ಯೆಹೆಜ್ಕೇಲನು 12:11 - ಪರಿಶುದ್ದ ಬೈಬಲ್11 ‘ನೀನು ಅವರಿಗೆ ಹೀಗೆ ಹೇಳು: ನಾನು ನಿಮಗೆ ಒಂದು ಸೂಚನೆಯಾಗಿದ್ದೇನೆ. ನಾನು ಮಾಡಿದ ಸೂಚಕಕಾರ್ಯ ಖಂಡಿತವಾಗಿ ನಿಮಗೆ ಸಂಭವಿಸುವುದು. ನೀವು ದೂರದೇಶಕ್ಕೆ ಸೆರೆಯಾಳುಗಳಾಗಿ ಹೋಗುವಿರಿ.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದನ್ನೂ ನುಡಿ, ‘ನಾನು ನಿಮಗೆ ಗುರುತಾಗಿದ್ದೇನೆ; ನಾನು ಮಾಡಿದಂತೆಯೇ ಅವರಿಗಾಗುವುದು; ಅವರು ವಲಸೆಯಾಗಿ ಸೆರೆ ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇದನ್ನೂ ನುಡಿ, - ‘ನಾನು ನಿಮಗೆ ಮುಂಗುರುತಾಗಿದ್ದೇನೆ. ನಾನು ಮಾಡಿದಂತೆಯೇ ಅವರಿಗಾಗುವುದು: ಅವರು ವಲಸೆಯಾಗಿ ಸೆರೆಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇದನ್ನೂ ನುಡಿ - ನಾನು ನಿಮಗೆ ಮುಂಗುರುತಾಗಿದ್ದೇನೆ; ನಾನು ಮಾಡಿದಂತೆಯೇ ಅವರಿಗಾಗುವದು; ಅವರು ವಲಸೆಯಾಗಿ ಸೆರೆಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರಿಗೆ ಹೀಗೆ ಹೇಳು, ‘ನಾನು ನಿಮಗೆ ಗುರುತಾಗಿದ್ದೇನೆ.’ “ನಾನು ಮಾಡಿದ ಹಾಗೆ ಅವರಿಗೆ ಮಾಡಲಾಗುವುದು. ಅವರು ಗುಲಾಮರಾಗಿ ಸೆರೆಗೆ ಹೋಗುವರು. ಅಧ್ಯಾಯವನ್ನು ನೋಡಿ |
‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.
ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡುಬರುವೆ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಬ್ರದಲ್ಲೇ ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ.