ಯೆಹೆಜ್ಕೇಲನು 12:3 - ಪರಿಶುದ್ದ ಬೈಬಲ್3 ಆದ್ದರಿಂದ ನರಪುತ್ರನೇ, ನಿನ್ನ ಚೀಲಗಳನ್ನು ತುಂಬಿಸಿ ಸೆರೆಯಾಳಾಗಿ ಹೋಗುವವನಂತೆ ನಟಿಸು. ನೀನು ಹಗಲಲ್ಲಿ ಹೋಗುವುದನ್ನು ಜನರು ನೋಡಲಿ. ಸೆರೆಯಾಳಿನಂತೆ ಅವರ ಕಣ್ಣೆದುರಿನಲ್ಲೆ ನಿನ್ನ ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗು. ಒಂದುವೇಳೆ ಅವರು ತಾವು ದಂಗೆಕೋರರೆಂದು ತಿಳಿದುಕೊಳ್ಳಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿ ವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೇ ಹೊರಡು. ಅಂದರೆ, ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು: ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನರಪುತ್ರನೇ, ವಲಸೆಹೋಗುವದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು, ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು; ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ಮನಸ್ಸಿಗೆ ತಂದಾರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ಆದ್ದರಿಂದ ಮನುಷ್ಯಪುತ್ರನೇ, ನೀನು ಸಲಕರಣೆಗಳನ್ನು ಸಿದ್ಧಮಾಡಿ, ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿಹೋಗು, ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿಗಳಾದವರ ಮನೆತನದವರಾದರೂ, ಒಂದು ವೇಳೆ ಅರ್ಥಮಾಡಿಕೊಳ್ಳಬಹುದು. ಅಧ್ಯಾಯವನ್ನು ನೋಡಿ |
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’
ಅವರು ತಮ್ಮ ಎಲ್ಲಾ ಪಾಪಗಳ ನಿಮಿತ್ತ ನಾಚಿಕೆಪಡುವರು. ಆಲಯದ ವಿನ್ಯಾಸವನ್ನು ಅವರು ತಿಳಿದುಕೊಳ್ಳಲಿ. ಅದು ಹೇಗೆ ಕಟ್ಟಲ್ಪಡಬೇಕೆಂಬುದನ್ನು, ಪ್ರವೇಶ ದ್ವಾರಗಳು ಮತ್ತು ಹೊರಗೆ ಹೋಗುವ ಬಾಗಿಲುಗಳು ಎಲ್ಲಿರಬೇಕೆಂಬುದನ್ನು ಮತ್ತು ಅವುಗಳ ಮೇಲೆ ಇರಬೇಕಾದ ಎಲ್ಲಾ ಚಿತ್ರಗಳನ್ನು ಅವರು ತಿಳಿದುಕೊಳ್ಳಲಿ. ಅದರ ನಿಯಮಗಳನ್ನು, ಕಟ್ಟಳೆಗಳನ್ನು ಅವರಿಗೆ ಬೋಧಿಸಿರಿ. ಅವರು ಎಲ್ಲಾ ಧರ್ಮಬೋಧನೆಗಳನ್ನು ಅನುಸರಿಸುವಂತೆ ಎಲ್ಲಾ ಕಟ್ಟಳೆಗಳನ್ನು ಬರೆದಿಡಿರಿ.