ಯೆಹೆಜ್ಕೇಲನು 10:22 - ಪರಿಶುದ್ದ ಬೈಬಲ್22 ನಾನು ಕೆಬಾರ್ ಕಾಲುವೆಯ ಪಕ್ಕದಲ್ಲಿ ಕಂಡ ಜೀವಿಗಳ ಮುಖಗಳಂತೆಯೇ ಕೆರೂಬಿದೂತರ ಮುಖಗಳಿದ್ದವು. ಪ್ರತಿಯೊಂದು ನೇರವಾಗಿ ಮುಂದೆ ಸಾಗಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು, ಅವು ಆ ಮುಖಗಳೇ; ಪ್ರತಿಯೊಂದು ಜೀವಿಯು ನೇರವಾಗಿಯೇ ಹೋಗುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು. ಅವು ಆ ಮುಖಗಳೇ. ಪ್ರತಿಯೊಂದು ಜೀವಿಯು ಹೊರಟ ಮುಖವಾಗಿಯೇ ಹೋಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು, ಅವು ಆ ಮುಖಗಳೇ; ಪ್ರತಿಯೊಂದು ಜೀವಿಯು ಹೊರಟ ಮುಖವಾಗಿಯೇ ಹೋಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿ |
ನಾನು ಯಾಜಕನಾಗಿದ್ದೇನೆ. ನಾನು ಬೂಜಿಯ ಮಗನಾದ ಯೆಹೆಜ್ಕೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೇವದರ್ಶನವಾಯಿತು. ಇದು ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರ್ಷದ ನಾಲ್ಕನೆ ತಿಂಗಳಿನ ಐದನೆಯ ದಿನದಲ್ಲಿ ಯೆಹೋವನ ವಾಕ್ಯವು ಯೆಹೆಜ್ಕೇಲನಿಗೆ ಬಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು.