ಯೆಹೆಜ್ಕೇಲನು 11:13 - ಪರಿಶುದ್ದ ಬೈಬಲ್13 ನಾನು ದೇವರ ಪರವಾಗಿ ಮಾತನಾಡುವದನ್ನು ನಿಲ್ಲಿಸಿದ ಕೂಡಲೇ, ಬೆನಾಯನ ಮಗನಾದ ಪೆಲತ್ಯನು ಸತ್ತನು. ನಾನು ನೆಲದ ಮೇಲೆ ಬಗ್ಗಿ, “ನನ್ನ ಒಡೆಯನಾದ ಯೆಹೋವನೇ, ನೀನು ಇಸ್ರೇಲಿನಲ್ಲಿ ಅಳಿದುಳಿದವರನ್ನು ಸಂಪೂರ್ಣವಾಗಿ ನಾಶಮಾಡುವಿಯೋ?” ಎಂದು ಗಟ್ಟಿಯಾಗಿ ಕೂಗಿಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ, “ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿಯೋ?” ಎಂದು ಮೊರೆಯಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ. “ಅಯ್ಯೋ, ಸರ್ವೇಶ್ವರನಾದ ದೇವರೇ, ಇಸ್ರಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲನಮಾಡುವಿರೋ?” ಎಂದು ಮೊರೆಯಿಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡು - ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿಯೋ ಎಂದು ಮೊರೆಯಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ಪ್ರವಾದಿಸುತ್ತಿರುವಾಗ, ಬೆನಾಯನ ಮಗನಾದ ಪೆಲಟೀಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು, ಗಟ್ಟಿಯಾಗಿ ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನೀವು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀರೋ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |