Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:6 - ಪರಿಶುದ್ದ ಬೈಬಲ್‌

6 ನೀನು ಈ ನಗರದಲ್ಲಿ ಅನೇಕ ಜನರನ್ನು ಕೊಲೆ ಮಾಡಿರುತ್ತೀ. ರಸ್ತೆಗಳನ್ನು ಹೆಣಗಳಿಂದ ತುಂಬಿಸಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿಮಾಡಿ ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ಈ ಪಟ್ಟಣದಲ್ಲಿ ನರಹತ್ಯೆಯನ್ನು ಹೆಚ್ಚೆಚ್ಚಾಗಿ ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:6
20 ತಿಳಿವುಗಳ ಹೋಲಿಕೆ  

“ಸೆರೆಯವರಿಗಾಗಿ ಸರಪಣಿಗಳನ್ನು ಮಾಡು. ದೇಶವು ಕೊಲೆಯ ಅಪರಾಧಗಳಿಂದ ತುಂಬಿದೆ. ಪಟ್ಟಣದಲ್ಲಿ ಹಿಂಸೆಯು ತುಂಬಿದೆ.


“ಜೆರುಸಲೇಮಿನ ನಾಯಕರು ತಾನು ಹಿಡಿದ ಪ್ರಾಣಿಯನ್ನು ತಿನ್ನುವ ತೋಳಕ್ಕೆ ಸಮಾನರಾಗಿದ್ದಾರೆ. ಅವರು ಧನಿಕರಾಗುವದಕ್ಕಾಗಿ ಜನರನ್ನು ಹಿಡಿದು ಕೊಲ್ಲುವರು.


ಜೆರುಸಲೇಮಿನಲ್ಲಿ ನೀವು ಕೊಲೆ ಮಾಡುವದಕ್ಕಾಗಿ ಹಣ ತೆಗೆದುಕೊಳ್ಳುತ್ತೀರಿ. ಸಾಲಕೊಟ್ಟು ಅದಕ್ಕೆ ಬಡ್ಡಿ ತೆಗೆದುಕೊಳ್ಳುತ್ತೀರಿ. ಸ್ವಲ್ಪ ಹಣ ಮಾಡುವದಕ್ಕಾಗಿ ನಿಮ್ಮ ನೆರೆಯವನನ್ನೆ ಮೋಸ ಮಾಡುತ್ತೀರಿ. ನನ್ನನ್ನು ನೀವು ಮರೆತುಬಿಟ್ಟಿರುವಿರಿ.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.


ಜೆರುಸಲೇಮ್ ನಿವಾಸಿಗಳು ಇತರರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಾರೆ. ಆ ನಿರಪರಾಧಿ ಜನರನ್ನು ಹತ್ಯೆ ಮಾಡಲು ಹಾಗೆ ಮಾಡುತ್ತಾರೆ. ಆ ಜನರು ಬೆಟ್ಟದ ಮೇಲೆ ಹೋಗಿ ಸುಳ್ಳುದೇವರುಗಳನ್ನು ಸನ್ಮಾನಿಸುವುದಕ್ಕಾಗಿ ಊಟಮಾಡುತ್ತಾರೆ. “‘ಜೆರುಸಲೇಮಿನ ಜನರು ಎಲ್ಲಾ ಬಗೆಯ ಲೈಂಗಿಕ ಪಾಪಗಳನ್ನು ಮಾಡುತ್ತಾರೆ.


“ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.


“ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು.


ಜೆರುಸಲೇಮಿನ ನಾಯಕರು ಗರ್ಜಿಸುವ ಸಿಂಹದಂತೆ ಇದ್ದಾರೆ, ಅವರ ನ್ಯಾಯಾಧಿಪತಿಗಳು ರಾತ್ರಿ ಕಾಲದಲ್ಲಿ ಕುರಿಗಳ ಮೇಲೆ ಬೀಳುವ ಹಸಿದ ತೋಳಗಳಂತಿದ್ದಾರೆ. ಬೆಳಗಾಗಲು, ಏನೂ ಉಳಿಯುವುದಿಲ್ಲ.


ನಾನು ಹೇಳುವುದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ಈ ದೇಶದಲ್ಲಿ ಒಳ್ಳೆಯ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ.


ಜನರನ್ನು ಕೊಲೆ ಮಾಡಿ ಚೀಯೋನನ್ನು ಕಟ್ಟುತ್ತೀರಿ. ಜನರನ್ನು ಮೋಸಮಾಡಿ ಜೆರುಸಲೇಮನ್ನು ಕಟ್ಟುತ್ತೀರಿ.


ಅದಕ್ಕೆ ದೇವರು, “ಇಸ್ರೇಲ್ ಮತ್ತು ಯೆಹೂದ ಜನರ ದೋಷವು ಬಹಳ ಹೆಚ್ಚಾಗಿದೆ. ಈ ದೇಶದಲ್ಲಿ ಎಲ್ಲೆಲ್ಲಿಯೂ ಕೊಲೆಗಳು ನಡೆಯುತ್ತಿವೆ. ಈ ನಗರವು ಅಪರಾಧಗಳಿಂದ ತುಂಬಿಹೋಗಿದೆ. ಯಾಕೆಂದರೆ ಜನರು ಹೀಗೆಂದುಕೊಳ್ಳುತ್ತಿದ್ದಾರೆ, ‘ಯೆಹೋವನು ಈ ದೇಶವನ್ನು ಬಿಟ್ಟುಹೋಗಿದ್ದಾನೆ. ನಾವು ಮಾಡುತ್ತಿರುವಂಥದ್ದನ್ನು ಅವನು ನೋಡುವುದಿಲ್ಲ.’


ಜೆರುಸಲೇಮಿನ ಪ್ರವಾದಿಗಳು ಪಾಪ ಮಾಡಿದ್ದರಿಂದಲೇ ಇದು ಸಂಭವಿಸಿತು. ಜೆರುಸಲೇಮಿನ ಯಾಜಕರು ದುಷ್ಕೃತ್ಯಗಳನ್ನು ಮಾಡಿದ್ದದರಿಂದಲೇ ಇದು ಸಂಭವಿಸಿತು. ಆ ಜನರು ಜೆರುಸಲೇಮ್ ಪಟ್ಟಣದಲ್ಲಿ ಒಳ್ಳೆಯ ಜನರ ರಕ್ತವನ್ನು ಸುರಿಸಿದ್ದರು.


ನೀವು ಕದಿಯುವುದಿಲ್ಲವೇ? ಕೊಲೆಗಳನ್ನು ಮಾಡುವುದಿಲ್ಲವೇ? ನೀವು ವ್ಯಭಿಚಾರ ಮಾಡುವುದಿಲ್ಲವೇ? ನೀವು ಅನ್ಯರ ಮೇಲೆ ಸುಳ್ಳು ದೋಷಾರೋಪಣೆ ಮಾಡುವುದಿಲ್ಲವೇ? ನೀವು ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅನ್ಯದೇವರುಗಳ ಅನುಯಾಯಿಗಳಾಗಿಲ್ಲವೇ?


ಅಪರಿಚಿತರೊಂದಿಗೂ ನೀವು ನ್ಯಾಯಬದ್ಧವಾಗಿ ವರ್ತಿಸಬೇಕು. ವಿಧವೆಯರಿಗೆ ಮತ್ತು ಅನಾಥರಿಗೆ ನೀವು ಒಳ್ಳೆಯದನ್ನು ಮಾಡಬೇಕು. ನಿರ್ದೋಷಿಗಳ ಕೊಲೆ ಮಾಡಬಾರದು; ಅನ್ಯ ದೇವರುಗಳನ್ನು ಸೇವಿಸಬಾರದು. ಏಕೆಂದರೆ ಅವುಗಳು ನಿಮ್ಮ ಜೀವನವನ್ನು ಹಾಳುಮಾಡುತ್ತವೆ.


ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.


“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”


ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಈ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು