ಯೆಹೆಜ್ಕೇಲನು 11:11 - ಪರಿಶುದ್ದ ಬೈಬಲ್11 ಹೌದು, ಈ ಸ್ಥಳವು ಬೇಯಿಸುವ ಪಾತ್ರೆ ಮತ್ತು ನೀವು ಆ ಪಾತ್ರೆಯಲ್ಲಿ ಬೇಯಿಸಲ್ಪಡುವ ಮಾಂಸವಾಗಿರುತ್ತೀರಿ. ನಾನು ನಿಮ್ಮನ್ನು ಇಸ್ರೇಲಿನಲ್ಲಿಯೇ ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಈ ಪಟ್ಟಣವು ನಿಮಗೆ ಹಂಡೆಯಾಗುವುದಿಲ್ಲ; ನೀವು ಅದರಲ್ಲಿನ ಮಾಂಸವಾಗುವುದಿಲ್ಲ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಈ ಪಟ್ಟಣ ನಿಮಗೆ ಹಂಡೆಯಾಗುವುದಿಲ್ಲ; ನೀವು ಅದರಲ್ಲಿ ಮಾಂಸವಾಗುವುದಿಲ್ಲ; ಇಸ್ರಯೇಲಿನ ಮೇರೆಯಲ್ಲೆ ನಿಮಗೆ ದಂಡನೆಯನ್ನು ವಿಧಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಈ ಪಟ್ಟಣವು ನಿಮಗೆ ಹಂಡೆಯಾಗುವದಿಲ್ಲ; ನೀವು ಅದರಲ್ಲಿನ ಮಾಂಸವಾಗುವದಿಲ್ಲ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಈ ಪಟ್ಟಣವು ಪಾತ್ರೆಯಾಗುವುದಿಲ್ಲ. ನೀವು ಅದರಲ್ಲಿ ಮಾಂಸವೂ ಆಗುವುದಿಲ್ಲ. ಇಸ್ರಾಯೇಲಿನ ಮೇರೆಯಲ್ಲಿ ನಾನು ನ್ಯಾಯತೀರಿಸುವೆನು. ಅಧ್ಯಾಯವನ್ನು ನೋಡಿ |
“‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಕೊಲೆಗಾರರ ಪಟ್ಟಣವಾದ ಜೆರುಸಲೇಮಿಗೆ ಆಪತ್ತು ಬರುವುದು. ಕೊಲೆಗಾರರ ನಗರಕ್ಕೆ ಕೇಡಾಗುವದು. ಜೆರುಸಲೇಮು ಕಿಲುಬು ಹಿಡಿದ ಹಂಡೆಯಂತಿದೆ. ಆ ಕಿಲುಬಿನ ಕಲೆಯನ್ನು ತೆಗೆಯಲಾಗುವುದೇ ಇಲ್ಲ. ಆ ಹಂಡೆಯು ಅಶುದ್ಧವಾಗಿರುವುದರಿಂದ ಅದರೊಳಗಿರುವ ಮಾಂಸವನ್ನೆಲ್ಲಾ ಹೊರಗೆ ತೆಗೆದುಬಿಡು. ಆ ಮಾಂಸವನ್ನು ನೀನಾಗಲಿ ಯಾಜಕರಾಗಲಿ ತಿನ್ನಕೂಡದು.