ಯೆಹೆಜ್ಕೇಲನು 10:15 - ಪರಿಶುದ್ದ ಬೈಬಲ್15 ಈ ಜೀವಿಗಳು ಮೊದಲು ನಾನು ಕೆಬಾರ್ ನದಿಯ ಬಳಿ ಕಂಡ ದರ್ಶನದಲ್ಲಿದ್ದ ಕೆರೂಬಿಯರೇ ಆಗಿರಬೇಕು ಎಂದು ಆಗ ನನಗೆ ಮನದಟ್ಟಾಯಿತು. ಬಳಿಕ ಕೆರೂಬಿಗಳು ಮೇಲಕ್ಕೆ ಏರಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಕೆರೂಬಿಗಳು ಮೇಲಕ್ಕೆ ಏರಿದವು; ನಾನು ಕೆಬಾರ್ ನದಿಯ ಹತ್ತಿರ ನೋಡಿದ ಜೀವಿಗಳು ಇವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ಕೆರೂಬಿಗಳು ಮೇಲಕ್ಕೆ ಏರಿದವು; ನಾನು ಕೆಬಾರ್ ನದಿಯ ಹತ್ತಿರ ನೋಡಿದ ಜೀವಿಗಳು ಇವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಕೆರೂಬಿಗಳು ಮೇಲಕ್ಕೆ ಏರಿದವು; ನಾನು ಕೆಬಾರ್ ನದಿಯ ಹತ್ತಿರ ನೋಡಿದ ಜೀವಿಗಳು ಇವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಕೆರೂಬಿಯರು ಮೇಲಕ್ಕೆತ್ತಲಾದರು. ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಜೀವಗಳು ಇವೇ. ಅಧ್ಯಾಯವನ್ನು ನೋಡಿ |
ನಾನು ಯಾಜಕನಾಗಿದ್ದೇನೆ. ನಾನು ಬೂಜಿಯ ಮಗನಾದ ಯೆಹೆಜ್ಕೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೇವದರ್ಶನವಾಯಿತು. ಇದು ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರ್ಷದ ನಾಲ್ಕನೆ ತಿಂಗಳಿನ ಐದನೆಯ ದಿನದಲ್ಲಿ ಯೆಹೋವನ ವಾಕ್ಯವು ಯೆಹೆಜ್ಕೇಲನಿಗೆ ಬಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು.