ಯೆಹೆಜ್ಕೇಲನು 12:10 - ಪರಿಶುದ್ದ ಬೈಬಲ್10 ಅವರ ಒಡೆಯನಾದ ಯೆಹೋವನು ಇದನ್ನೆಲ್ಲಾ ಹೇಳಿದನು ಎಂದು ಅವರಿಗೆ ತಿಳಿಸು. ಈ ಸಂದೇಶವು ಜೆರುಸಲೇಮಿನ ನಾಯಕರ ಮತ್ತು ಅಲ್ಲಿ ವಾಸಿಸುವ ಇಸ್ರೇಲ್ ಜನರೆಲ್ಲರ ಕುರಿತಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀನು ಅವರಿಗೆ ಹೀಗೆ ನುಡಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಈ ಹೊರೆಯು ಯೆರೂಸಲೇಮಿನಲ್ಲಿರುವ ರಾಜನಿಗೂ, ಅಲ್ಲಿನ ಇಸ್ರಾಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೀನು ಅವರಿಗೆ ಹೀಗೆ ನುಡಿ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಈ ಹೊರೆ ಜೆರುಸಲೇಮಿನಲ್ಲಿರುವ ರಾಜನಿಗೂ ಅಲ್ಲಿನ ಇಸ್ರಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀನು ಅವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಈ ಹೊರೆಯು ಯೆರೂಸಲೇವಿುನಲ್ಲಿರುವ ಪ್ರಭುವಿಗೂ ಅಲ್ಲಿನ ಇಸ್ರಾಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಅವರಿಗೆ ನೀನು ಹೀಗೆ ಹೇಳಬೇಕೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ಈ ಪ್ರವಾದನೆಯು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ, ಅದರಲ್ಲಿರುವ ಸಮಸ್ತ ಇಸ್ರಾಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ. ಅಧ್ಯಾಯವನ್ನು ನೋಡಿ |
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’