ಯೆಹೆಜ್ಕೇಲನು 11:21 - ಪರಿಶುದ್ದ ಬೈಬಲ್21 ಆಮೇಲೆ ದೇವರು ಹೇಳಿದ್ದೇನೆಂದರೆ: “ಆದರೆ ಈಗ ಅವರ ಹೃದಯವು ಆ ಹೊಲಸು ವಿಗ್ರಹಗಳಿಗೆ ಸೇರಿದ್ದಾಗಿದೆ. ಅವರು ಮಾಡಿದ ದುಷ್ಟತನಕ್ಕೆ ನಾನು ಅವರನ್ನು ಶಿಕ್ಷಿಸಲೇಬೇಕಾಗಿದೆ.” ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೆ ಯಾರ ಮನಸ್ಸು ತಮ್ಮ ಅಸಹ್ಯ ವಸ್ತುಗಳನ್ನೂ, ಅಸಹ್ಯ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದರೆ ಯಾರ ಮನಸ್ಸು ತಮ್ಮ ಅಸಹ್ಯವಸ್ತುಗಳನ್ನೂ ಅನಿಷ್ಟ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು, ಇದು ಸರ್ವೇಶ್ವರನಾದ ದೇವರ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆದರೆ ಯಾರ ಚಿತ್ತವು ತಮ್ಮ ಅಸಹ್ಯವಸ್ತುಗಳನ್ನೂ ಹೇಯವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು. ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಯಾರ ಹೃದಯವು ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ಅನುಸರಿಸುತ್ತದೋ, ನಾನು ಅವರ ದುರ್ಮಾರ್ಗವನ್ನು ಅವರ ತಲೆಗೇ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” ಅಧ್ಯಾಯವನ್ನು ನೋಡಿ |
ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನ್ನರ್ಪಿಸುತ್ತೀರಿ. ಆ ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನ್ನು ಬೆಂಕಿಯ ಮೂಲಕ ಆಹುತಿ ಮಾಡುತ್ತೀರಿ. ಈ ಹೊತ್ತಿನ ದಿನದ ತನಕವೂ ಆ ಹೊಲಸು ವಿಗ್ರಹಗಳ ಮೂಲಕ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನ್ನ ಬಳಿಗೆ ಬಂದು ನನ್ನ ಸಲಹೆಗಳನ್ನು ಕೇಳಲು ನಿಮ್ಮನ್ನು ನಾನು ಸ್ವಾಗತಿಸಬೇಕೋ? ನಾನು ಒಡೆಯನಾದ ಯೆಹೋವನು. ನನ್ನ ಜೀವದಾಣೆ, ನಾನು ನಿಮಗೆ ಉತ್ತರಿಸುವುದಿಲ್ಲ; ನಿಮಗೆ ಸಲಹೆಗಳನ್ನೂ ಕೊಡುವದಿಲ್ಲ.
ಇವೆಲ್ಲಾ ಯಾಕೆ ಸಂಭವಿಸಬೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತುಬಿಟ್ಟಿರುವೆ. ನೀನು ಕೆಟ್ಟಕೆಲಸಗಳನ್ನು ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿರುವೆ. ಆದ್ದರಿಂದ ಆ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಬೇಕಾಗಿ ಬಂತು. ನೀನು ಅದಕ್ಕಿಂತಲೂ ಭಯಂಕರಕೃತ್ಯ ನಡಿಸಲು ಯೋಜನೆ ಹಾಕಿಕೊಂಡಿರುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.
ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”