ಯೆಹೆಜ್ಕೇಲನು 11:20 - ಪರಿಶುದ್ದ ಬೈಬಲ್20 ಆಗ ಅವರು ನನ್ನ ಆಜ್ಞಾವಿಧಿಗಳಿಗೆ ವಿಧೇಯರಾಗುವರು. ನಾನು ಹೇಳುವದನ್ನು ಅವರು ಮಾಡುವರು. ಅವರು ನಿಜವಾಗಿಯೂ ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಅವರು ನನ್ನ ನಿಯಮಗಳನ್ನು ಕೈಗೊಂಡು ಜಾಗರೂಕತೆಯಿಂದ ಪಾಲಿಸುವರು. ನನ್ನ ನಿಯಮಗಳನ್ನು ಕೈಗೊಳ್ಳುವರು. ಅವರು ನನ್ನ ಜನರಾಗುವರು, ನಾನು ಅವರ ದೇವರಾಗುವೆನು. ಅಧ್ಯಾಯವನ್ನು ನೋಡಿ |
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.
ಅವರು ತಮ್ಮ ಎಲ್ಲಾ ಪಾಪಗಳ ನಿಮಿತ್ತ ನಾಚಿಕೆಪಡುವರು. ಆಲಯದ ವಿನ್ಯಾಸವನ್ನು ಅವರು ತಿಳಿದುಕೊಳ್ಳಲಿ. ಅದು ಹೇಗೆ ಕಟ್ಟಲ್ಪಡಬೇಕೆಂಬುದನ್ನು, ಪ್ರವೇಶ ದ್ವಾರಗಳು ಮತ್ತು ಹೊರಗೆ ಹೋಗುವ ಬಾಗಿಲುಗಳು ಎಲ್ಲಿರಬೇಕೆಂಬುದನ್ನು ಮತ್ತು ಅವುಗಳ ಮೇಲೆ ಇರಬೇಕಾದ ಎಲ್ಲಾ ಚಿತ್ರಗಳನ್ನು ಅವರು ತಿಳಿದುಕೊಳ್ಳಲಿ. ಅದರ ನಿಯಮಗಳನ್ನು, ಕಟ್ಟಳೆಗಳನ್ನು ಅವರಿಗೆ ಬೋಧಿಸಿರಿ. ಅವರು ಎಲ್ಲಾ ಧರ್ಮಬೋಧನೆಗಳನ್ನು ಅನುಸರಿಸುವಂತೆ ಎಲ್ಲಾ ಕಟ್ಟಳೆಗಳನ್ನು ಬರೆದಿಡಿರಿ.