Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:13 - ಪರಿಶುದ್ದ ಬೈಬಲ್‌

13 ಅವನು ತಪ್ಪಿಸಿಕೊಳ್ಳಲು ಪ್ರಯತ್ನ ಮಾಡುವನು. ಆದರೆ, ನಾನು (ಯೆಹೋವನು) ಅವನನ್ನು ಹಿಡಿಯುವೆನು. ಅವನು ನನ್ನ ಬಲೆಯೊಳಗೆ ಬೀಳುವನು. ನಾನು ಅವನನ್ನು ಕಸ್ದೀಯರ ದೇಶವಾದ ಬಾಬಿಲೋನಿಗೆ ತರುವೆನು. ಅವನು ಆ ದೇಶವನ್ನು ನೋಡುವುದಿಲ್ಲ; ಅಲ್ಲದೆ ಅವನು ಅಲ್ಲಿ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯರ ದೇಶವಾದ ಬಾಬಿಲೋನಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು: ಬಾಬಿಲೋನಿಯಾ ದೇಶದ ಬಾಬಿಲೋನ್ ನಗರಕ್ಕೆ ಅವನನ್ನು ಒಯ್ಯುವೆನು; ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರ್ಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯ ದೇಶದ ಬಾಬೆಲಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ಬಲೆಯನ್ನೂ ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯರ ನಾಡಾದ ಬಾಬಿಲೋನಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:13
24 ತಿಳಿವುಗಳ ಹೋಲಿಕೆ  

ಅವರು ಆ ದೇಶಗಳಿಗೆ ಹೋಗುವಾಗ ನಾನು ಅವರನ್ನು ಉರುಲಿನೊಳಗೆ ಸಿಕ್ಕಿಸುವೆನು. ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳ ರೀತಿಯಲ್ಲಿ ಅವರನ್ನು ಕೆಳಗೆ ಬೀಳಿಸುವೆನು. ಅವರು ಮಾಡಿದ ಒಪ್ಪಂದಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು.


ನಾನು ಅವನಿಗೆ ಉರುಲನ್ನೊಡ್ಡುವೆನು; ಅವನು ಅದರೊಳಗೆ ಸಿಕ್ಕಿಕೊಳ್ಳುವನು. ನಾನು ಅವನನ್ನು ಬಾಬಿಲೋನಿಗೆ ತಂದು ಅಲ್ಲಿ ಶಿಕ್ಷಿಸುವೆನು. ಯಾಕೆಂದರೆ ಅವನು ನನಗೆ ಅಪನಂಬಿಗಸ್ತನಾದನು.


ಅನಂತರ ನೆಬೂಕದ್ನೆಚ್ಚರನು ಚಿದ್ಕೀಯನ ಕಣ್ಣುಗಳನ್ನು ಕೀಳಿಸಿದನು. ಕಂಚಿನ ಸರಪಳಿಗಳಿಂದ ಬಿಗಿಸಿ ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಅನೇಕರನ್ನು ನಾನು ಒಟ್ಟುಗೂಡಿಸಿದ್ದೇನೆ. ಈಗ ನನ್ನ ಬಲೆಯನ್ನು ನಿನ್ನ ಮೇಲೆ ಬೀಸುವೆನು. ಆಗ ಅವರು ನಿನ್ನನ್ನು ಒಳಸೆಳೆಯುವರು.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ಈ ಹೊಸ ರಾಜನು ಬಾಬಿಲೋನಿನಲ್ಲಿ ಸಾಯುವನು. ಈ ಮನುಷ್ಯನನ್ನು ಯೆಹೂದದ ರಾಜನನ್ನಾಗಿ ಮಾಡಿದ ರಾಜ ನೆಬೂಕದ್ನೆಚ್ಚರನ ನಾಡಿನಲ್ಲಿ ಇವನು ಸಾಯುವನು. ಈ ಮನುಷ್ಯನು ಆ ರಾಜನೊಡನೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿ ಆ ರಾಜನೊಡನೆ ಮಾಡಿಕೊಂಡಿದ್ದ ಒಪ್ಪಂದವನ್ನು ಮುರಿದು ಹಾಕಿದನು.


ಆ ದಿವಸವು ಭೂನಿವಾಸಿಗಳೆಲ್ಲರಿಗೂ ವಿಸ್ಮಯಕರವಾಗಿರುವುದು.


ನಾವು ಭಯಗೊಂಡಿದ್ದೇವೆ. ನಾವು ಗುಂಡಿಯೊಳಗೆ ಬಿದ್ದಿದ್ದೇವೆ. ನಮಗೆ ಬಹಳವಾಗಿ ನೋವಾಗಿದೆ! ನಾವು ಮುರಿದುಹೋದವರಾಗಿದ್ದೇವೆ!”


ಯೆಹೋವನು ಮೇಲಿನಿಂದ ಬೆಂಕಿಯನ್ನು ಕಳಿಸಿದ್ದಾನೆ. ಆ ಬೆಂಕಿ ನನ್ನ ಎಲುಬುಗಳ ಆಳಕ್ಕೆ ಇಳಿದುಹೋಗಿದೆ. ಆತನು ನನ್ನ ಪಾದಗಳಿಗೆ ಬಲೆಯನ್ನು ಒಡ್ಡಿದ್ದಾನೆ. ಆತನು ನನ್ನನ್ನು ಸುತ್ತಲು ತಿರುಗಿಸಿದ್ದಾನೆ. ಆತನು ನನ್ನನ್ನು ಹಾಳುಭೂಮಿಯನ್ನಾಗಿ ಮಾಡಿದ್ದಾನೆ. ನಾನು ಸದಾ ಬಳಲುತ್ತಿದ್ದೇನೆ.


ಬಾಬಿಲೋನೇ, ನಾನು ನಿನಗಾಗಿ ಒಂದು ಬಲೆಯನ್ನು ಒಡ್ಡಿದೆ. ನೀನು ತಿಳಿಯದೆ ಸಿಕ್ಕಿಹಾಕಿಕೊಂಡೆ. ನೀನು ಯೆಹೋವನ ವಿರುದ್ಧ ಹೋರಾಡಿದೆ. ಆದ್ದರಿಂದ ನಿನ್ನನ್ನು ಹುಡುಕಿ ವಶಪಡಿಸಿಕೊಳ್ಳಲಾಯಿತು.


ಚಿದ್ಕೀಯನೇ, ನೀನು ಬಾಬಿಲೋನಿನ ರಾಜನಿಂದ ತಪ್ಪಿಸಿಕೊಳ್ಳಲಾರೆ. ನಿಶ್ಚಿತವಾಗಿ ನಿನ್ನನ್ನು ಹಿಡಿದು ಅವನಿಗೆ ಒಪ್ಪಿಸಲಾಗುವುದು. ಬಾಬಿಲೋನಿನ ರಾಜನನ್ನು ನೀನು ಪ್ರತ್ಯಕ್ಷವಾಗಿ ನೋಡುವೆ. ಅವನು ನಿನ್ನೊಂದಿಗೆ ಮುಖಾಮುಖಿಯಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಹೋಗುವೆ.


ಆತನು ಆ ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು. ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ.


ಆದರೆ ನನ್ನನ್ನು ದೋಷಿಯೋ ಎಂಬಂತೆ ಮಾಡಿದಾತನು ದೇವರೇ. ಆತನು ನನಗೆ ವಿರೋಧವಾಗಿ ಬಲೆಯನ್ನು ಒಡ್ಡಿದ್ದಾನೆ.


ದೇವರೇ, ನೀನು ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದೆ. ನೀನು ನಮಗೆ ಭಾರವಾದ ಹೊರೆಗಳನ್ನು ಹೊರಿಸಿದೆ;


“ಆದರೆ ಯೆಹೂದದ ರಾಜನಾದ ಚಿದ್ಕೀಯನು ತಿನ್ನಲು ಬಾರದಷ್ಟು ಕೊಳೆತ ಅಂಜೂರದಂತಾಗುವನು. ಚಿದ್ಕೀಯನೂ ಅವನ ಹಿರಿಯ ಅಧಿಕಾರಿಗಳೂ ಜೆರುಸಲೇಮಿನಲ್ಲಿ ಅಳಿದುಳಿದ ಜನರೂ ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದದ ಜನರೂ ಕೊಳೆತ ಅಂಜೂರದಂತಾಗುವರು.


ಬಾಬಿಲೋನಿನ ರಾಜನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು. ನಾನು ಅವನನ್ನು ದಂಡಿಸುವವರೆಗೆ ಚಿದ್ಕೀಯನು ಅಲ್ಲಿರುವನು. ನೀವು ಕಸ್ದೀಯರೊಡನೆ ಯುದ್ಧ ಮಾಡಿದರೂ ನಿಮಗೆ ಜಯವಾಗದು.’” ಇದು ಯೆಹೋವನ ನುಡಿ.


ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ತನ್ನ ಅರಮನೆಗೆ ಕರೆತರಿಸಿದನು. ಚಿದ್ಕೀಯನು ಯೆರೆಮೀಯನೊಂದಿಗೆ ರಹಸ್ಯವಾಗಿ ಮಾತನಾಡಿ, “ಯೆಹೋವನಿಂದ ಏನಾದರೂ ಸಂದೇಶವಿದೆಯೊ?” ಎಂದು ಕೇಳಿದನು. “ಹೌದು, ಯೆಹೋವನಿಂದ ಒಂದು ಸಂದೇಶವಿದೆ. ಚಿದ್ಕೀಯನೇ, ನಿನ್ನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು” ಎಂದು ಯೆರೆಮೀಯನು ಉತ್ತರಿಸಿದನು.


ರಾತ್ರಿಕಾಲದಲ್ಲಿ ಚೀಲವನ್ನು ಹೆಗಲಿಗೇರಿಸಿ ಹೊರಗೆ ನಡಿ. ನೀನು ನೆಲವನ್ನು ನೋಡಲಾಗದಂತೆ ನಿನ್ನ ಮುಖವನ್ನು ಮುಚ್ಚಿಕೋ. ಇದೆಲ್ಲಾ ಮಾಡುವಾಗ ಜನರು ನಿನ್ನನ್ನು ನೋಡುತ್ತಿರಬೇಕು. ಯಾಕೆಂದರೆ ನಿನ್ನನ್ನು ನಾನು ಇಸ್ರೇಲರಿಗೆ ಒಂದು ನಿದರ್ಶನವಾಗಿ ಉಪಯೋಗಿಸುತ್ತಿದ್ದೇನೆ.”


ಅವನಿಗಾಗಿ ಹಗ್ಗವು ನೆಲದ ಮೇಲೆ ಅಡಗಿಕೊಂಡಿರುತ್ತದೆ. ಅವನ ದಾರಿಯಲ್ಲಿ ಉರುಲು ಕಾದುಕೊಂಡಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು