Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:9 - ಪರಿಶುದ್ದ ಬೈಬಲ್‌

9 ಆ ರೆಕ್ಕೆಗಳು ಒಂದಕ್ಕೊಂದು ತಾಕಿದ್ದವು. ಆ ಜೀವಿಗಳು ಚಲಿಸುವಾಗ ಅತ್ತಿತ್ತ ತಿರುಗುತ್ತಿರಲಿಲ್ಲ. ತಮ್ಮ ದೃಷ್ಟಿಯಿದ್ದ ಕಡಗೆ ನೆಟ್ಟಗೆ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಮುಂದೆ ಹೋಗುವಾಗ ತಿರುಗಿಕೊಳ್ಳದೆ ನೇರ ಮುಖವಾಗಿಯೇ ಹೋಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಹಿಂತಿರುಗಿ ನೋಡದೆ ಹೊರಟ ಮುಖವಾಗಿಯೇ ಹೋಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಮುಂದರಿದಾಗೆಲ್ಲ ತಿರುಗಿಕೊಳ್ಳದೆ ಹೊರಟ ಮುಖವಾಗಿಯೇ ಹೋಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವುಗಳ ರೆಕ್ಕೆಗಳು ಪರಸ್ಪರರ ರೆಕ್ಕೆಗಳನ್ನು ಸ್ಪರ್ಶಿಸುತ್ತಿದ್ದವು. ಪ್ರತಿಯೊಂದೂ ನೇರವಾಗಿ ಮುಂದೆ ಹೋಗುತ್ತಿದ್ದವು ಮತ್ತು ಅವರು ತಿರುಗದೆ ಮುಂದೆ ಸಾಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:9
9 ತಿಳಿವುಗಳ ಹೋಲಿಕೆ  

ನಾನು ಕೆಬಾರ್ ಕಾಲುವೆಯ ಪಕ್ಕದಲ್ಲಿ ಕಂಡ ಜೀವಿಗಳ ಮುಖಗಳಂತೆಯೇ ಕೆರೂಬಿದೂತರ ಮುಖಗಳಿದ್ದವು. ಪ್ರತಿಯೊಂದು ನೇರವಾಗಿ ಮುಂದೆ ಸಾಗಿದವು.


ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.


ಯೇಸು, “ನೇಗಿಲಿನ ಮೇಲೆ ಕೈಯನ್ನು ಹಾಕಿ ಹಿಂತಿರುಗಿ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಅಂದನು.


ಯೇಸು ಮತ್ತೆ ಪರಲೋಕಕ್ಕೆ ಹಿಂತಿರುಗುವ ಸಮಯ ಹತ್ತಿರವಾಗುತ್ತಿತ್ತು. ಆದ್ದರಿಂದ ಆತನು ಜೆರುಸಲೇಮಿಗೆ ಹೋಗಲು ತೀರ್ಮಾನಿಸಿದನು.


ಅವು ಚಲಿಸುವಾಗ ನಾಲ್ಕು ದಿಕ್ಕುಗಳಲ್ಲಿ ಯಾವ ದಿಕ್ಕಿಗಾದರೂ ಅತ್ತಿತ್ತ ತಿರುಗದೆ ಚಲಿಸುತ್ತಿದ್ದವು.


ಆ ಚಕ್ರಗಳು ಹೊರಳುವಾಗ ನಾಲ್ಕು ದಿಕ್ಕುಗಳಲ್ಲಿ ಯಾವ ದಿಕ್ಕಿಗೆ ಬೇಕಾದರೂ ತಿರುಗಬಲ್ಲವುಗಳಾಗಿದ್ದವು. ಆದರೆ ಜೀವಿಗಳು ಚಲಿಸುತ್ತಿರುವಾಗ ಅವು ತಿರುಗುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು