ಯೆಹೆಜ್ಕೇಲನು 10:5 - ಪರಿಶುದ್ದ ಬೈಬಲ್5 ಕೆರೂಬಿದೂತರ ರೆಕ್ಕೆಗಳ ಬಡಿತದ ಶಬ್ದವು ಹೊರಗಿನ ಪ್ರಾಕಾರದ ತನಕ ಕೇಳುತ್ತಿತ್ತು. ಅದು ತುಂಬಾ ಗಟ್ಟಿಯಾದ ಶಬ್ದವಾಗಿತ್ತು. ಸರ್ವಶಕ್ತನಾದ ದೇವರು ಮಾತನಾಡುವಾಗ ಆಗುವ ಗುಡುಗಿನ ಶಬ್ದದಂತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತನಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಅಂಗಳದವರೆಗೂ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಕೆರೂಬಿಗಳ ರೆಕ್ಕೆಗಳ ಶಬ್ದ ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಆವರಣದ ಪರ್ಯಂತವೂ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಪ್ರಾಕಾರದ ಪರ್ಯಂತವೂ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತ ದೇವರು ಮಾತನಾಡುವ ಹಾಗೆ ಹೊರಗಣ ಅಂಗಳದವರೆಗೂ ಕೇಳಿಬಂತು. ಅಧ್ಯಾಯವನ್ನು ನೋಡಿ |