ಯೆಹೆಜ್ಕೇಲನು 12:15 - ಪರಿಶುದ್ದ ಬೈಬಲ್15 ನಾನೇ ಯೆಹೋವನೆಂದು ಆಗ ಜನರು ತಿಳಿದುಕೊಳ್ಳುವರು; ಯಾಕೆಂದರೆ ನಾನು ಅವರನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿದ್ದೇನೆ ಮತ್ತು ಬೇರೆ ದೇಶಗಳಿಗೆ ಓಡಿಸಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು ಅನ್ಯದೇಶಗಳಲ್ಲಿ ಚೆಲ್ಲಾಪಿಲ್ಲಿ ಮಾಡುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು, ಅನ್ಯದೇಶಗಳಲ್ಲಿ ಚಲ್ಲಾಪಿಲ್ಲಿ ಮಾಡುವಾಗ ನಾನೇ ಸರ್ವೇಶ್ವರ ಎಂದು ಅವನಿಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು ಅನ್ಯದೇಶಗಳಲ್ಲಿ ಚಲ್ಲಾಪಿಲ್ಲಿಮಾಡುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ, ದೇಶಗಳ ಮೇಲೆ ಚೆಲ್ಲಾಪಿಲ್ಲಿಮಾಡುವಾಗ, ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿ |
ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.