ಯೆಹೆಜ್ಕೇಲನು 10:1 - ಪರಿಶುದ್ದ ಬೈಬಲ್1 ಕೆರೂಬಿಯರ ತಲೆಗಳ ಮೇಲಿದ್ದ ಗುಮಟದ ಕಡೆಗೆ ನೋಡಿದೆನು. ಆ ಗುಮಟದ ಮೇಲೆ ಇಂದ್ರನೀಲಮಣಿಯಿಂದ ಮಾಡಿದ ಸಿಂಹಾಸನದಂತೆ ಕಾಣುತ್ತಿದ್ದ ಏನೋ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ಗಗನಮಂಡಲದ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದೇವದರ್ಶನದಲ್ಲಿ ಇಗೋ, ಕೆರೂಬಿಗಳ ತಲೆಗಳ ಮೇಲಿದ್ದ ಗವಿಯಾಕೃತಿಯ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ನೆಲಗಟ್ಟಿನ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ನಾನು ನೋಡಲಾಗಿ, ಕೆರೂಬಿಗಳ ತಲೆಯ ಮೇಲಿದ್ದ ಆಕಾಶಮಂಡಲದಲ್ಲಿ ನೀಲಮಣಿಯಂತೆ ಸಿಂಹಾಸನದ ಆಕಾರದಂತಿರುವ ರೂಪವನ್ನು ಕಂಡೆನು. ಅದು ಅವುಗಳ ಮೇಲೆ ಕಾಣಿಸಿತು. ಅಧ್ಯಾಯವನ್ನು ನೋಡಿ |
ನಾನು ಯಾಜಕನಾಗಿದ್ದೇನೆ. ನಾನು ಬೂಜಿಯ ಮಗನಾದ ಯೆಹೆಜ್ಕೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೇವದರ್ಶನವಾಯಿತು. ಇದು ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರ್ಷದ ನಾಲ್ಕನೆ ತಿಂಗಳಿನ ಐದನೆಯ ದಿನದಲ್ಲಿ ಯೆಹೋವನ ವಾಕ್ಯವು ಯೆಹೆಜ್ಕೇಲನಿಗೆ ಬಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು.