ಯೆಹೆಜ್ಕೇಲನು 11:8 - ಪರಿಶುದ್ದ ಬೈಬಲ್8 ನೀನು ಖಡ್ಗಕ್ಕೆ ಭಯಪಡುವವನಾದರೂ ನಾನು ನಿನ್ನ ಮೇಲೆ ಖಡ್ಗವನ್ನು ತರುವೆನು. ನಮ್ಮ ಒಡೆಯನಾದ ಯೆಹೋವನು ಈ ಮಾತುಗಳನ್ನು ನುಡಿದಿರುವದರಿಂದ ಇದು ನಡೆಯುವುದು.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು’” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು; ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀವು ಖಡ್ಗಕ್ಕೆ ಭಯಪಟ್ಟಿರಿ. ನಾನು ನಿಮ್ಮ ಮೇಲೆ ಒಂದು ಖಡ್ಗವನ್ನು ತರುತ್ತೇನೆ. ಇದು ಸಾರ್ವಭೌಮ ಯೆಹೋವ ದೇವರ ನುಡಿ. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಅವರ ಉಪಾಯಗಳನ್ನೇ ಬಳಸಿಕೊಳ್ಳಲು ನಿರ್ಧರಿಸಿದೆನು. ಅವರು ಬಹು ಭಯಪಡುವ ವಸ್ತುಗಳಿಂದಲೇ ಅವರನ್ನು ಶಿಕ್ಷಿಸಲು ತೀರ್ಮಾನಿಸಿದೆನು. ಎಕೆಂದರೆ ನಾನು ಅವರನ್ನು ಕರೆದರೂ ಅವರು ಕಿವಿಗೊಡಲಿಲ್ಲ. ನಾನು ಅವರೊಂದಿಗೆ ಮಾತಾಡಿದರೂ ಅವರು ಕೇಳಲಿಲ್ಲ. ಆದ್ದರಿಂದ ನಾನು ಅವರಿಗೆ ಅದನ್ನೇ ಮಾಡುವೆನು. ನಾನು ಯಾವದನ್ನು ಕೆಟ್ಟದೆಂದು ಪರಿಗಣಿಸಿದ್ದೆನೋ ಅದನ್ನೇ ಅವರು ಮಾಡಿದರು. ನಾನು ಇಷ್ಟಪಡದ ಸಂಗತಿಗಳನ್ನು ಅವರು ಮಾಡಿದರು.”