Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:24 - ಪರಿಶುದ್ದ ಬೈಬಲ್‌

24 ಆಗ ಆತ್ಮವು ನನ್ನನ್ನು ಆಕಾಶಕ್ಕೆ ಎತ್ತಿ ಬಾಬಿಲೋನ್ ದೇಶಕ್ಕೆ ಮರಳಿ ತಂದಿತು. ಸೆರೆ ಒಯ್ಯಲ್ಪಟ್ಟಿದ್ದ ಜನರ ಮಧ್ಯೆ ನಾನು ಬಂದೆನು. ದೇವಾರಾತ್ಮವು ಕೊಟ್ಟ ದರ್ಶನದಲ್ಲಿ ನಾನು ಆ ಎಲ್ಲಾ ವಿಷಯಗಳನ್ನು ಕಂಡೆನು. ಬಳಿಕ, ನಾನು ಕಂಡ ಆ ದರ್ಶನವು ನನ್ನನ್ನು ಬಿಟ್ಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯ ದರ್ಶನದ ಮುಖಾಂತರ ಕಸ್ದೀಯರ ದೇಶದಲ್ಲಿ ಸೆರೆಯಾದವರ ಬಳಿಗೆ ಕರೆತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆ ಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯದರ್ಶನದ ಮುಖಾಂತರ ಬಾಬಿಲೋನಿಯ ದೇಶದಲ್ಲಿ ಸೆರೆಯಾಗಿದ್ದವರ ಬಳಿಗೆ ಒಯ್ದು ತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಮೇಲೆ ದೇವರಾತ್ಮವು ಪರವಶನಾದ ನನ್ನನ್ನು ಎತ್ತಿ ದಿವ್ಯದರ್ಶನದ ಮುಖಾಂತರ ಕಸ್ದೀಯ ದೇಶದಲ್ಲಿ ಸೆರೆಯಾದವರ ಬಳಿಗೆ ಒಯ್ದುಕೊಂಡು ಬಂತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅನಂತರ ದೇವರಾತ್ಮರು, ದೇವರ ಆತ್ಮರಿಂದಾದ ದರ್ಶನದಲ್ಲಿ ನನ್ನನ್ನು ಬಾಬಿಲೋನಿಯರ ದೇಶಕ್ಕೆ ಸೆರೆಯವರ ಬಳಿಗೆ ಎತ್ತಿಕೊಂಡು ಹೋದರು. ಆಗ ನಾನು ನೋಡಿದ ದರ್ಶನವು ನನ್ನಿಂದ ಮೇಲೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:24
16 ತಿಳಿವುಗಳ ಹೋಲಿಕೆ  

ಆಗ ಆತ್ಮವು ನನ್ನನ್ನು ಯೆಹೋವನಾಲಯದ ಪೂರ್ವದ ಬಾಗಿಲಿಗೆ ಕೊಂಡೊಯ್ಯಿತು. ಬಾಗಿಲಿನ ಪ್ರವೇಶ ಸ್ಥಳದಲ್ಲಿ ನಾನು ಇಪ್ಪತ್ತೈದು ಮಂದಿ ಜನರನ್ನು ನೋಡಿದೆನು. ಅವರಲ್ಲಿ ಅಜ್ಜೂರನ ಮಗನಾದ ಯಾಜನ್ಯನನ್ನು, ಬೆನಾಯನ ಮಗನಾದ ಪೆಲತ್ಯನನ್ನು ನಾನು ನೋಡಿದೆನು. ಅವರಿಬ್ಬರು ಜನರಿಗೆ ನಾಯಕರಾಗಿದ್ದರು.


ಆಗ ಅದು ಕೈಯಂತಿದ್ದ ಒಂದನ್ನು ಚಾಚಿ ನನ್ನ ತಲೆಯ ಕೂದಲನ್ನು ಹಿಡಿದುಕೊಂಡಿತು. ಬಳಿಕ ಆತ್ಮವು ನನ್ನನ್ನು ಮೇಲಕ್ಕೆ ಎತ್ತಿ ದಿವ್ಯದರ್ಶನದಲ್ಲಿ ಜೆರುಸಲೇಮಿಗೆ ಕೊಂಡೊಯ್ಯಿತು. ಅದು ನನ್ನನ್ನು ಒಳದ್ವಾರಕ್ಕೆ ಕೊಂಡೊಯ್ಯಿತು. ಇದು ಉತ್ತರ ದಿಕ್ಕಿನಲ್ಲಿತ್ತು. ದೇವರನ್ನು ಸಿಟ್ಟಿಗೆಬ್ಬಿಸುವ ವಿಗ್ರಹವು ಈ ದ್ವಾರದ ಬಳಿ ಇತ್ತು.


ಆಗ ದೇವರಾತ್ಮವು ನನ್ನನ್ನು ಮೇಲಕ್ಕೆ ಎತ್ತಿತು. ಯೆಹೋವನ ಮಹಿಮೆಯು ತನ್ನ ಸ್ಥಳದಿಂದ ಮೇಲೇರಿದಾಗ ನನ್ನ ಹಿಂಭಾಗದಲ್ಲಿ ಮಹಾ ಗುಡುಗುವ ಶಬ್ದವನ್ನು ಕೇಳಿದೆನು. ಅದು ಯೆಹೋವನಿಗೆ ಆತನ ನಿವಾಸದಲ್ಲಿ ಸ್ತೋತ್ರವಾಗಲಿ ಎಂಬ ವಾಣಿಯೊಂದಿಗೆ ಕೇಳಿಸುತ್ತಿತ್ತು.


ಹೀಗೆ ಮೂರು ಸಾರಿ ಆಯಿತು. ಬಳಿಕ ಅವುಗಳನ್ನೆಲ್ಲ ಆಕಾಶಕ್ಕೆ ಹಿಂತೆಗೆದುಕೊಳ್ಳಲಾಯಿತು.


ಕೆಬಾರ್ ಕಾಲುವೆ ಪಕ್ಕದಲ್ಲಿದ್ದ ತೇಲ್ ಆಬೀಬ್‌ನಲ್ಲಿ ಸೆರೆಯಾಳುಗಳಾಗಿದ್ದ ಇಸ್ರೇಲ್ ಜನರ ಬಳಿಗೆ ನಾನು ಒಯ್ಯಲ್ಪಟ್ಟೆನು. ಅಲ್ಲಿದ್ದ ಜನರ ಮಧ್ಯೆ ನಾನು ಏಳು ದಿವಸ ಸ್ತಬ್ಧನಾಗಿದ್ದೆನು.


ನಾವು ಬಾಬಿಲೋನ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು ಚೀಯೋನನ್ನು ನೆನಸಿಕೊಳ್ಳುತ್ತಾ ಅತ್ತೆವು.


ಅವರು ಅವನಿಗೆ, “ನೋಡು, ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠ ಜನರಿದ್ದಾರೆ. ನಿನ್ನ ಒಡೆಯನನ್ನು ಹುಡುಕಲು ದಯವಿಟ್ಟು ಅವರಿಗೆ ಅವಕಾಶಕೊಡು. ಯೆಹೋವನ ಆತ್ಮವು ಎಲೀಯನನ್ನು ಮೇಲಕ್ಕೆ ಎತ್ತಿಕೊಂಡು ಹೋಗಿ ಯಾವುದಾದರೂ ಬೆಟ್ಟದ ಮೇಲಾಗಲಿ ಅಥವಾ ಕಣಿವೆಯಲ್ಲಾಗಲಿ ಬೀಳಿಸಿರಬೇಕು” ಎಂದು ಹೇಳಿದರು. ಆದರೆ ಎಲೀಷನು, “ಇಲ್ಲ, ಎಲೀಯನನ್ನು ಹುಡುಕಲು ಜನರನ್ನು ಕಳುಹಿಸಬೇಡಿ!” ಎಂದು ಉತ್ತರಿಸಿದನು.


ಆಮೇಲೆ ದೇವರು ಆ ಸ್ಥಳದಿಂದ ಹೊರಟುಹೋದನು.


ದೇವರು ಅಬ್ರಹಾಮನೊಡನೆ ಮಾತಾಡುವುದನ್ನು ಮುಗಿಸಿದ ಮೇಲೆ ಮೇಲೋಕಕ್ಕೆ ಹೊರಟುಹೋದನು.


ಅವರು ನೀರಿನಿಂದ ಮೇಲಕ್ಕೆ ಬಂದಾಗ ಪ್ರಭುವಿನ ಆತ್ಮನಿಂದ ಫಿಲಿಪ್ಪನು ಎತ್ತಲ್ಪಟ್ಟನು. ಅವನು ಫಿಲಿಪ್ಪನನ್ನು ಮತ್ತೆಂದೂ ನೋಡಲಿಲ್ಲ. ಅವನು ಬಹಳ ಸಂತೋಷದಿಂದ ತನ್ನ ಪ್ರಯಾಣವನ್ನು ಮುಂದುವರಿಸಿದನು.


ಕಸ್ದೀಯ ಸಂಪತ್ತನ್ನೆಲ್ಲ ಶತ್ರು ಕೊಳ್ಳೆಹೊಡೆಯುವನು. ಶತ್ರು ಸೈನಿಕರು ತಮಗೆ ಬೇಕಾದದ್ದೆಲ್ಲವನ್ನು ತೆಗೆದುಕೊಳ್ಳುವರು” ಇದು ಯೆಹೋವನ ನುಡಿ.


ನಾನು ಯಾಜಕನಾಗಿದ್ದೇನೆ. ನಾನು ಬೂಜಿಯ ಮಗನಾದ ಯೆಹೆಜ್ಕೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೇವದರ್ಶನವಾಯಿತು. ಇದು ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರ್ಷದ ನಾಲ್ಕನೆ ತಿಂಗಳಿನ ಐದನೆಯ ದಿನದಲ್ಲಿ ಯೆಹೋವನ ವಾಕ್ಯವು ಯೆಹೆಜ್ಕೇಲನಿಗೆ ಬಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು.


ಯೆಹೋವನ ಶಕ್ತಿಯು ನನ್ನ ಮೇಲೆ ಬಂದಿತು. ಯೆಹೋವನ ಆತ್ಮವು ನನ್ನನ್ನು ನಗರದೊಳಗಿಂದ ಎತ್ತಿಕೊಂಡು ತಗ್ಗಿನ ಮಧ್ಯಕ್ಕೆ ಕೊಂಡೊಯ್ದನು. ಆ ಬಯಲಿನ ತುಂಬಾ ಒಣಗಿದ ಎಲುಬುಗಳು ತುಂಬಿದ್ದವು.


ಆಗ ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಪ್ರಾಕಾರಕ್ಕೆ ತಂದಿತು. ಯೆಹೋವನ ಮಹಿಮೆಯು ಆಲಯವನ್ನು ತುಂಬಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು