೊಳಗೆ ಇನ್ನೊಂದು ಚಕ್ರವಿದ್ದಂತೆ ತೋರುತ್ತಿತ್ತು.


ಆರು ರೆಕ್ಕೆಗಳುಳ್ಳ ಸೆರಾಫಿಯರು ಯೆಹೋವನ ಸುತ್ತ್ತಲೂ ನಿಂತಿದ್ದರು. ಆ ದೇವದೂತರು ಎರಡು ರೆಕ್ಕೆಗಳಿಂದ ತಮ್ಮ ಮುಖಗಳನ್ನು ಮುಚ್ಚಿಕೊಂಡಿದ್ದರು; ಎರಡು ರೆಕ್ಕೆಗಳಿಂದ ತಮ್ಮ ಕಾಲುಗಳನ್ನು ಮುಚ್ಚಿಕೊಂಡಿದ್ದರು; ಉಳಿದ ಎರಡು ರೆಕ್ಕೆಗಳಿಂದ ಹಾರಾಡುತ್ತಿದ್ದರು.


ಅವುಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿರಬೇಕು; ಪೆಟ್ಟಿಗೆಯನ್ನು ಮುಚ್ಚಿಕೊಂಡಿರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.


ಈ ಬೋಗುಣಿಯಡಿಯಲ್ಲಿ ಒಂದೊಂದು ಜೀವಿಯು ತನ್ನ ಎರಡು ರೆಕ್ಕೆಗಳನ್ನು ಚಾಚಿಕೊಂಡು ಮತ್ತೊಂದು ಜೀವಿಯನ್ನು ತಾಕುತ್ತಿತ್ತು. ಒಂದೊಂದು ಜೀವಿಯ ಮತ್ತೆರಡು ರೆಕ್ಕೆಗಳು ಅದರ ದೇಹವನ್ನು ಆವರಿಸಿಕೊಂಡಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು